AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಪುಟ್ಟ ಹೆಜ್ಜೆಯಲ್ಲಿ ದೊಡ್ಡ ಜವಾಬ್ದಾರಿ; ಕುಟುಂಬಕ್ಕೆ ಹೆಗಲಾದ ಪುಟ್ಟ ಹುಡುಗಿ

ಮೂರು ಹೊತ್ತಿನ ಊಟಕ್ಕಾಗಿ ಒಬ್ಬೊಬ್ಬರದ್ದು ಒಂದೊಂದು ರೀತಿಯ ಹೋರಾಟ. ಕೆಲ ಜನರ ಬದುಕಿನ ಹೋರಾಟ ಕಂಡಾಗ ನಿಜಕ್ಕೂ ಕಣ್ಣಲ್ಲಿ ನೀರು ಬರುತ್ತದೆ. ಪುಟ್ಟ ಹುಡುಗಿಯೊಬ್ಬಳು ಹಗ್ಗದ ಮೇಲೆ ನಡೆಯುತ್ತಾ ಕುಟುಂಬಕ್ಕಾಗಿ ತನ್ನ ಬಾಲ್ಯವನ್ನೇ ಮಾರಿದ್ದಾಳೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಕಣ್ಣನ್ನು ಒದ್ದೆಯಾಗಿಸಿದೆ.

Video: ಪುಟ್ಟ ಪುಟ್ಟ ಹೆಜ್ಜೆಯಲ್ಲಿ ದೊಡ್ಡ ಜವಾಬ್ದಾರಿ; ಕುಟುಂಬಕ್ಕೆ ಹೆಗಲಾದ ಪುಟ್ಟ ಹುಡುಗಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 11, 2025 | 11:21 AM

Share

ಬದುಕು (life) ಅಂದುಕೊಂಡಷ್ಟು ಸುಲಭವಲ್ಲ. ಕೆಲವರು ಎಲ್ಲಾ ಇದ್ದು ನೆಮ್ಮದಿಗಾಗಿ ಹೋರಾಟ ನಡೆಸಿದರೆ, ಇನ್ನು ಕೆಲವರು ಮೂರು ಹೊತ್ತಿನ ತುತ್ತಿಗಾಗಿ ಹೋರಾಟಕ್ಕೆ ಇಳಿಯುತ್ತಾರೆ. ಬಡತನದಿಂದಾಗಿ ಸಣ್ಣ ವಯಸ್ಸಿನಲ್ಲಿಯೇ ಕುಟುಂಬಕ್ಕೆ ಹೆಗಲರಾಗುತ್ತಾರೆ. ಈ ಪುಟ್ಟ ಹುಡುಗಿಯದು (little girl) ಅದೇ ರೀತಿಯ ಬದುಕು. ಪುಟ್ಟ ಹುಡುಗಿಯೂ ಓದುವ ವಯಸ್ಸಿನಲ್ಲಿ ಈ ಹಗ್ಗದಲ್ಲೇ ನಡೆದಾಡುತ್ತಾ ಜವಾಬ್ದಾರಿ ನಡುವೆ ಹೋರಾಟ ನಡೆಸುತ್ತಿರುವ  ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ.

ಅಡಿಗ ಕ್ಲಿಕ್‌ (adiga_clickz) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗಿಯ  ಹೆಗಲ ಮೇಲೆ ಇರುವ ಮನೆಯ ಜವಾಬ್ದಾರಿಯನ್ನು ನೋಡಬಹುದು. ಕೈಯಲ್ಲಿ ಕೋಲು ಹಿಡಿದುಕೊಂಡು ಹಗ್ಗದ ಮೇಲೆ ನಡೆದಾಡುತ್ತಾ ಈ ಪುಟಾಣಿಯೂ ತನ್ನ ಕುಟುಂಬಕ್ಕೆ ಹೆಗಲಾಗಿದ್ದಾಳೆ. ಇತ್ತ ತಾಯಿ ಮಗಳು ಬೀಳದಂತೆ ನೋಡುತ್ತಾ ಕುಟುಂಬದ ಜವಾಬ್ದಾರಿ ಹೊತ್ತಿರುವ ಪುಟಾಣಿಯ  ಕಲೆಗೆ ಸಾಥ್ ನೀಡುವ ದೃಶ್ಯ ಇದಾಗಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ಈವಾಗ್ಲೇ ಹಿಂಗೇ, ಮುಂದೆ ಹೆಂಗೋ; ನಡು ರಸ್ತೆಯಲ್ಲೇ ಜಗಳಕ್ಕಿಳಿದ ಪುಟಾಣಿಗಳು

ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಬದುಕಿನ ಹೋರಾಟ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಚಿಕ್ಕ ವಯಸ್ಸಿನಲ್ಲಿ ಜವಾಬ್ದಾರಿ ಎಂದರೆ ಇನ್ನೊಬ್ಬರು, ನಿಮ್ಮ ವೀವ್ಸ್ ಗಳಿಗೆ ಅವರ ಬದುಕೇ ಬಂಡವಾಳ, ಆ ಬಂಡವಾಳಕ್ಕೆ ಸಿಗಲಿ ಸರಿಯಾದ ಪ್ರತಿಫಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು