AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮೊದಲ ಬಾರಿಗೆ ದೂರದ ಊರಿಗೆ ಹೊರಟ ಮಗಳು, ರೈಲು ಹತ್ತಿಸಿ ಕಣ್ಣೀರು ಹಾಕಿದ ತಂದೆ

ಮಗಳು ಒಂದು ದಿನ ಕಣ್ಣ ಮುಂದೆ ಇರಲ್ಲ ಅಂದ್ರೆ ಹೆತ್ತವರಿಗೆ ಸಹಿಸೋಕೆ ಆಗಲ್ಲ. ಇನ್ನು ಕೆಲಸದ ನಿಮಿತ್ತ ಬೇರೆ ಊರಿಗೆ ಹೊರಟು ನಿಂತರೆ ಹೆತ್ತವರ ಕಣ್ಣಂಚಲಿ ಕಣ್ಣೀರು ಜಿನುಗುತ್ತದೆ. ಇದೀಗ ಮಗಳನ್ನು ರೈಲು ಹತ್ತಿಸಿದ ಅಪ್ಪನು ಭಾವುಕನಾಗಿರುವ ಪೋಸ್ಟ್ ಸದ್ಯ ವೈರಲ್ ಆಗಿದೆ. ತಂದೆ ಮಗಳ ಬಾಂಧವ್ಯವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಮೊದಲ ಬಾರಿಗೆ ದೂರದ ಊರಿಗೆ ಹೊರಟ ಮಗಳು, ರೈಲು ಹತ್ತಿಸಿ ಕಣ್ಣೀರು ಹಾಕಿದ ತಂದೆ
ವೈರಲ್‌ ಪೋಸ್ಟ್‌Image Credit source: Twitter
ಸಾಯಿನಂದಾ
|

Updated on: Jul 12, 2026 | 10:58 AM

Share

ತಂದೆ (father) ಅಂದ್ರೆ ಹೆಣ್ಣು ಮಕ್ಕಳ ಪಾಲೀನ ಸೇಫ್‌ ಪ್ಲೇಸ್‌ ಅಂತಾನೇ ಹೇಳಬಹುದು. ತಂದೆಗೂ ಅಷ್ಟೆ ತನ್ನ ಮಗಳೆಂದರೆ ಎಲ್ಲಿಲ್ಲದ ಪ್ರೀತಿ. ಮಗಳು ವೃತ್ತಿ ಬದುಕಿಗಾಗಿ ಬೇರೆ ಊರಿಗೆ ಹೊರಟು ನಿಂತರೆ ತಂದೆಯೂ ಭಾವುಕನಾಗುತ್ತಾನೆ. ಇಂತಹದ್ದೇ ಭಾವುಕ ಕ್ಷಣದ ಪೋಸ್ಟ್ ವೈರಲ್ ಆಗಿದೆ. ಈ ದೃಶ್ಯದಲ್ಲಿ ಮಗಳನ್ನು ರೈಲು ಹತ್ತಿಸಿದ ತಂದೆ, ಕೈಯಲ್ಲಿ ದುಡ್ಡು ಇಟ್ಟು ಕಳುಹಿಸಿಕೊಟ್ಟು ಭಾವುಕನಾಗಿದ್ದಾನೆ. ಈ ದೃಶ್ಯ ನೋಡಿ ನೆಟ್ಟಿಗರ ಕಣ್ಣು ಒದ್ದೆಯಾಗಿದೆ.

ಅನುರಾಧ (Anuradha) ಹೆಸರಿನ ಎಕ್ಸ್ ಖಾತೆಯಲ್ಲಿ ತಂದೆ ಹಾಗೂ ಮಗಳ ಬಾಂಧವ್ಯದ ಪೋಸ್ಟ್ ಹಂಚಿಕೊಳ್ಳಲಾಗಿದೆ. ಈ ಪೋಸ್ಟ್ ನಲ್ಲಿ ಮಗಳು ಕೆಲಸಕ್ಕಾಗಿ ದೂರದ ಊರಿಗೆ ಹೊರಟು ನಿಂತಿದ್ದಾಳೆ. ಮಗಳನ್ನು ಬಿಡಲು ಹೆತ್ತವರು ರೈಲ್ವೆ ಸ್ಟೇಷನ್‌ಗೆ ಬಂದಿದ್ದಾರೆ. ಇದೇ ವೇಳೆ ತಂದೆಯ ಕಣ್ಣಲ್ಲಿ ನೀರು ತುಂಬಿದ್ದು, ಮಗಳ ಬಳಿ ದುಡ್ದು ಇದೆಯೇ ಎಂದು ಕೇಳುತ್ತಾನೆ. ನನ್ನ ಫೋನ್ ಪೇಯಲ್ಲಿದೆ ಎಂದ ಮಗಳ ಕೈಗೆ ಒಂದಿಷ್ಟು ಹಣ ಇಟ್ಟು, ಇದನ್ನೂ ಇಟ್ಟುಕೋ ಎಂದು ಹೇಳುವ ತಂದೆಯ ಕಾಳಜಿಯು ಇಲ್ಲಿ ವ್ಯಕ್ತವಾಗಿದೆ. ಮಗಳನ್ನು ಕಳುಹಿಸಿ ಕೊಡುವ ವೇಳೆ ತಂದೆ ಭಾವುಕನಾಗಿರುವುದನ್ನು ಕಾಣಬಹುದು.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: ಪುಟ್ಟ ಕಂದಮ್ಮನನ್ನು ಬೇಬಿ ಕ್ಯಾರಿಯರ್‌ನಲ್ಲಿ ಕೂರಿಸಿಕೊಂಡು ಡ್ಯಾನ್ಸ್ ಮಾಡಿದ ತಂದೆ

ಈ ಪೋಸ್ಟ್ ಎಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಫೋನ್ ಪೇ ನಲ್ಲಿ ನೆಟ್ವರ್ಕ್ ಸಮಸ್ಯೆ ಬರಬಹುದು. ಆದರೆ ತಂದೆಯ ಬಳಿ ಹಣ ಯಾವಾಗಲೂ ಇರುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಮಗಳ ಮೇಲೆ ತಂದೆಯ ಪ್ರೀತಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ತನ್ನ ಮಕ್ಕಳಿಗಾಗಿ ತಂದೆ ತನ್ನ ಜೀವನವೆಲ್ಲವನ್ನು ಮುಡಿಪಾಗಿ ಇಡುತ್ತಾನೆ ಎಂದು ಕಾಮೆಂಟ್ ಮಾಡಿದ್ದಾನೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ