AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರೈಲಿನಲ್ಲಿ ಖಾಸಗಿ ಅಂಗ ತೋರಿಸಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

ಎಷ್ಟೇ ಕಾನೂಕು ಕ್ರಮಗಳನ್ನು ಜಾರಿಗೆ ತಂದ್ರೂ ಕಾಮುಕ ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಮಹಿಳೆಯರಿಗೆ ಕಿರುಕುಳವನ್ನು ನೀಡುತ್ತಲೇ ಇರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಚಲಿಸುತ್ತಿರುವ ರೈಲಿನಲ್ಲಿ ಮಹಿಳಾ ಪ್ರಯಾಣಿಕರಿಗೆ ತನ್ನ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದು, ದಿಟ್ಟ ಮಹಿಳೆಯೊಬ್ಬರು ಆತನಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಎಲ್ರ ಮುಂದೆ ಆತನ ಗ್ರಹಚಾರ ಬಿಡಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ರೈಲಿನಲ್ಲಿ ಖಾಸಗಿ ಅಂಗ ತೋರಿಸಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Sep 09, 2024 | 5:30 PM

Share

ಇತ್ತೀಚಿಗಂತೂ ಮಹಿಳೆಯರು ಹೊರಗಡೆ ಓಡಾಡುವುದೇ ಕಷ್ಟಸಾಧ್ಯವಾಗಿದೆ. ಹೌದು ಕೆಲ ವಿಕೃತ ಮನಸ್ಸಿನ ಪುರುಷರು ದಾರಿಯಲ್ಲಿಯೋ ಅಥವಾ ಜನಜಂಗಳಿಯ ಪ್ರದೇಶದಲ್ಲಿಯೋ ಹೆಣ್ಣು ಮಕ್ಕಳ ಮೈ ಮುಟ್ಟಿ ಅಥವಾ ಅವರ ಮುಂದೆ ಖಾಸಗಿ ಅಂಗ ಪ್ರದರ್ಶಿಸಿ ದುರ್ವರ್ತನೆಯನ್ನು ತೋರುತ್ತಿರುತ್ತಾರೆ. ಆದರೆ ಹೆಚ್ಚಿನವರು ಭಯದಿಂದ ಈ ಬಗ್ಗೆ ಧ್ವನಿ ಎತ್ತುವುದಿಲ್ಲ. ಇಂತಹ ಸಾಕಷ್ಟು ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿ ಮಹಿಳಾ ಪ್ರಯಾಣಿಕರಿಗೆ ತನ್ನ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ದಿಟ್ಟ ಮಹಿಳೆಯೊಬ್ಬರು ಆತನಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಎಲ್ರ ಮುಂದೆ ಆತನ ಗ್ರಹಚಾರ ಬಿಡಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮೊಹಮ್ಮದ್‌ ತುಫೈಲ್‌ ಎಂಬಾತ ರೈಲಿನಲ್ಲಿ ಕುಳಿತು ಮಹಿಳಾ ಪ್ರಯಾಣಿಕರ ಮುಂದೆ ತನ್ನ ಖಾಸಗಿ ಅಂಗವನ್ನು ಪ್ರದರ್ಶಿಸಿದ್ದಾನೆ. ಇದನ್ನು ಕಂಡ ದಿಟ್ಟ ಮಹಿಳೆಯೊಬ್ಬರು ಬಾರೋ ಈಗ ಎಲ್ರ ಮುಂದೆ ತೋರಿಸೋ ಬಾ ಎಂದು ಹೇಳಿ ಆ ಕಾಮುಕನಿಗೆ ಎಲ್ಲರ ಮುಂದೆ ಹಿಗ್ಗಾಮುಗ್ಗಾ ಥಳಿಸಿ ಚಪ್ಪಲಿ ಸೇವೆ ಮಾಡಿದ್ದಾರೆ. ಈ ಕುರಿತ ಪೋಸ್ಟ್‌ ಒಂದನ್ನು RealBabanaras ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋದಲ್ಲಿ ರೈಲಿನಲ್ಲಿ ಮಹಿಳೆಯರ ಮುಂದೆ ಖಾಸಗಿ ಅಂಗ ಪ್ರದರ್ಶಿಸಿದ ಮೊಹಮ್ಮದ್‌ ತುಫೈಲ್‌ ಎಂಬಾತನ ಕಪಾಳಕ್ಕೆ ಚಪ್ಪಲಿ ಏಟು ನೀಡಿ, ಈಗ ತೋರಿಸೋ ಬಾ ಎಂದು ಹೇಳುತ್ತಾ ಆತನಿಗೆ ಹಿಗ್ಗಾಮುಗ್ಗಾ ಥಳಿಸುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಪ್ರವಾಹದ ಅಬ್ಬರಕ್ಕೆ ಕಾರು ಸಮೇತ ಕೊಚ್ಚಿ ಹೋದ ದಂಪತಿ, ರಕ್ಷಣಾ ಕಾರ್ಯ ಹೇಗಿತ್ತು ನೋಡಿ

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 73 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ನಮ್ಮ ದೇಶದ ನಾರಿ ಶಕ್ತಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇನ್ನೂ ಸರಿಯಾಗಿ ಬಾರಿಸಬೇಕಿತ್ತು ಆತನಿಗೆʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ