AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯನ್ನು ಕೊಂದು, ಮೃತದೇಹದೊಂದಿಗೆ ಸೆಲ್ಫಿ ತೆಗೆದು ಸಂಬಂಧಿಕರಿಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಂಡ ಪತಿ

ಪತ್ನಿ ಕೆಲಸಕ್ಕೆ ತೆರಳುವ ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ. ಕೋಪಗೊಂಡ ಪತಿ ಶಾಲು ಒಂದನ್ನು ಬಳಸಿ ಪತ್ನಿಯ ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಆಕೆಯ ದೇಹವನ್ನು ತನ್ನ ಮಡಿಲಲ್ಲಿಟ್ಟುಕೊಂಡು ಸೆಲ್ಫಿ ತೆಗೆದು ಸಂಬಂಧಿಕರಿಗೆ ಕಳುಹಿಸಿದ್ದಾನೆ. ಫೋಟೋ ಕಂಡು ಆಘಾತಕ್ಕೊಳಗಾದ ಸಂಬಂಧಿಕರು ಆತನ ಮನೆಗೆ ಓಡೋಡಿ ಬಂದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಆತನೂ ಕೂಡ ನೇಣಿಗೆ ಶರಣಾಗಿದ್ದಾನೆ.

ಪತ್ನಿಯನ್ನು ಕೊಂದು, ಮೃತದೇಹದೊಂದಿಗೆ ಸೆಲ್ಫಿ ತೆಗೆದು ಸಂಬಂಧಿಕರಿಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಂಡ ಪತಿ
Follow us
ಅಕ್ಷತಾ ವರ್ಕಾಡಿ
|

Updated on:May 18, 2024 | 4:28 PM

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು, ಬಳಿಕ ಮೃತದೇಹವನ್ನು ಮಡಿಲಲ್ಲಿ ಇಟ್ಟುಕೊಂಡು ಸೆಲ್ಫಿ ತೆಗೆದು, ಸಂಬಂಧಿಸಿಕರಿಗೆ ಫೋಟೋ ಕಳುಹಿಸಿ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​​ನಲ್ಲಿ ನಡೆದಿದೆ. ಎಟಾಹ್ ಜಿಲ್ಲೆಯ ಈ ದಂಪತಿಗಳು ಗಾಜಿಯಾಬಾದ್‌ನಲ್ಲಿ ನೆಲೆಸಿದ್ದರು. ಪತಿ ಸ್ಥಳೀಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ನೋಯ್ಡಾದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಳು. ಪತ್ನಿ ಕೆಲಸಕ್ಕೆ ತೆರಳುವ ವಿಚಾರದಲ್ಲಿ ಇಬ್ಬರ ನಡುವೆ ಹಲವು ಬಾರಿ ಜಗಳವಾಗಿತ್ತು. ಕೌಟುಂಬಿಕ ಕಲಹ ಘಟನೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಪತ್ನಿ ಕೆಲಸಕ್ಕೆ ತೆರಳುವ ವಿಚಾರದಲ್ಲಿ ಇಬ್ಬರ ನಡುವೆ ಹಲವು ಬಾರಿ ಜಗಳವಾಗಿತ್ತು. ಆದರೆ ಎರಡುದಿನಗಳ ಹಿಂದೆ ನಡೆದ ಜಗಳ ತಾರಕ್ಕಕೇರಿದ್ದು, ಕೋಪಗೊಂಡ ಪತಿ ಶಾಲು ಒಂದನ್ನು ಬಳಸಿ ಪತ್ನಿಯ ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಆಕೆಯ ದೇಹವನ್ನು ತನ್ನ ಮಡಿಲಲ್ಲಿಟ್ಟುಕೊಂಡು ಸೆಲ್ಫಿ ತೆಗೆದು ಸಂಬಂಧಿಕರಿಗೆ ಕಳುಹಿಸಿದ್ದಾನೆ. ಫೋಟೋ ಕಂಡು ಆಘಾತಕ್ಕೊಳಗಾದ ಸಂಬಂಧಿಕರು ಆತನ ಮನೆಗೆ ಓಡೋಡಿ ಬಂದಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಪತ್ನಿಯನ್ನು ಕೊಂದ ಬೆನ್ನಲ್ಲೇ ಆತನೂ ಕೂಡ ನೇಣಿಗೆ ಶರಣಾಗಿದ್ದಾನೆ. ತಕ್ಷಣ ಸಂಬಂಧಿಕರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಎರಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ನೀನು ದೇವತೆ ತಾಯಿ, ಕೊಚ್ಚಿ ಹೋಗುತ್ತಿದ್ದ ಶ್ವಾನವನ್ನು ಕಾಪಾಡಿದ ಯುವತಿ

ಪೊಲೀಸ್ ಉಪ ಕಮಿಷನರ್ (ದೇಹತ್) ವಿವೇಕ್ ಕುಮಾರ್ ಯಾದವ್, “ಪತಿ ಮೊದಲು ತನ್ನ ಹೆಂಡತಿಯನ್ನು ಸ್ಕಾರ್ಫ್‌ನಿಂದ ಕತ್ತು ಹಿಸುಕಿ ನಂತರ ಅದೇ ಸ್ಕಾರ್ಫ್ ಬಳಸಿ ನೇಣು ಹಾಕಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೃತ ಪತ್ನಿಯೊಂದಿಗೆ ಸೆಲ್ಫಿ ತೆಗೆದು 5-6 ಮಂದಿ ಸಂಬಂಧಿಕರಿಗೆ ಕಳುಹಿಸಿದ್ದಾರೆ” ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:27 pm, Sat, 18 May 24