Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 

ಒಂದೆಡೆ ಕೊಳವೆ ಬಾವಿಗಳು, ಕೆರೆ, ಬಾವಿ  ಬತ್ತಿ ಹೋದರೆ, ಮತ್ತೊಂದೆಡೆ ಜನರು ಬಿಸಿಲ ಶಾಖಕ್ಕೆ ಬೇಸತ್ತು ಹೋಗಿದ್ದಾರೆ. ಇದರ ಜೊತೆ ಜೊತೆಗೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಇದೀಗ ಈ  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರಿನ ಬಾಟಲ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.  

Viral Video: ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರ್​ ಮಾತ್ರ ಕೊಡಲ್ಲ, ಹಿಂಗನ್ನೋದಾ ಈ ಹುಡುಗಿ 
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 29, 2024 | 2:20 PM

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿದ ಬರಗಾಲ ಎದುರಾಗಿದೆ.  ನೀರಿನ ಸಮಸ್ಯೆ ತೀವ್ರಗೊಂಡಿದ್ದು,  ಬೇಸಿಗೆ ಶುರುವಾಗುತ್ತಿದ್ದಂತೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಿದೆ. ಬೋರ್ ವೆಲ್ ಗಳು, ಕೆರೆ, ಬಾವಿ, ನದಿಗಳು ಬರಿದಾಗುತ್ತಿದ್ದು, ಜನ ಜೀವ ಜಲಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ನಡುವೆ ಇಲ್ಲೊಂದು  ಕುಡಿಯೋ ನೀರಿನ ಸಮಸ್ಯೆಯ ಬಗೆಗಿನ ಹಾಸ್ಯಮಯ ವಿಡಿಯೋವೊಂದು ವೈರಲ್ ಆಗಿದ್ದು, ನೀರ್ ಕೊಡಿ ಎಂದು ಕೇಳಿದ್ರೆ ಇಲ್ಲೊರ್ವ ಯುವತಿ ಎಣ್ಣೆ ಬೇಕಾದ್ರೂ ಕೊಡ್ತೀನಿ ಆದ್ರೆ ನೀರಿನ್ ಬಾಟಲ್ ಮಾತ್ರ ಕೊಡಲ್ಲ ಅಂದಿದ್ದಾಳೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಯುವತಿಯ ಈ ಮಾತಿಗೆ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಈ ವಿಡಿಯೋವನ್ನು RJ ತ್ರಿಶೂಲ್ (@rjthrishool) ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ನೀರ್ ಕೇಳಿದ್ರೆ ಹಿಂಗನ್ನೋದಾ?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಆರ್.ಜೆ ತ್ರಿಶೂಲ್ ಅವರು ಬೆಂಗ್ಳೂರಲ್ಲಿ ಕುಡಿಯೋಕೆ ನೀರಿಲ್ಲ, ಹಾಗಾಗಿ ನಾನ್ ನಿಮ್ಮ ನೀರಿನ್ ಬಾಟಲ್ ತಗೆದುಕೊಳ್ಳಾ ಎಂದು ತಮ್ಮ ಸಹದ್ಯೋಗಿಯೊಂದಿಗೆ ಕೇಳುತ್ತಾರೆ. ಅದಕ್ಕೆ ಆ ಯುವತಿ  ಎಣ್ಣೆ ಬೇಕಾದ್ರೂ ಕುಡಿಸಿ ಬಿಡ್ತೀನಿ, ಆದ್ರೆ ವಾಟರ್ ಬಾಟಲ್ ಮಾತ್ರ ಕೊಡಲ್ಲ ಎಂದು ಹೇಳುತ್ತಿರುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ; ಅಪಾರ್ಟ್ಮೆಂಟ್ ರೂಫ್ ಶೀಟ್ ಮೇಲೆ ಸಿಲುಕಿದ ಪುಟ್ಟ ಕಂದಮ್ಮ, ಪ್ರಾಣವನ್ನೇ ಪಣಕ್ಕಿಟ್ಟು ಮಗುವಿನ ರಕ್ಷಣೆಗೆ ಧಾವಿಸಿದ ನೆರೆಯ ನಿವಾಸಿಗಳು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆಯ್ತ ಆಯ್ತು ನಮ್ಗೆ ಬೇಗ ಎಣ್ಣೆ ಕೊಡ್ಸಿ ಎಂದು ನೆಟ್ಟಿಗರು ತಮಾಷೆಯ ಕಾಮೆಂಟ್ಸ್ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ