Video: ತಂದೆಯ ಬರ್ತ್ಡೇಗೆ ಬಾಲ್ಯದ ಸ್ನೇಹಿತರನ್ನೇ ಮನೆಗೆ ಆಹ್ವಾನಿಸಿ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ಮಗಳು

ಆತ್ಮೀಯರ ಹುಟ್ಟುಹಬ್ಬಕ್ಕೆ ಸ್ಪೆಷಲ್ ಉಡುಗೊರೆ ನೀಡುತ್ತೇವೆ. ಇದೀಗ ಮಗಳೊಬ್ಬಳು ತಂದೆಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಉಡುಗೊರೆ ನೀಡಿದ್ದಾಳೆ. ತಂದೆಯ ಬಾಲ್ಯದ ಸ್ನೇಹಿತರನ್ನು ಹುಟ್ಟುಹಬ್ಬದ ಸ್ಪೆಷಲ್ ದಿನವೇ ಮನೆಗೆ ಆಹ್ವಾನಿಸಿರುವ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಕಂಪ್ಲೀಟ್ ಸ್ಟೋರಿ ಇಲ್ಲಿದೆ.

Video: ತಂದೆಯ ಬರ್ತ್ಡೇಗೆ ಬಾಲ್ಯದ ಸ್ನೇಹಿತರನ್ನೇ ಮನೆಗೆ ಆಹ್ವಾನಿಸಿ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ಮಗಳು
ವೈರಲ್‌ ವಿಡಿಯೋ
Image Credit source: Instagram

Updated on: Aug 09, 2026 | 1:30 PM

ತಂದೆ ತಾಯಿ ತಮ್ಮ ಮಕ್ಕಳ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಾರೆ. ಹೀಗಿರುವಾಗ ಮಕ್ಕಳು ತಮ್ಮ ವಿಶೇಷ ದಿನಗಳಲ್ಲಿ ಮರೆಯಲಾಗದ ಉಡುಗೊರೆ (gift) ನೀಡಿದ್ರೆ ಆ ಕ್ಷಣ ಹೇಗಿರಬಹುದು ಎಂದು ಒಮ್ಮೆ ಊಹಿಸಿ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಮಗಳೊಬ್ಬಳು ತನ್ನ ತಂದೆಗೆ ಹುಟ್ಟುಹಬ್ಬಕ್ಕೆ (father birthday) ಸರ್ಪ್ರೈಸ್ ನೀಡಿದ್ದಾಳೆ. ಮನೆಗೆ ತನ್ನ ಅಪ್ಪನ ಬಾಲ್ಯದ ಸ್ನೇಹಿತರನ್ನು ಆಹ್ವಾನಿಸಿ  ಖುಷಿ ಪಡಿಸಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

ಹುಟ್ಟುಹಬ್ಬಕ್ಕೆ ತಂದೆಗೆ ಸರ್ಪ್ರೈಸ್ ನೀಡಿದ ಮಗಳು

ಮೇಘಾ ಎಂ ರಾವ್ (Megha m rao) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮಗಳೊಬ್ಬಳು ತನ್ನ ತಂದೆಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿರುವುದನ್ನು ಕಾಣಬಹುದು. ಈ ಸ್ಪೆಷಲ್ ದಿನದಂದು ಮನೆಗೆ ತಂದೆಯ ಬಾಲ್ಯದ ಸ್ನೇಹಿತರನ್ನು ಆಹ್ವಾನಿಸಿದ್ದಾಳೆ. ಒಬ್ಬೊಬ್ಬರು ಮನೆಗೆ ಬರುತ್ತಿದ್ದಂತೆ ತಂದೆ ಖುಷಿಗೆ ಪಾರಾವೇ ಇಲ್ಲದಂತಾಗಿದೆ. ಎಲ್ಲರೂ ಜತೆಗೆ ಸೇರಿ ಬರ್ತ್ಡೇ ಸೆಲೆಬ್ರೇಶನ್ ಮಾಡಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ಕೊಟ್ಟ ಮಗ

ಈ ವಿಡಿಯೋ ಇದುವರೆಗೆ ಆರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿಮ್ಮ ತಂದೆಯ ಪ್ರತಿಕ್ರಿಯೆ ಅದ್ಭುತ ಎಂದಿದ್ದಾರೆ. ಇನ್ನೊಬ್ಬರು, ಈ ದಿನದ ಬೆಸ್ಟ್ ರೀಲ್ಸ್ ಎಂದು ಹೇಳಿದ್ದಾರೆ. ಮತ್ತೊಬ್ಬರು, ನೋಡಿ ಖುಷಿ ಆಯ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Loading...
Unable to load recommendations.
Follow Us