AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಮ್ಮ ಬೈದದ್ದಕ್ಕೆ ದೇವರ ಮುಂದೆ ದೂರು ನೀಡಿದ ಪುಟಾಣಿ

ಸೋಶಿಯಲ್ ಮೀಡಿಯಾದಲ್ಲಿ ಮುದ್ದು ಮಕ್ಕಳ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋಗಳು ನೋಡುವಾಗ ಈ ಪುಟಾಣಿಗಳು ಎತ್ತಿ ಮುದ್ದಾಡಿ ಬಿಡುವ ಎಂದೇನಿಸುತ್ತದೆ. ಈ ದೃಶ್ಯ ನೋಡಿದ್ರೆ ನಿಮಗೆ ಬೇಜಾರ್ ಆಗೋದು ಖಂಡಿತ. ಅಮ್ಮ ಬೈದದ್ದಕ್ಕೆ ಪುಟಾಣಿ ದೇವರ ಮುಂದೆ ಕಂಪ್ಲೇಂಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಮ್ಮ ಬೈದದ್ದಕ್ಕೆ ದೇವರ ಮುಂದೆ ದೂರು ನೀಡಿದ ಪುಟಾಣಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Mar 19, 2026 | 11:01 AM

Share

ಪುಟಾಣಿ ಮಕ್ಕಳು (little kids) ಏನು ಮಾಡಿದ್ರು ನೋಡೋಕೆ ಚಂದ. ಈ ಪುಟಾಣಿ ತೊದಲು ನುಡಿಗಳನ್ನು ಕೇಳುವುದು ಇನ್ನು ಚಂದ. ಅಮ್ಮ ಏನಾದ್ರೂ ಬೈದರೆ, ಹೊಡೆದರೆ ಅಪ್ಪನ ಬಳಿ ಹೋಗಿ ದೂರು ಹೇಳುವುದನ್ನು ನೀವು ನೋಡಿರುತ್ತೀರಿ. ಆದರೆ ಈ ಪುಟಾಣಿ ಮಾತ್ರ ಹಾಗೆ ಮಾಡಿಲ್ಲ. ಅಮ್ಮ ಬೈದರೆಂದು ದೇವರ ಮುಂದೆ ಅಳುತ್ತಾ ಅಮ್ಮನ ಬಗ್ಗೆ ದೂರು ಹೇಳಿದೆ. ಈ ಮುದ್ದಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮುಗ್ಧತೆ ಕರಗಿ ಹೋಗಿದ್ದಾರೆ.

Lavkush Yadav Baba Nam ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿ ಅಮ್ಮ ಬೈದದ್ದಂತಿದೆ. ಇದರಿಂದ ಬೇಸರಗೊಂಡ ಪುಟ್ಟ ಕಂದಮ್ಮ ದೇವರ ಮುಂದೆ ಅಳುತ್ತಾ ಅಮ್ಮನ ಬಗ್ಗೆ ಕಂಪ್ಲೇಂಟ್ ಮಾಡಿರುವುದನ್ನು ನೀವು ನೋಡಬಹುದು. ಅಮ್ಮನತ್ತ ಕೈ ತೋರಿಸಿ ದೇವರ ಮುಂದೆ ದೂರು ಹೇಳುತ್ತಿರುವಂತಿದೆ ಈ ದೃಶ್ಯ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಹಗ್ಗ ಎಳೆದ್ರೂ ಕದಲದೇ ನಿಂತಿದ್ದ ಎಮ್ಮೆ ಕರುವಿಗೆ ಸವಾಲು ಹಾಕಿದ ಪುಟಾಣಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಪುಟಾಣಿಯ ದೂರು ಕೇಳಿ ದೇವ್ರು ಖಂಡಿತ ನಕ್ಕಿರುತ್ತಾರೆ ಎಂದಿದ್ದಾರೆ. ಇನ್ನೊಬ್ಬರು, ಮುಗ್ಧತೆ ಅಂದ್ರೆ ಇದೇ ಅಲ್ಲವೇ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮತ್ತೆ ಮತ್ತೆ ನೋಡಬೇಕೆನಿಸುವ ದೃಶ್ಯ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ