
ಮರ್ಯಾದಾ ಪುರುಷ, ಪುರುಷೋತ್ತಮ ಭಗವಾನ್ ಶ್ರೀ ರಾಮನ (Shri Rama) ಜನ್ಮದಿನವನ್ನು ದೇಶದೆಲ್ಲೆಡೆ ಶ್ರದ್ಧಾಭಕ್ರಿಯಿಂದ ಆಚರಿಸಲಾಗಿದೆ. ಹಿಂದೂಗಳಿಗೆ ಯುಗಾದಿ (Ugadi festival) ವರುಷದ ಮೊದಲ ಹಬ್ಬವಾದರೆ, ತದನಂತರ ಬರುವುದೇ ಈ ರಾಮನವಮಿ (Rama Navami). ಈ ಹಬ್ಬದಂದು ಕೋಟ್ಯಾಂತರ ಭಕ್ತರು ರಾಮನನ್ನು ಪೂಜಿಸಿ, ಆರಾಧಿಸುತ್ತಾರೆ. ಆದರೆ ಇಲ್ಲೊಬ್ಬ ರೈತನು ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ಸಂಭ್ರಮಿಸಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.
ನಂದಿನಿ ವೆಂಕಟಾದ್ರಿ (Nandini Venkatadri) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಯುವ ರೈತನೊಬ್ಬ ತಾನು ಬೆಳೆದ ಹೂಕೋಸಿನಲ್ಲಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿದ ರಾಮನವಮಿಯನ್ನು ವಿಭಿನ್ನವಾಗಿ ಆಚರಿಸುವುದನ್ನು ಕಾಣಬಹುದು. ಹೊಲದಲ್ಲಿ ಹೂಕೋಸಿನ ರಾಶಿಯನ್ನು ಕಾಣಬಹುದು. ಮೂವರು ಮಹಿಳೆಯರು ಕೆಲಸದಲ್ಲಿ ತೊಡಗಿಕೊಂಡಿದ್ದು, ಯುವ ರೈತನೊಬ್ಬ ಹೂಕೋಸನ್ನು ಜೋಡಿಸಿ ರಾಮ, ಸೀತೆ, ಹನುಮಂತನ ಚಿತ್ರ ಬಿಡಿಸಿ ಅದರ ಪಕ್ಕ ಕುಳಿತಿರುವುದನ್ನು ನೀವು ನೋಡಬಹುದು.
Cauliflower farmer celebrates RamNavami!#JaiShriRam pic.twitter.com/JVCbZ85elL
— Nandini Venkatadri🇮🇳 (@NandiniVenkate3) March 27, 2026
ಇದನ್ನೂ ಓದಿ: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ
ಮಾರ್ಚ್ 27 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಮ್ಮ ಭಕ್ತಿಯ ಭಾವನೆಯನ್ನು ವ್ಯಕ್ತಪಡಿಸಲು ಹಲವಾರು ಮಾರ್ಗಗಳಿವೆ, ಆದ್ದರಿಂದ, ಇದು ನೈಸರ್ಗಿಕ ಹೂವಿನ ಗೌರವವಾದ ಹೂಕೋಸು ಮೂಲಕ ಭಕ್ತಿಯನ್ನು ವ್ಯಕ್ತಪಡಿಸುವ ಅತ್ಯಂತ ವಿಶಿಷ್ಟ ಮಾರ್ಗವಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಇದು ತುಂಬಾ ಸುಂದರ ಹಾಗೂ ಹೃದಯ ಸ್ಪರ್ಶಿಯಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಜೈ ಶ್ರೀರಾಮ್ ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:42 am, Sat, 28 March 26