ಶಸ್ತ್ರಚಿಕಿತ್ಸೆಯ ನಂತರ ಆಂಬ್ಯುಲೆನ್ಸ್‌ನಲ್ಲಿ ಮಲಗಿಕೊಂಡು ಪರೀಕ್ಷೆ ಬರೆದ ಎಸೆಸೆಲ್ಸಿ ವಿದ್ಯಾರ್ಥಿನಿ

10 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆಂಬ್ಯುಲೆನ್ಸ್‌ನಲ್ಲಿ ಮಲಗಿಕೊಂಡು ಪರೀಕ್ಷೆ ಬರೆದಿರುವ ಘಟನೆ ಮುಂಬಯಿಯ ಬಾಂದ್ರಾದಲ್ಲಿ ನಡೆದಿದೆ.

ಶಸ್ತ್ರಚಿಕಿತ್ಸೆಯ ನಂತರ ಆಂಬ್ಯುಲೆನ್ಸ್‌ನಲ್ಲಿ ಮಲಗಿಕೊಂಡು ಪರೀಕ್ಷೆ ಬರೆದ ಎಸೆಸೆಲ್ಸಿ ವಿದ್ಯಾರ್ಥಿನಿ
ವಿದ್ಯಾರ್ಥಿನಿ ಮುಬಾಶಿರಾ ಸಾದಿಕ್ ಸಯ್ಯದ್ Image Credit source: Anandabazar
Follow us
ಅಕ್ಷತಾ ವರ್ಕಾಡಿ
|

Updated on:Mar 21, 2023 | 11:59 AM

ಮುಂಬಯಿ: 10 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆಂಬ್ಯುಲೆನ್ಸ್‌ನಲ್ಲಿ ಮಲಗಿಕೊಂಡು ಪರೀಕ್ಷೆ ಬರೆದಿರುವ ಘಟನೆ ಮುಂಬಯಿಯ ಬಾಂದ್ರಾದಲ್ಲಿ ನಡೆದಿದೆ. ಶುಕ್ರವಾರ ಒಂದು ಪರೀಕ್ಷೆ ಬರೆದು ಮುಗಿಸಿ ಬರುತ್ತಿದ್ದ ಅಂಜುಮನ್-ಐ-ಇಸ್ಲಾಂ ಶಾಲೆಯ ವಿದ್ಯಾರ್ಥಿನಿ ಮುಬಾಶಿರಾ ಸಾದಿಕ್ ಸಯ್ಯದ್ ರಸ್ತೆ ದಾಟುತ್ತಿದ್ದಾಗ ಹಿಲ್ ರೋಡ್‌ನ ಸೇಂಟ್ ಜೋಸೆಫ್ ಕಾನ್ವೆಂಟ್ ಬಳಿ ಮಧ್ಯಾಹ್ನ 1.30 ರ ಸುಮಾರಿಗೆ ಕಾರು ಡಿಕ್ಕಿ . ಆಕೆಯ ಎಡ ಪಾದಕ್ಕೆ ಗಂಭೀರವಾದ ಗಾಯಗಳಾಗಿದ್ದು, ಅದೇ ದಿನ ಆಕೆಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಅಪಘಾತ ಪರೀಕ್ಷಾ ಕೇಂದ್ರವಾದ ಸೇಂಟ್ ಸ್ಟಾನಿಸ್ಲಾಸ್ ಹೈಸ್ಕೂಲ್ ಬಳಿ ಸಂಭವಿಸಿದ್ದು, ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿದ್ದೇವೆ, ಅವರು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಾದ ಸಂದೀಪ್ ಕರ್ಮಾಲೆ ಹೇಳಿಕೆ ನೀಡಿದ್ದಾರೆ.

ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದ ಮುಬಾಶಿರಾ ಶಸ್ತ್ರಚಿಕಿತ್ಸೆಗೂ ಮುನ್ನವೇ ಮುಂಬರುವ ಪರೀಕ್ಷೆಯನ್ನು ನಾನು ಬರೆಯಲೇ ಬೇಕು ಎಂದು ಶಾಲಾ ಶಿಕ್ಷಕರಿಗೆ ಹೇಳಿದರು. ನಂತರ ಶಾಲೆಯ ಆಡಳಿತ ಮಂಡಳಿ ಆಯ್ಕೆಗೆ ಪರೀಕ್ಷೆ ಬರೆಯಲು ಅನುಮತಿ ನೀಡಿದೆ. ವಿದ್ಯಾರ್ಥಿ ಮುಬಾಶಿರಾ ಕುಟುಂಬವು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಶಾಲಾ ಶಿಕ್ಷಕರು ತಕ್ಷಣ ನೆರವು ನೀಡಿದ್ದಾರೆ. ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಇದನ್ನೂ ಓದಿ: ಪರ್ಷಿಯನ್​​ ಹೊಸ ವರ್ಷಕ್ಕೆ ಶುಭ ಹಾರೈಸಿದ ಗೂಗಲ್, ವಿಶೇಷ ಡೂಡಲ್​​ನ ಬಗ್ಗೆ ಇಲ್ಲಿದೆ ಮಾಹಿತಿ

ನನ್ನ ಶಿಕ್ಷಕರು ನನ್ನನ್ನು ಪರೀಕ್ಷೆಗೆ ಬರುವಂತೆ ಪ್ರೋತ್ಸಾಹಿಸಿದರು. ಅಲ್ಲದೆ, ನನ್ನ ಹೆತ್ತವರು ನನಗೆ ಸಾಕಷ್ಟು ಬೆಂಬಲವನ್ನು ನೀಡಿದ್ದಾರೆ. ನನಗೆ ಸಹಾಯ ಮಾಡಿದ ನನ್ನ ಎಲ್ಲಾ ಶಿಕ್ಷಕರಿಗೆ ಮತ್ತು ನನಗೆ ಆಂಬ್ಯುಲೆನ್ಸ್ ಒದಗಿಸಿದ್ದಕ್ಕಾಗಿ ಕ್ಯಾನ್ಸರ್ ನೆರವು ಮತ್ತು ಸಂಶೋಧನಾ ಪ್ರತಿಷ್ಠಾನಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಈಗ ಅದೇ ರೀತಿ ಮುಂದಿನ ಪತ್ರಿಕೆಯನ್ನು ಬರೆಯಲಿದ್ದೇನೆ ಎಂದು ಮುಬಾಶಿರಾ ಹೇಳಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:58 am, Tue, 21 March 23

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್