AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಹು ಅಂತಸ್ತಿನ ಕಟ್ಟಡ ಏರಿ ತುತ್ತ ತುದಿನಲ್ಲಿ ನಿಂತ ಶ್ವಾನ, ಮುಂದೇನಾಯ್ತು ನೋಡಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ದೃಶ್ಯಗಳು ಭಯ ಹುಟ್ಟಿಸುತ್ತವೆ. ಇದೀಗ ಶ್ವಾನವೊಂದು ದೊಡ್ಡ ಬಿಲ್ಡಿಂಗ್ ಏರಿ ತುತ್ತ ತುದಿಯಲ್ಲಿ ನಿಂತಿದೆ. ಹೌದು, ಅಪಾಯದಲ್ಲಿದ್ದ ಈ ಶ್ವಾನವನ್ನು ರಕ್ಷಿಸುವಲ್ಲಿ ರಕ್ಷಣಾ ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಬಹು ಅಂತಸ್ತಿನ ಕಟ್ಟಡ ಏರಿ ತುತ್ತ ತುದಿನಲ್ಲಿ ನಿಂತ ಶ್ವಾನ, ಮುಂದೇನಾಯ್ತು ನೋಡಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Sep 06, 2026 | 3:12 PM

Share

ಮೂಕ ಪ್ರಾಣಿಗಳೇ ಹಾಗೆ, ತಪ್ಪು ಯಾವುದು, ಸರಿ ಯಾವುದು ಎಂದು ತಿಳಿಯಲ್ಲ. ಇದೀಗ ಶ್ವಾನವೊಂದು (dog) ಬಹು ಅಂತಸ್ತಿನ ಕಟ್ಟಡ ಏರಿ ತುತ್ತ ತುದಿಯಲ್ಲಿ ನಿಂತು ಕೊಂಡಿದೆ. ಈ ನಾಯಿ ದೊಡ್ಡ ಬಿಲ್ಡಿಂಗ್ ಹೇಗೆ ಹತ್ತಿತು ಎನ್ನುವುದು ಪ್ರಶ್ನೆಯಾಗಿ ಕಂಡರೂ, ಮುಂದೇನಾಯ್ತು ಎಂದು ತಿಳಿದ್ರೆ ನೀವು ಅಚ್ಚರಿ ಪಡ್ತಿರಾ. ಸ್ಥಳೀಯರು ಜಾಣತನದಿಂದ ಕಟ್ಟಡದ ಮೇಲಿದ್ದ ಶ್ವಾನವನ್ನು ರಕ್ಷಿಸಿದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಬಹು ಅಂತಸ್ತಿನ ಕಟ್ಟಡ ಏರಿ ನಿಂತ ಶ್ವಾನ

ಘರ್ ಕೆ ಕಲೇಶ್ (Ghar Ke Kalesh) ಎಂಬ ಎಕ್ಸ್‌ ಖಾತೆಯಲ್ಲಿ ಬಿಲ್ಡಿಂಗ್ ಏರಿ ಬಾಲ್ಕನಿಯಲ್ಲಿ ಕುಳಿತ ಶ್ವಾನದ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ನೋಡಿದ್ರೆ ಹತ್ತಾರು ಅಂತಸ್ತಿನ ಕಟ್ಟಡವೊಂದು ನಿಮ್ಮ ಕಣ್ಣಿಗೆ ಕಾಣಿಸುತ್ತದೆ. ಈ ಬಹು ಅಂತಸ್ತಿನ ಮಹಡಿ ಹತ್ತಿ ಬಾಲ್ಕನಿಯಲ್ಲಿ ನಾಯಿ ನಿಂತಿದೆ. ಕೊನೆಯ ಹಂಚಿನಲ್ಲಿ ನಿಂತುಕೊಂಡಿದ್ದ ಈ ಶ್ವಾನವು ಅಪಾಯದಲ್ಲಿದೆ ಎಂದು ರಕ್ಷಣಾ ಕಾರ್ಯಕರ್ತರು ಅರಿತುಕೊಂಡಿದ್ದಾರೆ. ಕೊನೆಗೂ ಬುದ್ಧಿ ಉಪಯೋಗಿಸಿ ಈ ಶ್ವಾನವನ್ನು ಅಪಾಯಕಾರಿ ಸ್ಥಳದಿಂದ ಕೆಳಗಿಸುವಲ್ಲಿ ಯಶಸ್ವಿಯಾಗಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನಾನು ನಿನ್ನ ಜೊತೆಗಿದ್ದೇನೆ; ಅನಾರೋಗ್ಯದಿಂದ ಬಳಲುತ್ತಿದ್ದ ಮಾಲೀಕನ ಜತೆಗೆ ನಿಂತ ಶ್ವಾನ

ಈ ವಿಡಿಯೋ ಎಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ಶ್ವಾನವು ಬಿಲ್ಡಿಂಗ್ ಏರಿ ಸಿಟಿ ಸೌಂದರ್ಯವನ್ನು ಆಸ್ವಾದಿಸುತ್ತಿದೆ ಎಂದು ತಮಾಷೆ ಮಾಡಿದ್ದಾರೆ. ಮತ್ತೊಬ್ಬರು, ಪೆಂಟ್‌ಹೌಸ್ ಖರೀದಿಸುವ ಮೊದಲು ಸುತ್ತಲು ನೋಡಿ ಎಲ್ಲವನ್ನು ಪರಿಶೀಲಿಸುತ್ತಿದ್ದಾನೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ