AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಡು ರಸ್ತೆಯಲ್ಲೇ ಹೊತ್ತಿ ಉರಿದ BMW ಕಾರು; ವಿಡಿಯೋ ವೈರಲ್​​

ಐಷಾರಾಮಿ ಕಾರೊಂದು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದೆ. ಕಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿರುವ ದೃಶ್ಯಾವಳಿಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗಾ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

Viral Video: ನಡು ರಸ್ತೆಯಲ್ಲೇ ಹೊತ್ತಿ ಉರಿದ BMW ಕಾರು; ವಿಡಿಯೋ ವೈರಲ್​​
ಸಾಂದರ್ಭಿಕ ಚಿತ್ರImage Credit source: Shutterstock
Follow us
ಅಕ್ಷತಾ ವರ್ಕಾಡಿ
|

Updated on:Jul 25, 2023 | 4:23 PM

ತಮಿಳುನಾಡು: ವಿಶ್ವದ ಪ್ರಮುಖ ಕಾರು ತಯಾರಿಕಾ ಕಂಪನಿಗಳಲ್ಲಿ ಒಂದಾಗಿರುವ ಬಿ ಎಮ್ ಡಬ್ಲ್ಯುದ ಐಷಾರಾಮಿ ಕಾರೊಂದು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದೆ. ಕಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿರುವ ದೃಶ್ಯಾವಳಿಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗಾ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ತಮಿಳುನಾಡಿನ ಚೆನ್ನೈನಲ್ಲಿ ಜನನಿಬಿಡ ರಸ್ತೆಯ ಮಧ್ಯದಲ್ಲಿ ಮಂಗಳವಾರ ಬೆಳಗ್ಗೆ ಐಷಾರಾಮಿ ಬಿಎಂಡಬ್ಲ್ಯು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಹೊಗೆ ಮತ್ತು ಬೆಂಕಿ ಹೊತ್ತಿಕೊಂಡ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಮಾಧ್ಯಮ ವರದಿಗಳ ಪ್ರಕಾರ, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಕಾರಿನಿಂದ ಜಿಗಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲ ಹೊತ್ತಿನಲ್ಲೇ ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿ: Viral Video: ಗುಜರಾತ್; ರಸ್ತೆಯಲ್ಲಿ ಗರ್ಭಾನೃತ್ಯ ಮಾಡಿದ ರೀಲಿಗರನ್ನು ಜೈಲಿಗೆ ಅಟ್ಟಿದ ಪೊಲೀಸರು

ಏಷ್ಯಾನೆಟ್ ನ್ಯೂಸ್ ಪ್ರಕಾರ ತಮಿಳುನಾಡು ರಾಜಧಾನಿ ಕ್ರೋಮ್‌ಪೇಟೆಯಿಂದ ಈ ಘಟನೆ ವರದಿಯಾಗಿದೆ. ಹೊಗೆಯನ್ನು ಗಮನಿಸಿದ ಚಾಲಕ ಕಾರು ನಿಲ್ಲಿಸಿ ಕೂಡಲೇ ವಾಹನದಿಂದ ಜಿಗಿದಿದ್ದಾನೆ. ಆತನನ್ನು 22 ವರ್ಷದ ಪಾರ್ಥಸಾರಥಿ ಎಂದು ಗುರುತಿಸಲಾಗಿದ್ದು, ತಿರುವಲ್ಲಿಕೇಣಿಯಿಂದ ತಿಂಡಿವನಂಗೆ ಪ್ರಯಾಣಿಸುತ್ತಿದ್ದ ಎಂದು ತಿಳಿದು ಬಂದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:09 pm, Tue, 25 July 23

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್