Viral Video: ಮೆಟ್ರೋದಲ್ಲಿ ಪರಸ್ಪರ ಚಪ್ಪಲಿ ಹಿಡಿದು ಹೊಡೆದಾಟ; ವಿಡಿಯೋ ವೈರಲ್​​

ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ತನ್ನ ಚಪ್ಪಲಿ ತೆಗೆದು ಬಾಗಿಲ ಬಳಿ ನಿಂತಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ದೆಹಲಿ ಮೆಟ್ರೋದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Viral Video: ಮೆಟ್ರೋದಲ್ಲಿ ಪರಸ್ಪರ ಚಪ್ಪಲಿ ಹಿಡಿದು ಹೊಡೆದಾಟ; ವಿಡಿಯೋ ವೈರಲ್​​
Follow us
ಅಕ್ಷತಾ ವರ್ಕಾಡಿ
|

Updated on:Jul 31, 2024 | 12:09 PM

ದೆಹಲಿ: ದೆಹಲಿ ಮೆಟ್ರೋ ರೈಲು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಜಗಳ ಮತ್ತು ಜೋಡಿಗಳು ಅಸಭ್ಯ ಕೃತ್ಯಗಳ ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಇದೀಗ ದೆಹಲಿ ಮೆಟ್ರೋದಲ್ಲಿ ಇಬ್ಬರು ಪುರುಷರು ಹೊಡೆದಾಡಿಕೊಂಡಿರುವ ವಿಡಿಯೋವೊಂದು ವೈರಲ್​​ ಆಗಿದೆ.

ದೆಹಲಿ ಮೆಟ್ರೋ ರೈಲಿನೊಳಗೆ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವ್ಯಕ್ತಿಯೊಬ್ಬ ತನ್ನ ಚಪ್ಪಲಿ ತೆಗೆದು ಬಾಗಿಲ ಬಳಿ ನಿಂತಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ವ್ಯಕ್ತಿ ಚಪ್ಪಲಿಯಿಂದ ವ್ಯಕ್ತಿಯ ಮುಖಕ್ಕೆ ಹೊಡೆದ ನಂತರ ಆ ವ್ಯಕ್ತಿ ಕೋಪಗೊಂಡು ಹಿಂದಕ್ಕೆ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮೆಟ್ರೋದಲ್ಲಿದ್ದ ಸಹ ಪ್ರಯಾಣಿಕರೊಬ್ಬರು ಇವರಿಬ್ಬರ ಹೊಡೆದಾಟದ ವಿಡಿಯೋ ಸೆರೆಹಿಡಿದು, ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯನ್ನು ಹತ್ಯೆಗೈದು ಮೃತದೇಹ ಗಂಗಾ ನದಿಗೆ ಎಸೆದ ದುಷ್ಕರ್ಮಿಗಳು; ವಿಡಿಯೋ ಇಲ್ಲಿದೆ ನೋಡಿ

@Haqikat_Aap_Tak ಎಂಬ ಟ್ವಿಟರ್​​ ಖಾತೆಯಲ್ಲಿ ಜುಲೈ 30ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಚಪ್ಪಲಿಯಿಂದ ಹಲ್ಲೆ ನಡೆಸುತ್ತಿರುವ ವ್ಯಕ್ತಿ ಮದ್ಯಪಾನ ಮಾಡಿದ್ದು, ಕುಡಿದ ಮತ್ತಿನಲ್ಲಿ ಈ ರೀತಿ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಅಸಭ್ಯವಾಗಿ ವರ್ತಿಸುವವರ ವಿರುದ್ಧ ತೀವ್ರ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Wed, 31 July 24

ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್