AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದೇ ಕಣ್ರೀ ನಿಜವಾದ ಮಾನವೀಯತೆ; ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ಧ ವ್ಯಕ್ತಿಗೆ ಸಹಾಯ ಮಾಡಿದ ವಿದೇಶಿಗ

ನಮ್ಮ ಕಷ್ಟಕ್ಕೆ ನಮ್ಮವರೇ ಆಗಲ್ಲ, ಇನ್ನು ಬೇರೆಯವರು ಆಗುತ್ತಾರೆ ಅನ್ನೋದು ಭ್ರಮೆ. ಇದೀಗ ವಿದೇಶಿಗನೊಬ್ಬನ ಒಳ್ಳೆತನ ನೆಟ್ಟಿಗರ ಹೃದಯ ಗೆದ್ದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ಧ ವ್ಯಕ್ತಿಯೊಬ್ಬನಿಗೆ ವಿದೇಶಿಗ ಸಹಾಯ ಮಾಡಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಇದೇ ಕಣ್ರೀ ನಿಜವಾದ ಮಾನವೀಯತೆ; ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ಧ ವ್ಯಕ್ತಿಗೆ ಸಹಾಯ ಮಾಡಿದ ವಿದೇಶಿಗ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 15, 2026 | 11:12 AM

Share

ಇಂದಿನ ಕಾಲದಲ್ಲಿ ಮಾನವೀಯತೆ ಎನ್ನುವ ಪದಕ್ಕೆ ಬೆಲೆಯೇ ಇಲ್ಲ. ಎಲ್ಲರೂ ಕೂಡ ಸ್ವಾರ್ಥಿಗಳಾಗಿದ್ದು ಬೇರೆಯವರ ಕಷ್ಟ ಹಾಗೂ ನೋವಿಗೆ ಸ್ಪಂದಿಸುವವರನ್ನು ಕಾಣುವುದೇ ಕಡಿಮೆ. ಆದರೆ ಇದೀಗ ದಿಕ್ಕು ದೆಸೆಯಿಲ್ಲದೇ ರಸ್ತೆಯ ಮಲಗಿದ್ದ ವೃದ್ಧ ವ್ಯಕ್ತಿಗೆ ವಿದೇಶಿಗನೊಬ್ಬನು (foreigner) ಸಹಾಯ ಮಾಡಿದ್ದಾನೆ. ಹೌದು, ದಿಂಬು ಹಾಸಿಗೆ ತಂದು ಕೊಟ್ಟು ವಿದೇಶಿಗ ಮಾನವೀಯತೆ ಮೆರೆದಿದ್ದಾನೆ. ಈ ದೃಶ್ಯ ನೋಡಿ ನೆಟ್ಟಿಗರ ಕಣ್ಣು ಒದ್ದೆಯಾಗಿದೆ.

ವೃದ್ಧ ವ್ಯಕ್ತಿಗೆ ಸಹಾಯ ಮಾಡಿದ ವಿದೇಶಿಗ

ರ್ಯಾನ್‌ ಕಲಿಶ್‌ (Ryan Kalish) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬ ಮಲಗಿರುವುದನ್ನು ಕಾಣಬಹುದು. ಇದೇ ವೇಳೆ ವಿದೇಶಿಗನೊಬ್ಬ ಕೈಯಲ್ಲಿ ದಿಂಬು ಹಾಸಿಗೆಯೊಂದಿಗೆ ಆತನ ಬಳಿ ಬಂದಿದ್ದಾನೆ. ಮಲಗಿದ್ದ ವೃದ್ಧ ವ್ಯಕ್ತಿಗೆ ಎಬ್ಬಿಸಿದ್ದು, ಇದನ್ನು ನೋಡಿದ ವೃದ್ಧ ವ್ಯಕ್ತಿಯೂ ಕೈ ಮುಗಿದು ಕೃತಜ್ಞತೆ ಸಲ್ಲಿಸಿದ್ದಾನೆ. ಆ ಬಳಿಕ ವೃದ್ಧ ವ್ಯಕ್ತಿಗೆ ಆಹಾರ ತಂದು ಕೊಟ್ಟು  ಹಸಿವು ನೀಗಿಸಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಭಾರತೀಯರ ಬಗ್ಗೆ ಬೇಸರ ವ್ಯಕ್ತಪಡಿಸಿದ ವಿದೇಶಿಗ, ಕಾರಣ ತಿಳಿದ್ರೆ ನೀವು ಶಾಕ್ ಆಗ್ತೀರಾ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಒಳ್ಳೆಯ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬರು, ನೀವು ನಿಜಕ್ಕೂ ಒಳ್ಳೆಯ ವ್ಯಕ್ತಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ವ್ಯಕ್ತಿಯ ಹೃದಯ ಬಂಗಾರದಂತಹದ್ದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?