Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನನ್ನದೊಂದು ಪುಟ್ಟ ಅಳಿಲು ಸೇವೆ, ರಸ್ತೆ ಮೇಲೆ ನೀರು ನಿಲ್ಲದಂತೆ ಶೋಲ್ಡರ್‌ ಡ್ರೈನ್‌ ಸ್ವಚ್ಛಗೊಳಿಸಿದ ವಿಕಲಚೇತನ ವ್ಯಕ್ತಿ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವು ವಿಡಿಯೋಗಳು ನಮ್ಮ ಮನಸ್ಸನ್ನು ಗೆಲ್ಲುತ್ತವೆ. ಸದ್ಯ ಅಂತಹದೊಂದು ವಿಡಿಯೋ ಇದೀಗ ವೈರಲ್‌ ಆಗಿದ್ದು, ದೈಹಿಕ ನ್ಯೂನತೆ ದೇಹಕ್ಕಷ್ಟೆ, ಸಮಾಜ ಸೇವೆ ಮಾಡಲು ಒಳ್ಳೆಯ ಮನಸ್ಸಿದ್ದರೆ ಸಾಕು ಎನ್ನುತ್ತಾ ವಿಕಲ ಚೇತನ ವ್ಯಕ್ತಿಯೊಬ್ಬರು ಜೋರಾಗಿ ಸುರಿಯುತ್ತಿರುವ ಮಳೆಯ ನಡುವೆಯೂ ರಸ್ತೆಯ ಮೇಲೆ ನೀರು ನಿಲ್ಲದಂತೆ ಶೋಲ್ಡರ್‌ ಡ್ರೈನ್‌ ಸ್ವಚ್ಛಗೊಳಿಸುವ ಮೂಲಕ ಪುಟ್ಟ ಅಳಿಲು ಸೇವೆಯನ್ನು ಮಾಡಿದ್ದಾರೆ. ಇವರ ಈ ಕಾರ್ಯ ನಿಜಕ್ಕೂ ನಮಗೆಲ್ಲರಿಗೂ ಸ್ಫೂರ್ತಿ.

Video: ನನ್ನದೊಂದು ಪುಟ್ಟ ಅಳಿಲು ಸೇವೆ, ರಸ್ತೆ ಮೇಲೆ ನೀರು ನಿಲ್ಲದಂತೆ ಶೋಲ್ಡರ್‌ ಡ್ರೈನ್‌ ಸ್ವಚ್ಛಗೊಳಿಸಿದ ವಿಕಲಚೇತನ ವ್ಯಕ್ತಿ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 31, 2024 | 1:54 PM

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ವಿಡಿಯೋಗಳು ನಿಜಕ್ಕೂ ನಮಗೆ ಪ್ರೇರಣೆ, ಸ್ಫೂರ್ತಿಯನ್ನು ನೀಡುತ್ತದೆ. ಇದೀಗ ಅಂತಹದ್ದೇ ಸುಂದರ ವಿಡಿಯೋವೊಂದು ವೈರಲ್‌ ಆಗಿದ್ದು, ಸಮಾಜ ಸೇವೆ ಮಾಡಲು ಹಣ, ಆಸ್ತಿಯೇ ಬೇಕೆಂದಿಲ್ಲ, ಒಳ್ಳೆಯ ಮನಸ್ಸಿದ್ದರೆ ಸಮಾಜಕ್ಕಾಗಿ ನಾವು ಕೂಡಾ ಪುಟ್ಟ ಅಳಿಲು ಸೇವೆಯನ್ನು ಮಾಡಬಹುದೆಂದು ವಿಕಲ ಚೇತನ ವ್ಯಕ್ತಿಯೊಬ್ಬರು ತೋರಿಸಿಕೊಟ್ಟಿದ್ದಾರೆ. ಹೌದು ಅವರು ಊರ ಉಸಾಬರಿ ನನಗ್ಯಾಕೆ ಅಂತಾನೂ ಯೋಚನೆ ಮಾಡದೆ ಜೋರಾಗಿ ಸುರಿಯುವ ಮಳೆಯ ನಡುವೆಯೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಿರಲಿ ಎಂದು ರಸ್ತೆಯ ಮೇಲೆ ನೀರು ನಿಲ್ಲದಂತೆ ಶೋಲ್ಡರ್‌ ಡ್ರೈನ್‌ ಸ್ವಚ್ಛಗೊಳಿಸಿದ್ದಾರೆ.

Engr Shalehy MH ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದ್ದು, ಅವರಿಗೊಂದು ನಮ್ಮ ನಮನ ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ವಿಕಲ ಚೇತನ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಚಲಿಸುವ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಆಗದಿರಲಿ ಎಂದು ಜೋರಾಗಿ ಸುರಿಯುವ ಮಳೆಯ ನಡುವೆಯೂ ರಸ್ತೆಯ ಮೇಲೆ ನೀರು ನಿಲ್ಲದಂತೆ ತಮ್ಮ ವಾಕ್‌ ಸ್ಟಿಕ್‌ನಲ್ಲಿ ಶೋಲ್ಡರ್‌ ಡ್ರೈನ್‌ ಅನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮೋದಿ, ಎಲಾನ್ ಮಸ್ಕ್ ಓಣಂ ಹಬ್ಬಕ್ಕೆ ಕೇರಳಕ್ಕೆ ಬಂದ್ರೆ ಹೇಗಿರುತ್ತೆ? ಹೇಗಿದೆ ನೋಡಿ AI ವಿಡಿಯೋ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5.1 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇವರ ಈ ಕಾರ್ಯಕ್ಕೆ ನನ್ನದೊಂದು ನಮನʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ವ್ಯಕ್ತಿಯಿಂದ ನಾವುಗಳು ಕಲಿಯಬೇಕಾದುದು ತುಂಬಾ ಇದೆʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ