AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ನೀರಿನ ಚೊಂಬು; ಮೈ ಮೇಲೆ ತಣ್ಣೀರು ಸುರಿದ ಟ್ರಕ್ ಚಾಲಕ

ಅಬ್ಬಬ್ಬಾ ಈ ಸುಡು ಬೇಸಿಗೆಯ ಕಾಲದಲ್ಲಿ ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ಏನಾದರೊಂದು ಸರ್ಕಸ್ ಮಾಡುತ್ತಲೇ ಇರುತ್ತಾರೆ. ಕೆಲವರಂತೂ ಸೆಕೆ ತಡೆಯಲಾರದೆ ನೀರಿನ ಬಕೆಟ್ ಅಲ್ಲೇ ಕುಳಿತು ಬಿಡುತ್ತಾರೆ. ಅದೇ ರೀತಿ ಸೆಕೆಯನ್ನು ತಡೆಯಲಾರದೆ ಇಲ್ಲೊಬ್ಬ ಟ್ರಕ್ ಚಾಲಕ ಮೈಗೆ ತಣ್ಣೀರು ಸುರಿಯುತ್ತಲೇ ಟ್ರಕ್ ಚಲಾಯಿಸುತ್ತಾ ಹೋಗಿದ್ದಾನೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸೆಕೆಯಿಂದ ಮುಕ್ತಿ ಪಡೆಯಲು ಇದಂತೂ ಒಳ್ಳೆಯ ಉಪಾಯ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ. 

Viral Video: ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ನೀರಿನ ಚೊಂಬು; ಮೈ ಮೇಲೆ ತಣ್ಣೀರು ಸುರಿದ ಟ್ರಕ್ ಚಾಲಕ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Apr 26, 2024 | 4:32 PM

Share

ಬೇಸಿಗೆಯ ಬಿಸಿ ಏರುತ್ತಿದೆ. ಸೆಕೆ ತಡೆಯಲಾರದೆ ಜನರು ಎಸಿ, ಫ್ಯಾನ್ ಮೊರೆ ಹೋಗುತ್ತಿದ್ದಾರೆ. ಇನ್ನೂ ಹೊರಗಡೆ  ಕೆಲಸಕ್ಕೆ ಹೋಗುವವರ ಪಾಡಂತೂ ಕೇಳುವುದೇ ಬೇಡ. ಅವರುಗಳು ಎಷ್ಟೇ ಉರಿ ಬಿಸಿಲು ಇದ್ದರೂ ಬಿಸಿಲಲ್ಲಿ ಬೇಯುತ್ತಾ ಕಷ್ಟಪಟ್ಟು ಕೆಲಸ ಮಾಡಲೇಬೇಕಾಗುತ್ತದೆ. ಆದ್ರೆ ಇಲ್ಲೊಬ್ಬ ಟ್ರಕ್ ಡ್ರೈವರ್ ಇನ್ನಂತೂ ಈ ಬಿಸಿಲ ಬೇಗೆಯಲ್ಲಿ ಗಾಡಿ ಓಡಿಸಿದ್ರೆ ನಾನು ಸತ್ತೇ ಹೋಗ್ತಿನಪ್ಪಾ ಎಂದು ಒಂದೊಳ್ಳೆ ಉಪಾಯ ಮಾಡಿ ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದು, ಇನ್ನೊಂದು ಕೈಯಲ್ಲಿ ನೀರಿನ ಚೆಂಬು ಹಿಡಿದು ಮೈಗೆ ತಣ್ಣೀರು ಸುರಿಯುತ್ತಾ ಟ್ರಕ್ ಚಲಾಯಿಸಿದ್ದಾನೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು @fewsecl8r ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಟ್ರಕ್ ಡ್ರೈವರ್ ಸೆಕೆಯನ್ನು ತಡೆಯಲಾರದೆ, ಹೇಗಪ್ಪಾ ಮೈಯನ್ನು ತಣ್ಣಗಿರಿಸುವುದು ಎಂದು ಒಂದೊಳ್ಳೆ ಉಪಾಯ ಮಾಡಿ, ಟ್ರಕ್ ಒಳಗಡೆ ಒಂದು ಬಕೆಟ್ ನೀರನ್ನು ಇಟ್ಟು, ಮೈಗೆ ಈ ತಣ್ಣೀರನ್ನು ಸುರಿಯುತ್ತಲೇ ಟ್ರಕ್ ಚಲಾಯಿಸುತ್ತಾ ಹೋಗುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈ ಮಕ್ಕಳ ರೀಲ್ಸ್ ಮಾಡೋದು ಎಷ್ಟು ಕಷ್ಟ, ಈ ಟೀಚರಮ್ಮನ ಸಾಹಸಕ್ಕೆ ಒಂದು ಸಲಾಂ 

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 9 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ.  ಒಬ್ಬ ಬಳಕೆದಾರರು ʼಸೆಕೆಯಿಂದ ತಪ್ಪಿಸಿಕೊಳ್ಳಲು ಇದಂತೂ ಒಳ್ಳೆಯ ಉಪಾಯʼ ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ