AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ಮೂಕ ಜೀವಿಗಳ ಶುದ್ಧ ಗೆಳೆತನ; ತನ್ನ ಸ್ನೇಹಿತ ಡಾಲಿಯೊಂದಿಗೆ ತುಂಟಾಟಕ್ಕೆ ಇಳಿದ ಆನೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಆದರೆ ಇದೀಗ ಮುಗ್ಧ ಮನಸ್ಸಿನ ಶುದ್ಧ ಗೆಳೆತನಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಹೌದು, ಆನೆಯೊಂದು ಶ್ವಾನಕ್ಕೆ ನೀರು ಎರಚುತ್ತಾ ತುಂಟಾಟ ಆಡುತ್ತಿದೆ. ಈ ಕ್ಲಿಪಿಂಗ್ಸ್‌ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಇದನ್ನು ಮೆಚ್ಚಿಕೊಂಡಿದ್ದಾರೆ.

Video: ಇದು ಮೂಕ ಜೀವಿಗಳ ಶುದ್ಧ ಗೆಳೆತನ; ತನ್ನ ಸ್ನೇಹಿತ ಡಾಲಿಯೊಂದಿಗೆ ತುಂಟಾಟಕ್ಕೆ ಇಳಿದ ಆನೆ
ವೈರಲ್ ವಿಡಿಯೋImage Credit source: Facebook
ಸಾಯಿನಂದಾ
|

Updated on:Feb 16, 2026 | 5:40 PM

Share

ಆನೆಗಳು (Elephants) ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಸೋಶಿಯಲ್ ಮೀಡಿಯಾದಲ್ಲಿ ಗಜರಾಜನ ಆಟ ತುಂಟಾಟದ ವಿಡಿಯೋಗಳನ್ನು ನೀವು ನೋಡಿರುತ್ತೀರಿ.  ಆದರೆ ಇಲ್ಲಿ ತನ್ನ ಸ್ನೇಹಿತನ ಜತೆಗೆ ಆನೆಯೊಂದು ತುಂಟಾಟವಾಡುವುದರಲ್ಲಿ ಬ್ಯುಸಿಯಾಗಿದೆ. ಗಜರಾಜನು ಸೊಂಡಿಲಿನಿಂದ ನೀರು ಎರಚುತ್ತಾ ಶ್ವಾನದೊಂದಿಗೆ ಆಟ ಆಡಿದೆ. ಮುಗ್ಧ ಜೀವಿಗಳ ಈ ಪರಿಶುದ್ಧ ಗೆಳೆತನಕ್ಕೆ ನೆಟಿಗರು ಫುಲ್‌ ಫಿದಾ ಆಗಿದ್ದಾರೆ.

ಮೈಸೂರುಕೆಎ09ವೈಲ್ಡ್‌ ಲೈಫ್‌ (MYSOREKA09WILDLIFE) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಮಾಣಿಕ್ಯ ತನ್ನ ಸ್ನೇಹಿತ ಡಾಲಿ ಜತೆಗೆ ಆಟ ಎಂದು ಶೀರ್ಷಿಕೆ ನೀಡಿದ್ದಾರೆ. ಈ ವಿಡಿಯೋದಲ್ಲಿ ಆನೆಯೊಂದು ತನ್ನ ಸೊಂಡಿಲಿನಿಂದ ಶ್ವಾನಕ್ಕೆ ನೀರು ಎರಚುತ್ತಾ ತುಂಟಾಟ ಆಡಿದೆ. ಗಜರಾಜನು ನೀರು ಎರಚುತ್ತಿದ್ದಂತೆ ಓಡಲು ಮುಂದಾಗಿರುವುದು ನೀವು ನೋಡಬಹುದು. ಅಲ್ಲೇ ಇದ್ದವರು ಈ ದೃಶ್ಯ ನೋಡಿ  ನಗುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ರಂಧ್ರದಲ್ಲಿ ಸಿಲುಕಿದ್ದ ಕಲ್ಲಂಗಡಿ ಹಣ್ಣನ್ನು ಬುದ್ಧಿವಂತಿಕೆಯಿಂದ ಹೊರ ತೆಗೆದ ಆನೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಮುದ್ದಾಗಿದೆ ಎಂದರೆ, ಇನ್ನೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ವಿಡಿಯೋ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ಸುಮಧುರ ಗೆಳೆತನ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Mon, 16 February 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ