AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕೂಟಿಯಲ್ಲಿ ಯುವತಿಯ ಯೋಗ ಪ್ರದರ್ಶನ; ವಿಡಿಯೋ ವೈರಲ್​​​

ಯುವತಿಯೊಬ್ಬಳು ಸ್ಕೂಟಿಯಲ್ಲಿ ಕುಳಿತು ಯೋಗ ಮಾಡುತ್ತಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಸ್ಕೂಟಿಯಲ್ಲಿ ಯುವತಿಯ ಯೋಗ ಪ್ರದರ್ಶನ; ವಿಡಿಯೋ ವೈರಲ್​​​
ಸ್ಕೂಟಿಯಲ್ಲಿ ಯುವತಿಯ ಯೋಗ ಪ್ರದರ್ಶನImage Credit source: instagram
ಅಕ್ಷತಾ ವರ್ಕಾಡಿ
|

Updated on:Apr 23, 2023 | 10:50 AM

Share

ಯುವತಿಯೊಬ್ಬಳು ಸ್ಕೂಟಿಯಲ್ಲಿ ಕುಳಿತು ಯೋಗ ಮಾಡುತ್ತಿರುವ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.ಇಂದಿನ ಡಿಜಿಟಲ್ ಜಗತ್ತಿನಲ್ಲಿ ಸಾಮಾಜಿಕ ಜಾಲತಾಣ (Social Media) ದಲ್ಲಿ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವೊಂದು ವಿಡಿಯೋಗಳು ಭಾರೀ ವೈರಲ್​ ಆಗುವುದುಂಟು. ಇದೀಗಾ ಯುವತಿಯೊಬ್ಬಳು ಸ್ಕೂಟರ್​​ ಮೇಲೆ ಕುಳಿತು ಯೋಗ ಪ್ರದರ್ಶನ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ಸೆಕುಂಡುಗಳ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕೆಲವೇ ಹೊತ್ತಿನಲ್ಲಿಯೇ ಲಕ್ಷಾಂತರ ವೀಕ್ಷರನ್ನು ತಲುಪಿದೆ. ಜೊತೆಗೆ ಸಾಕಷ್ಟು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಈ ವೈರಲ್ ವಿಡಿಯೋವನ್ನು ಮುಸ್ಕಾನ್ ರಾಣಾ ಎಂಬ ಹೆಸರಿನ ಯೋಗ ಪಟು ಇನ್ಸ್ಟಾಗ್ರಾಮ್​​​ನಲ್ಲಿ ಹಂಚಿಕೊಂಡಿದ್ದಾರೆ. ಇದೀಗಾಗಲೇ 433,000 ವೀಕ್ಷಣೆ ಪಡೆದುಕೊಂಡಿದೆ. ಯುವತಿಯ ಯೋಗ ಪ್ರದರ್ಶನದ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಭೋಪಾಲ್ ಅಲ್ಲಿ ಸಿಕ್ಕ ಮೊಸಳೆಯಂತೆ ಕಾಣುವ ಭಯಾನಕ ಮೀನು; ತಬ್ಬಿಬ್ಬಾದ ಅರಣ್ಯ ಇಲಾಖೆ ಅಧಿಕಾರಿಗಳು!

ವಿಡಿಯೋಗೆ ಸಂಬಂಧಿಸಿದಂತೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಕೆಲವು ಬಳಕೆದಾರರು ಉತ್ತಮ ,ಅದ್ಭುತ ಎಂದು ಪ್ರತಿಕ್ರಿಯಿಸಿದರೆ, ಇನ್ನೂ ಕೆಲವು ಬಳಕೆದಾರರು ಈ ರೀತಿಯ ವಿಡಿಯೋಗಳು ಯುವಕ, ಯುವತಿಯರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಮನೆಯಲ್ಲಿ ಯಾರೂ ಕೂಡ ಸೂಕ್ತ ತರಬೇತಿ ಇಲ್ಲದೇ ಇಂತಹ ಸಾಹಸಕ್ಕೆ ಕೈ ಹಾಕದಿರಿ ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಯೋಗ ಸ್ಟಂಟ್ ಅದ್ಭುತವಾಗಿದೆ, ನಿಮಗೆ ಒಳ್ಳೆಯ ಭವಿಷ್ಯವಿದೆ ಹೀಗೆಯೇ ಮುಂದುವರಿಸಿಕೊಂಡು ಹೋಗಿ ಎಂದು ಮತ್ತೊಬ್ಬ ಬಳಕೆದಾರರು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:49 am, Sun, 23 April 23

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ