AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ದುಡಿಮೆಯಲ್ಲಿ ಆಟೋ ಡ್ರೈವರ್‌ಗೆ ಜತೆಯಾಗುವ ಶ್ವಾನ, ವೈರಲ್‌ ಆಯ್ತು ದೃಶ್ಯ

ಕೆಲವು ಹೃದಯ ಸ್ಪರ್ಶಿ ಕ್ಷಣಗಳನ್ನು ನೋಡುವಾಗ ಕಣ್ಣಂಚಲಿ ನೀರು ಬರುತ್ತದೆ.ಇದೀಗ ಶ್ವಾನವೊಂದು ತನ್ನ ಮಾಲೀಕನ ದಿನನಿತ್ಯದ ಕಾಯಕದಲ್ಲಿ ಜತೆಯಾಗಿದೆ. ಶ್ವಾನವೊಂದು ತನ್ನ ಮಾಲೀಕ ಜತೆಯಲ್ಲೇ ಕಾಲ ಕಳೆಯುವ ವಿಡಿಯೋ ವೈರಲ್ ಆಗಿದ್ದು, ಈ ದೃಶ್ಯ ನೆಟ್ಟಿಗರ ಗಮನ ಸೆಳೆಯುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ದುಡಿಮೆಯಲ್ಲಿ ಆಟೋ ಡ್ರೈವರ್‌ಗೆ ಜತೆಯಾಗುವ  ಶ್ವಾನ, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 07, 2026 | 5:45 PM

Share

ನಿಯತ್ತು ಎಂದರೆ ಮೊದಲು ನೆನಪಾಗುವುದೇ ಈ ಶ್ವಾನ (dog). ಮನುಷ್ಯರಿಗೆ ಈ ಶ್ವಾನಕ್ಕಿಂತ ಹೆಚ್ಚು ಆಪ್ತರು ಬೇರಾರೂ ಇರಲಿಕ್ಕೆ ಸಾಧ್ಯವಿಲ್ಲ. ಮನೆಯ ಸದಸ್ಯರಂತೆ ಇರುವ ಶ್ವಾನಗಳು ಒಂದು ತುತ್ತು ಹಾಕಿದ್ರೆ ಸಾಕು ಜೀವನ ಪರ್ಯಂತ ಮಾಲೀಕ ಜತೆಯಾಗುತ್ತದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ದಿನನಿತ್ಯದ ಕಾಯಕದಲ್ಲಿ ಆಟೋ ಡ್ರೈವರ್‌ಗೆ ಶ್ವಾನವೊಂದು ಜತೆಯಾಗಿದೆ. ಹೌದು, ಡ್ರೈವರ್ ಸೀಟಿನ ಪಕ್ಕ ಮಾಲೀಕ ಜತೆಗೆ ಕುಳಿತಿರುವ ಶ್ವಾನದ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಈ ನಿಸ್ವಾರ್ಥ ಪ್ರೀತಿಗೆ ಬೆಲೆ ಕಟ್ಟಲಾಗದು ಎಂದು ಕಾಮೆಂಟ್‌ ಮಾಡಿದ್ದಾರೆ.

ಪಿಹೆಚ್ ಮೂಮೆಂಟ್ (phd moment) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಆಟೋ ಡ್ರೈವರ್‌ರೊಬ್ಬರು ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಂತುಕೊಂಡಿರುವುದನ್ನು ನೋಡಬಹುದು. ಶ್ವಾನವೊಂದು ಅವರ ದಿನನಿತ್ಯದ ಕಾಯಕದಲ್ಲಿ ಜತೆಯಾಗಿದೆ. ಶ್ವಾನದ ತಲೆ ಸವರಿ ಈ ವ್ಯಕ್ತಿ ಮುದ್ದು ಮಾಡುತ್ತಿದ್ದರೆ, ಶ್ವಾನವು ಈ ಕಾವಲಾಗಿರುವಂತಿದೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by PHD Moments (@phd.moments)

ಇದನ್ನೂ ಓದಿ: ಹಾಯಾಗಿ ಮಲಗಿರುವ ಶ್ವಾನಕ್ಕೆ ಬೀಸಣಿಗೆಯಲ್ಲಿ ಗಾಳಿ ಬೀಸುತ್ತಿರುವ ವೃದ್ಧ

ಈ ವಿಡಿಯೋ ಹದಿನೇಳು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ದೇವರನ್ನು ಜತೆಗೆ ಕರ್ಕೊಂಡು ಹೋಗೋಕೆ ಅದೃಷ್ಟ ಬೇಕು ಎಂದಿದ್ದಾರೆ. ಇನ್ನೊಬ್ಬರು, ಝೆಡ್ ಪ್ಲಸ್ ಸೆಕ್ಯೂರಿಟಿ ಅಂದ್ರೆ ಇದೇ ಇರ್ಬೇಕು ಎಂದು ಹೇಳಿದ್ದಾರೆ. ಮತ್ತೊಬ್ಬರು, ವಿವರಿಸಲಾಗದ ನಿಸ್ವಾರ್ಥ ಪ್ರೀತಿ ಅಂದ್ರೆ ಇದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ