AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನಿಂದ ಗುರಂಗಾವ್‌ಗೆ ಸ್ಥಳಾಂತರಗೊಳ್ಳುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ

ಅದೆಷ್ಟೋ ವರ್ಷಗಳ ಕಾಲ ಒಂದೇ ಊರಿನಲ್ಲಿ ನೆಲೆಸಿ, ಇಲ್ಲಿಂದ ಹೊರಡಬೇಕಾದ ಪರಿಸ್ಥಿತಿ ಬಂದಾಗ, ಆ ನೋವನ್ನು ವಿವರಿಸಲು ಅಸಾಧ್ಯ. ಹೌದು, ಬೆಂಗಳೂರಿನಿಂದ ಗುರಗಾಂವ್‌ಗೆ ಸ್ಥಳಾಂತರಗೊಳ್ಳುವ ಬಗ್ಗೆ ಬಳಕೆದಾರರೊಬ್ಬರು ರೆಡ್ಡಿಟ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ಈ ನಿರ್ಧಾರದ ಹಿಂದಿನ ಕಾರಣವನ್ನು ತಿಳಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ

Viral: ಬೆಂಗಳೂರಿನಿಂದ ಗುರಂಗಾವ್‌ಗೆ ಸ್ಥಳಾಂತರಗೊಳ್ಳುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Feb 04, 2026 | 11:09 AM

Share

ಉದ್ಯೋಗಕ್ಕಾಗಿ ಅನೇಕರು ದೂರದ ಊರು, ರಾಜ್ಯದಿಂದ ಬೆಂಗಳೂರಿಗೆ ಬರುತ್ತಾರೆ. ಹೀಗೆ ಬಂದವರಲ್ಲಿ ಕೆಲವರು ಇಲ್ಲೇ ನೆಲೆಸುತ್ತಾರೆ. ಇನ್ನು ಕೆಲವರು ಅನಿವಾರ್ಯ ಕಾರಣಕ್ಕಾಗಿ ಮಾಯನಗರಿ ಬಿಟ್ಟು ತಮ್ಮ ಊರಿಗೆ ತೆರಳುವುದಿದೆ. ಇದೀಗ ಕಳೆದ ಇಪ್ಪತ್ತು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ನೆಲೆಸಿರುವ ವ್ಯಕ್ತಿಯೊಬ್ಬರು ಗುರಗಾಂವ್‌ಗೆ (Gurgaon) ಹೋಗುವ ನಿರ್ಧಾರ ಮಾಡಿದ್ದಾರೆ. ತನ್ನ ತಂದೆ ತಾಯಿಯನ್ನು ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ. ಈ ರೆಡ್ಡಿಟ್ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರೆಡ್ಡಿಟ್ ಪೋಸ್ಟ್‌ನಲ್ಲಿ, ಬೆಂಗಳೂರಿನಿಂದ ಗುರಗಾಂವ್‌ಗೆ ಸ್ಥಳಾಂತರಗೊಳ್ಳುತ್ತಿದ್ದೇನೆ. ತಮ್ಮ ವಯಸ್ಸಾದ ಪೋಷಕರನ್ನು ನೋಡಿಕೊಳ್ಳಲು ಬೆಂಗಳೂರಿನಲ್ಲಿ ವರ್ಷಗಳ ಕಾಲ ಕಳೆದ ನಂತರ ಅವರು ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ಆದರೆ ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿಯೇ ನೆಲೆಸಿದ್ದೇನೆ. ನನಗೆ ಇಲ್ಲಿ ವೃತ್ತಿಪರ ಮಿತ್ರರು ಮತ್ತು ವೈಯಕ್ತಿಕ ಆತ್ಮೀಯರ ಬಳಗವೇ ಇದೆ. ಮಕ್ಕಳು ಇಲ್ಲೇ ಶಾಲೆಗೆ ಹೋಗುತ್ತಿದ್ದಾರೆ. ನನ್ನ ಹೆತ್ತವರು ಇಲ್ಲಿಗೆ ಬರಲು ಸಿದ್ಧರಿಲ್ಲ, ಆದ್ದರಿಂದ ಅಲ್ಲಿಗೆ ಸ್ಥಳಾಂತರಗೊಳ್ಳಬೇಕಾಗಿದೆ. ಆದರೆ ಗುರಗಾಂವ್‌ನ ಸಕಾರಾತ್ಮಕ ಅಂಶಗಳು ಬೆಂಗಳೂರನ್ನು ಬಿಟ್ಟು ತೆರಳುವ ನೋವನ್ನು ಕಡಿಮೆ ಮಾಡುತ್ತದೆ ಎಂದು ಬರೆದುಕೊಂಡಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

Reddit Post

ಇದನ್ನೂ ಓದಿ: “ನಿಮ್ಮ ಸಂಸ್ಥೆಗಾಗಿ ನನ್ನ ರಕ್ತ ಸುರಿಸಿದ್ದೇನೆ”: ಕಾರಣವಿಲ್ಲದೆ ವಜಾ ಮಾಡಿದ ಕಂಪನಿಗೆ ಹಿಗ್ಗಾಮುಗ್ಗಾ ಜಾಡಿಸಿದ ಬೆಂಗಳೂರಿನ ಯುವಕ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಭಾಷೆ ಬಿಟ್ಟರೆ ನಿಮಗೆ ಬೇರೇನೂ ಸಮಸ್ಯೆ ಆಗಲ್ಲ ಎಂದಿದ್ದಾರೆ. ಮತ್ತೊಬ್ಬರು, ಇಲ್ಲಿ ಒಂದು ಸಮಸ್ಯೆಯಿದೆ. ಗುರಗಾಂವ್‌ನಲ್ಲಿ ಜನರ ಮನಸ್ಥಿತಿ ಅತ್ಯಂತ ಕೆಟ್ಟದಾಗಿದೆ. ಅಲ್ಲದೆ, ದಯವಿಟ್ಟು ಉತ್ತಮ ಗಾಳಿ ಶುದ್ಧೀಕರಣ ಯಂತ್ರದಲ್ಲಿ ಹೂಡಿಕೆ ಮಾಡಲು ಮರೆಯಬೇಡಿ ಎಂದು ಸಲಹೆ ನೀಡಿದ್ದಾರೆ. ಇನ್ನೊಬ್ಬರು, ಎಲ್ಲಿ ನೆಲೆಸಿದರೂ ಆ ಊರನ್ನು ಪ್ರೀತಿಸಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!