AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕೇವಲ 49 ರೂ. ಹೂಡಿಕೆ ಮಾಡಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ

ಆನ್‌ಲೈನ್ ಗೇಮಿಂಗ್ ಆ್ಯಪ್‌(Online Gaming App) ನಲ್ಲಿ 49 ರೂಪಾಯಿ ಹೂಡಿಕೆ ಮಾಡಿದ ವ್ಯಕ್ತಿ, ರಾತ್ರೋರಾತ್ರಿ 1.5 ಕೋಟಿಗೆ ಒಡೆಯನಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Viral News: ಕೇವಲ 49 ರೂ. ಹೂಡಿಕೆ ಮಾಡಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ
ಕೇವಲ 49 ರೂ. ಹೂಡಿಕೆ ಮಾಡಿ ರಾತ್ರೋರಾತ್ರಿ ಕೋಟ್ಯಾಧಿಪತಿImage Credit source: indiatoday.in
ಅಕ್ಷತಾ ವರ್ಕಾಡಿ
|

Updated on:Apr 04, 2023 | 1:32 PM

Share

ಮುಖ್ಯಾಂಶಗಳು

  • ಆನ್‌ಲೈನ್ ಗೇಮಿಂಗ್ ಆ್ಯಪ್‌(Online Gaming App) ನಲ್ಲಿ 49 ರೂಪಾಯಿ ಹೂಡಿಕೆ ಮಾಡಿದ ವ್ಯಕ್ತಿ, ರಾತ್ರೋರಾತ್ರಿ 1.5 ಕೋಟಿಗೆ ಒಡೆಯನಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
  • ಶಹಾಬುದ್ದೀನ್ ಮನ್ಸೂರಿ ಎಂದು ಗುರುತಿಸಲಾದ ವ್ಯಕ್ತಿ ಕಳೆದ ಎರಡು ವರ್ಷಗಳಿಂದ ಇಂತಹ ಆನ್‌ಲೈನ್ ಕ್ರಿಕೆಟ್ ಆಟಗಳಲ್ಲಿ ತಂಡಗಳನ್ನು ಕಟ್ಟುತ್ತಿದ್ದರೂ ಕೂಡ ಅದೃಷ್ಟ ಕುಲಾಯಿಸಿರಲ್ಲಿಲ್ಲ.
  • ಮಧ್ಯಪ್ರದೇಶದ ಸೆಂಧ್ವಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಶಹಬುದ್ದೀನ್ ಗೆದ್ದ ಹಣದಲ್ಲಿ ಸ್ವಂತ ಮನೆ ಕಟ್ಟುವ ಯೋಜನೆ ಹಾಕಿಕೊಂಡಿದ್ದಾರೆ. ಉಳಿದ ಮೊತ್ತದಲ್ಲಿ ಸ್ವಂತ ಉದ್ಯಮ ಆರಂಭಿಸುವ ಗುರಿಯನ್ನೂ ಹೊಂದಿದ್ದಾರೆ.

ಆನ್‌ಲೈನ್ ಗೇಮಿಂಗ್ ಆ್ಯಪ್‌(Online Gaming App) ನಲ್ಲಿ 49 ರೂಪಾಯಿ ಹೂಡಿಕೆ ಮಾಡಿದ ವ್ಯಕ್ತಿ, ರಾತ್ರೋರಾತ್ರಿ 1.5 ಕೋಟಿಗೆ ಒಡೆಯನಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಐಪಿಎಲ್​​ ಪ್ರಾರಂಭವಾಗುತ್ತಿದ್ದಂತೆ ಕ್ರಿಕೆಟ್ ಬೆಟ್ಟಿಂಗ್ ಕೂಡ ಪ್ರಾರಂಭವಾಗಿದೆ. ಇದರಲ್ಲಿ ಸಾಕಷ್ಟು ದುಡ್ಡು ಹಾಕಿ ಕೈ ಸುಟ್ಟುಕೊಳ್ಳುವವರೇ ಹೆಚ್ಚು. ಆದರೆ ಇಲ್ಲೊಬ್ಬ ಆನ್‌ಲೈನ್ ಗೇಮಿಂಗ್ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗುರುವ ಸುದ್ದಿ ಇದೀಗಾ ಭಾರೀ ವೈರಲ್​ ಆಗಿದೆ.

ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಚಾಲಕನಾಗಿರುವ ಈತ ಭಾನುವಾರ ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ನಲ್ಲಿ 49 ರೂಪಾಯಿ ಹೂಡಿಕೆ ಮಾಡಿದ್ದಾನೆ. ಇದರಲ್ಲಿ ಈತ ವರ್ಚುವಲ್ ಕ್ರಿಕೆಟ್ ತಂಡವನ್ನು ರಚಿಸಿ ಮೊದಲ ಸ್ಥಾನವನ್ನು ಪಡೆಯುವ ಮೂಲಕ 1.5 ಕೋಟಿ ರೂಪಾಯಿ ಗೆದ್ದಿದ್ದಾನೆ.

ಇದನ್ನೂ ಓದಿ: ಪಿಸ್ತೂಲಿನಿಂದ ಕೇಕ್ ಕಟ್​​ ಮಾಡಿ ಹುಟ್ಟು ಹಬ್ಬದಂದೇ ಜೈಲು ಸೇರಿದ ವ್ಯಕ್ತಿ

ಶಹಾಬುದ್ದೀನ್ ಮನ್ಸೂರಿ ಎಂದು ಗುರುತಿಸಲಾದ ವ್ಯಕ್ತಿ ಕಳೆದ ಎರಡು ವರ್ಷಗಳಿಂದ ಇಂತಹ ಆನ್‌ಲೈನ್ ಕ್ರಿಕೆಟ್ ಆಟಗಳಲ್ಲಿ ತಂಡಗಳನ್ನು ಕಟ್ಟುತ್ತಿದ್ದರೂ ಕೂಡ ಅದೃಷ್ಟ ಕುಲಾಯಿಸಿರಲ್ಲಿಲ್ಲ. ಆದರೆ ಭಾನುವಾರ ನಡೆದ ಕೋಲ್ಕತ್ತಾ ಮತ್ತು ಪಂಜಾಬ್ ನಡುವಿನ ಪಂದ್ಯ ಈತನ ಅದೃಷ್ಟವನ್ನೇ ಬದಲಾಯಿಸಿದೆ. ಪ್ರಸ್ತುತ, ಶಹಾಬುದ್ದೀನ್ ತನ್ನ ಆ್ಯಪ್ ವ್ಯಾಲೆಟ್‌ನಿಂದ ರೂ 20 ಲಕ್ಷವನ್ನು ಹಿಂಪಡೆದಿದ್ದಾರೆ, ವಿಜೇತ ಮೊತ್ತದ 1.5 ಕೋಟಿ ರೂ. ಒಟ್ಟು ರೂ.6 ಲಕ್ಷ ತೆರಿಗೆ ಕಡಿತಗೊಳ್ಳಲಿದೆ.

ಶಹಾಬುದ್ದೀನ್ ಹಣದಿಂದ ಏನು ಮಾಡಲು ಯೋಜಿಸುತ್ತಿದ್ದಾರೆ?

ಮಧ್ಯಪ್ರದೇಶದ ಸೆಂಧ್ವಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಶಹಬುದ್ದೀನ್ ಗೆದ್ದ ಹಣದಲ್ಲಿ ಸ್ವಂತ ಮನೆ ಕಟ್ಟುವ ಯೋಜನೆ ಹಾಕಿಕೊಂಡಿದ್ದಾರೆ. ಉಳಿದ ಮೊತ್ತದಲ್ಲಿ ಸ್ವಂತ ಉದ್ಯಮ ಆರಂಭಿಸುವ ಗುರಿಯನ್ನೂ ಹೊಂದಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:32 pm, Tue, 4 April 23

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್