ವಿಮಾನ ಪ್ರಯಾಣದ ವೇಳೆ ಸೀಟಿನಲ್ಲೇ ಮಲಗಿ ಮಾಡಬಾರದ್ದನ್ನು ಮಾಡಿದ ಜೋಡಿ! ಫೋಟೊಗಳು ವೈರಲ್

ವೈರಲ್ ಆಗಿರುವ ಚಿತ್ರದಲ್ಲಿರುವ ಜೋಡಿಯನ್ನು ನೋಡಿ. ಇವರು ವಿಮಾನದಲ್ಲಿ ಅಶ್ಲೀಲವಾಗಿ ವರ್ತಿಸಿದ್ದಾರೆ. ಇದನ್ನು ಕಂಡ ಸಹ ಪ್ರಯಾಣಿಕರು ನಿಬ್ಬೆರಗಾಗಿ ಹೋಗಿದ್ದಾರೆ. ಪ್ರಯಾಣಿಕರೊಬ್ಬರು ಆ ಫೋಟೊಗಳನ್ನು ಕ್ಲಿಕ್ಕಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಇದೀಗ ವೈರಲ್ ಆಗುತ್ತಿದೆ.

ವಿಮಾನ ಪ್ರಯಾಣದ ವೇಳೆ ಸೀಟಿನಲ್ಲೇ ಮಲಗಿ ಮಾಡಬಾರದ್ದನ್ನು ಮಾಡಿದ ಜೋಡಿ! ಫೋಟೊಗಳು ವೈರಲ್
ವಿಮಾನ ಪ್ರಯಾಣದ ವೇಳೆ ಸೀಟಿನಲ್ಲೇ ಮಲಗಿ ಮಾಡಬಾರದ್ದನ್ನು ಮಾಡಿದ ಜೋಡಿ!
Follow us
Ganapathi Sharma
|

Updated on: Apr 12, 2024 | 2:59 PM

ವಿಮಾನ ಪ್ರಯಾಣದ (Flight Journey) ವೇಳೆ ಪ್ರಯಾಣಿಕರಿಗೆ ಹಲವು ಸಲಹೆ ರೀತಿಯ ಸೂಚನೆಗಳನ್ನು ನೀಡಲಾಗುತ್ತದೆ. ಇದರಲ್ಲಿ, ಭದ್ರತೆ, ಸುರಕ್ಷತೆಗೆ ಸಂಬಂಧಿಸಿದ ಸೂಚನೆಗಳೂ ಒಳಗೊಂಡಿರುತ್ತವೆ. ಇವುಗಳನ್ನು ಪಾಲಿಸಬೇಕಾದ್ದು ಕಡ್ಡಾಯವೇನೋ ಸರಿ. ಇದರ ಹೊರತಾಗಿಯೂ ಇತರ ಪ್ರಯಾಣಿಕರಿಗೆ ತೊಂದರೆ, ಮುಜುಗರವಾಗದ ರೀತಿಯಲ್ಲಿ ಸಹ ಪ್ರಯಾಣಿಕರ ವರ್ತನೆ ಇರಬೇಕೆಂದು ಬೇರೆ ಹೇಳಬೇಕಿಲ್ಲವಲ್ಲ. ಆದರೆ, ಕೆಲವರು ಸಿಬ್ಬಂದಿ ನೀಡಿದ ಸಲಹೆ, ಸೂಚನೆಯನ್ನು ಉಲ್ಲಂಘಿಸಿ ಉದ್ಧಟತನ ಮೆರೆಯುವುದನ್ನು ನೀವು ನೋಡಿರಬಹುದು ಅಥವಾ ಕೇಳಿರಬಹುದು. ಆದರೆ ಇಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಜೋಡಿಯೊಂದು ವಿಮಾನ ಪ್ರಯಾಣದ ವೇಳೆ ಸೀಟ್​​ನಲ್ಲಿಯೇ ಮಲಗಿಕೊಂಡು ಸರಸ ಸಲ್ಲಾಪದಲ್ಲಿ ತೊಡಗಿದೆ!

ಪ್ರಪಂಚದ ಹೆಚ್ಚಿನ ದೇಶಗಳು ವಿಮಾನಯಾನದ ವಿಚಾರದಲ್ಲಿ ನಿಯಮಗಳನ್ನು ಬಹಳ ಕಟ್ಟುನಿಟ್ಟಾಗಿ ರೂಪಿಸಿರುತ್ತವೆ. ಆದರೆ ಅನೇಕ ಪ್ರಯಾಣಿಕರು ಪ್ರತಿದಿನ ಅವುಗಳನ್ನು ಉಲ್ಲಂಘಿಸುತ್ತಿರುವುದೂ ನಡೆಯುತ್ತಿದೆ. ಈಗ ವೈರಲ್ ಆಗಿರುವ ಚಿತ್ರದಲ್ಲಿರುವ ಜೋಡಿಯನ್ನು ನೋಡಿ. ಇವರು ವಿಮಾನದಲ್ಲಿ ಅಶ್ಲೀಲವಾಗಿ ವರ್ತಿಸಿದ್ದಾರೆ. ಇದನ್ನು ಕಂಡ ಸಹ ಪ್ರಯಾಣಿಕರು ನಿಬ್ಬೆರಗಾಗಿ ಹೋಗಿದ್ದಾರೆ. ಸಹ ಪ್ರಯಾಣಿಕರೊಬ್ಬರು ಆ ಫೋಟೊಗಳನ್ನು ಕ್ಲಿಕ್ಕಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಮಾನದ ಸೀಟಿನಲ್ಲಿ ಜೋಡಿಯ ಸರಸ: ಇಲ್ಲಿದೆ ಫೋಟೊ

ಈ ಜೋಡಿಗೆ ಯಾವ ಭಯ, ಮುಜುಗರ, ನಾಚಿಕೆಯೂ ಇರಲಿಲ್ಲ ಎಂಬುದು ಚಿತ್ರಗಳನ್ನು ನೋಡಿದರೆ ತಿಳಿಯಬಹುದಾಗಿದೆ. ಆಸನದ ಮೇಲೆ ಆರಾಮವಾಗಿ ಒಬ್ಬರನ್ನೊಬ್ಬರು ತಬ್ಬಿಕೊಂಡು ತಲ್ಲೀನರಾಗಿರುವುದು ಚಿತ್ರದಲ್ಲಿ ಕಾಣಿಸುತ್ತದೆ. FLEA ಹೆಸರಿನ ಎಕ್ಸ್ ಖಾತೆಯಲ್ಲಿ ಚಿತ್ರಗಳನ್ನು ಹಂಚಿಕೊಳ್ಳಲಾಗಿದ್ದು, ‘ವಿಮಾನದಲ್ಲಿ ಕಂಡದ್ದನ್ನು ನಂಬಲು ಸಾಧ್ಯವಾಗಲಿಲ್ಲ. ಇಡೀ 4 ಗಂಟೆಗಳ ಹಾರಾಟವು ಹೀಗೆಯೇ ಇತ್ತು’ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಬೆಲೆ ಬಾಳುವ ಶೂ ಕದ್ದ ಸ್ವಿಗ್ಗಿ ಡೆಲಿವರಿ ಬಾಯ್​​

ಶೇರ್ ಆದ ಫೋಟೊಗಳನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ಆದರೆ, ಈ ವಿಷಯ ಎಲ್ಲಿ? ಯಾವ ವಿಮಾನದಲ್ಲಿ ಆಗಿರುವುದು ಎಂಬುದು ಇನ್ನೂ ತಿಳಿದುಬಂದಿಲ್ಲ. ವಿಮಾನದಲ್ಲಿ ಅಶ್ಲೀಲ ಕೃತ್ಯಗಳನ್ನು ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ವಿಮಾನಯಾನ ಮಾರ್ಗಸೂಚಿಗಳಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ. ಇದನ್ನು ಉಲ್ಲಂಘಿಸುವ ಪ್ರಯಾಣಿಕರನ್ನು ವಿಮಾನ ಪ್ರಯಾಣದಿಂದ ನಿಷೇಧಿಸಬಹುದು ಎಂದು ಹಲವರು ಕಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್