AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಭಾರತೀಯರ ಬಗ್ಗೆ ಬೇಸರ ವ್ಯಕ್ತಪಡಿಸಿದ ವಿದೇಶಿಗ, ಕಾರಣ ತಿಳಿದ್ರೆ ನೀವು ಶಾಕ್ ಆಗ್ತೀರಾ

ಭಾರತಕ್ಕೆ ಬರುವ ವಿದೇಶಿಗ ಪ್ರವಾಸಿಗರಿಗೆ ಕೆಲವೊಮ್ಮೆ ಕಹಿ ಅನುಭವ ಆಗುವುದಿದೆ. ಇದೀಗ ವಿದೇಶಿ ವ್ಯಕ್ತಿಯೊಬ್ಬನಿಗೆ ಅದೇ ರೀತಿ ಆಗಿದೆ. ಒಂದು ತಿಂಗಳ ಪ್ರವಾಸ ಕೈಗೊಂಡಿದ್ದ ಎಲ್ಲಿಂದ ಜನರು ನನ್ನನ್ನು ವಾಕಿಂಗ್ ಎಟಿಎಂನಂತೆ ನೋಡುತ್ತಿದ್ದರು ಎಂದಿದ್ದಾನೆ. ಹೀಗೆನ್ನಲು ಕಾರಣ ಕೂಡ ನೀಡಿದ್ದು, ಸದ್ಯಕ್ಕೆ ಈ ವ್ಯಕ್ತಿ ಹಂಚಿಕೊಂಡ ರೆಡ್ಡಿಟ್ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಭಾರತೀಯರ ಬಗ್ಗೆ ಬೇಸರ ವ್ಯಕ್ತಪಡಿಸಿದ ವಿದೇಶಿಗ, ಕಾರಣ ತಿಳಿದ್ರೆ ನೀವು ಶಾಕ್ ಆಗ್ತೀರಾ
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on: Sep 10, 2026 | 12:57 PM

Share

ಸಾಮಾನ್ಯವಾಗಿ ವಿದೇಶಿಗರು (foreigner) ಭಾರತಕ್ಕೆ ಇಷ್ಟ ಪಟ್ಟು ಪ್ರವಾಸ ಕೈಗೊಳ್ಳುತ್ತಾರೆ. ಇಲ್ಲಿನ ಪ್ರವಾಸಿ ತಾಣಗಳನ್ನು ಸವಿಯುತ್ತಾರೆ, ಆಚಾರ ವಿಚಾರವನ್ನು ಅಳವಡಿಸಿಕೊಳ್ಳುತ್ತಾರೆ. ಇನ್ನು, ಇಲ್ಲಿನ ಅತಿಥಿ ಸತ್ಕಾರಕ್ಕೆ ಫಿದಾ ಆಗುತ್ತಾರೆ. ಆದರೆ ಇಲ್ಲೊಬ್ಬ ವಿದೇಶಿ ಪ್ರವಾಸಿಗನಿಗೆ ಊಹಿಸದ ಕಹಿ ಅನುಭವವಾಗಿದೆ. ಯುರೋಪ್‌ನ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದವನಾಗಿದ್ದು, ಸಣ್ಣ ಬಜೆಟ್‌ನಲ್ಲಿ ಭಾರತಕ್ಕೆ ಬಂದ ವ್ಯಕ್ತಿಯನ್ನು ಇಲ್ಲಿನ ಜನರು ವಾಕಿಂಗ್ ಎಟಿಎಂ ತರಹ ನೋಡಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದಾನೆ. ವಿದೇಶಿ ಪ್ರವಾಸಿಗ ರೆಡ್ಡಿಟ್ ಪೋಸ್ಟ್ ನಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದಾನೆ. ಈ ಕುರಿತಾದ ಸ್ಟೋರಿ ಇಲ್ಲಿದೆ

ಭಾರತೀಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ವಿದೇಶಿಗ

ಆರ್ ಸೋಲೋ ಟ್ರಾವೆಲರ್ (r/ solo traveller) ಹೆಸರಿನ ರೆಡ್ಡಿಟ್‌ನಲ್ಲಿ ಪೋಸ್ಟ್ ಹಂಚಿಕೊಂಡು ಭಾರತೀಯರ ನಡವಳಿಕೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾನೆ. ನಾನು ಯುರೋಪ್‌ನ ವರ್ಗದ ಕುಟುಂಬಕ್ಕೆ ಸೇರಿದವನಾಗಿದ್ದು, ಕಡಿಮೆ ಬಜೆಟ್‌ನೊಂದಿಗೆ ಭಾರತ ಪ್ರವಾಸ ಕೈಗೊಂಡೆ. ಆದರೆ ಇಲ್ಲಿನ ಒಂದೇ ಒಂದು ತಿಂಗಳ ಟ್ರಿಪ್‌ ವಿದೇಶಿ ತೆರಿಗೆಯಂತೆ

ಮಾನಸಿಕವಾಗಿ ಕುಗ್ಗಿದೆ ಎಂದ ವಿದೇಶಿಗ

ವ್ಯಾಪಾರಸ್ಥರು ವಿದೇಶಿಗರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಾರೆ. ನೀರಿಗೆ ಬಾಟಲಿಯಿಂದ ಹಿಡಿದು ಆಟೋ ರಿಕ್ಷಾ ಬಾಡಿಗೆ, ಹೀಗೆ ಅಗತ್ಯ ವಸ್ತುಗಳ ಖರೀದಿ ವೇಳೆ ನನ್ನಿಂದ ಹಣ ವಸೂಲಿ ಮಾಡಿದರು. ಇಂತಹ ನಡವಳಿಕೆ ನನ್ನನ್ನು ಮಾನಸಿಕವಾಗಿ ಘಾಸಿಗೊಳಿಸಿತು. ಇಲ್ಲಿನ ಅಂಗಡಿಗಳಲ್ಲಿ ಏನಾದ್ರೂ ಖರೀದಿಸುವಾಗ ಚೌಕಾಶಿ ಮಾಡಿದ್ರೆ ನನ್ನ ಮೇಲೆ ಕೋಪ ಗೊಂಡದ್ದು ಇದೆ. ಹೀಗಾಗಿ ನಾನು ಆನ್ಲೈನ್ ನಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಿದ್ದೆ ಎಂದು ಅಸಮಾಧಾನ ಹೊರಹಾಕಿದ್ದಾನೆ.

ವೈರಲ್ ಪೋಸ್ಟ್ ಇಲ್ಲಿದೆ

Reddit Post

ಇದನ್ನೂ ಓದಿ: ಮೊದಲ ಬಾರಿಗೆ ದೋಸೆ ಸವಿದು ಕ್ಯೂಟ್ ರಿಯಾಕ್ಷನ್ ಕೊಟ್ಟ ವಿದೇಶಿಗ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಭಾರತಕ್ಕೆ ಬರುವ ಎಲ್ಲಾ ವಿದೇಶಿಗರು ಶ್ರೀಮಂತರೇ ಆಗಿರುವುದಿಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ಬೇರೆ ಊರಿಗೆ ಹೊಸಬರಾದೇ ಇಂತಹ ನಡವಳಿಕೆಗಳು ಸಾಮಾನ್ಯ ಎಂದಿದ್ದಾರೆ. ಮತ್ತೊಬ್ಬರು, ಭಾರತದಲ್ಲಿ ಒಳ್ಳೆಯ ವ್ಯಕ್ತಿಗಳು ಇದ್ದಾರೆ, ನೀವು ಮತ್ತೊಮ್ಮೆ ಇಲ್ಲಿಗೆ ಬನ್ನಿ ಎಂದು ಸಮಾಧಾನ ಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್