AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೃಷಿ ಕಾಯಕದಲ್ಲಿ ತೊಡಗಿದ್ದ ಹಳ್ಳಿ ಮಹಿಳೆಯರ ಜತೆಗೆ ಬೆರೆತ ವಿದೇಶಿ ಮಹಿಳೆ

ವಿದೇಶಿಗರು ಭಾರತಕ್ಕೆ ಬಂದ್ರೆ ಇಲ್ಲಿನ ಅತಿಥಿ ಸತ್ಕಾರಕ್ಕೆ ಫಿದಾ ಅಗ್ತಾರೆ. ಅದರ ಜತೆಗೆ ಹಳ್ಳಿ ಬದುಕನ್ನು ಸಖತ್ ಎಂಜಾಯ್ ಮಾಡ್ತಾರೆ. ಇಂತಹ ದೃಶ್ಯಗಳನ್ನು ನೀವು ಸೋಶಿಯಲ್‌ ಮೀಡಿಯಾದಲ್ಲಿ ನೋಡಿರುತ್ತೀರಿ. ಇದೀಗ ಕೃಷಿ ಕಾಯಕದಲ್ಲಿ ತೊಡಗಿದ್ದ ಹಳ್ಳಿ ಮಹಿಳೆಯರ ಜತೆಗೆ ಬೆರೆತು ಕೆಲಸ ಮಾಡಿದ ವಿದೇಶಿ ಮಹಿಳೆಯ ವಿಡಿಯೋ ಸಖತ್ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೃಷಿ ಕಾಯಕದಲ್ಲಿ ತೊಡಗಿದ್ದ ಹಳ್ಳಿ ಮಹಿಳೆಯರ ಜತೆಗೆ ಬೆರೆತ ವಿದೇಶಿ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Aug 30, 2026 | 11:55 AM

Share

ವಿದೇಶಿಗರಿಗೆ (foreigner) ಭಾರತವೆಂದರೆ ಅದೇನೋ ಸೆಳೆತ. ಹೀಗಾಗಿ ಭಾರತಕ್ಕೆ ಬರುವ ವಿದೇಶಿಗರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಬಂದ ವಿದೇಶಿಗರು ಇಲ್ಲಿನ ಪ್ರವಾಸಿ ತಾಣಗಳು ಹಾಗೂ ಹಳ್ಳಿ ಬದುಕನ್ನು ಆಸ್ವಾದಿಸುತ್ತಾರೆ. ಇದೀಗ ಭತ್ತ ತೂರುವ ಕಾಯಕದಲ್ಲಿ ಬ್ಯುಸಿಯಾಗಿದ್ದ ಹಳ್ಳಿ ಮಹಿಳೆಯರ ಜತೆಗೆ ಬೆರೆತು ಕೆಲಸ ಮಾಡಿದ ವಿದೇಶಿ ಮಹಿಳೆಯ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

ಮರಿಯಾ (Maria) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಚೆನ್ನೈ ಮೂಲದ ಸೊಸೆಯಾಗಿರುವ ಈ ಮರಿಯಾ ಹಳ್ಳಿಯ ಮಹಿಳೆಯರ ಜತೆಗೆ ಬೆರೆತು ಕೆಲಸ ಮಾಡುವುದನ್ನು ಕಾಣಬಹುದು. ಇಲ್ಲಿ ಹಳ್ಳಿ ಮಹಿಳೆಯರು ಭತ್ತ ತೂರುವ ಕಾಯಕದಲ್ಲಿ ಬ್ಯುಸಿಯಾಗಿದ್ದಾರೆ. ಇವರ ಜತೆಗೆ ವಿದೇಶಿ ಮಹಿಳೆ ಬೆರೆತು ಸಖತ್‌ ಎಂಜಾಯ್ ಮಾಡುತ್ತಿರುವ ದೃಶ್ಯವನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ವಿದೇಶಿ ಸೊಸೆ-ಮಗನನ್ನು ಆರತಿ ಬೆಳಗಿ ಮನೆಗೆ ಸ್ವಾಗತಿಸಿದ ಭಾರತೀಯ ಕುಟುಂಬ

ಈ ವಿಡಿಯೋ ಎರಡು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿವೆ. ಒಬ್ಬ ಬಳಕೆದಾರ, ಈ ವಿದೇಶಿ ಮಹಿಳೆಗೆ ಎಷ್ಟು ಖುಷಿ ನೋಡಿ ಎಂದಿದ್ದಾರೆ. ಇನ್ನೊಬ್ಬರು, ನಮ್ಮವರೇ ಈ ಹಳ್ಳಿ ಬದುಕು ಬೇಡವೆಂದು ದೂರ ಸರಿಯುವವರ ಮುಂದೆ ಈ ವಿದೇಶಿ ಮಹಿಳೆಗೆ ಇರುವ ಆಸಕ್ತಿ ಮೆಚ್ಚುವಂತಹದ್ದು ಎಂದು ಹೇಳಿದ್ದಾರೆ. ಮತ್ತೊಬ್ಬರು, ನೋಡಲು ಎರಡು ಕಣ್ಣು ಸಾಲದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:54 am, Sun, 30 August 26

Follow Us
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ
ಮುಂಬೈನಲ್ಲಿ ‘ಟಾಕ್ಸಿಕ್’ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿವಣ್ಣ ಕೊಟ್ಟ ಉತ್ತರ