Video: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಎದೆಯನ್ನು ಸ್ಪರ್ಶಿಸಿ ಬೈಕಿನಲ್ಲಿ ಪರಾರಿಯಾಗಿದ್ದ ಆರೋಪಿ ಕಿಶನ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಎದೆಯನ್ನು ಸ್ಪರ್ಶಿಸಿ ಯುವಕನೊಬ್ಬ ಬೈಕ್ನಲ್ಲಿ ಪರಾರಿಯಾಗಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಕಿಶನ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ. ನವೆಂಬರ್ 7ರಂದು ಘಟನೆ ನಡೆದಿದ್ದು, ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. @SachinGuptaUP ಎಂಬ ಹೆಸರಿನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಒಂದೇ ದಿನದಲ್ಲಿ 60 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ನಡುರಸ್ತೆಯಲ್ಲೇ ನಿಂತು ಮೂತ್ರ ವಿಸರ್ಜಿಸಿದ ಪೊಲೀಸ್
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos