AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಾತ್ರಿ 12 ಗಂಟೆಯಾದ್ರು ಮುಗಿಯದ ಕೆಲಸ; ಬೈಕ್‌ನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತ ವ್ಯಕ್ತಿ

ಕೆಲಸ ಮಾಡೋದು ಅನಿವಾರ್ಯ. ಹೀಗಾಗಿ ಕೆಲವರು ರಾತ್ರಿ ಹಗಲೆನ್ನದೇ ದುಡೀತಾರೆ. ಆದರೆ ಈ ವರ್ಕ್ ಲೈಫ್ ಹಾಗೂ ಪರ್ಸನಲ್ ಲೈಫ್ ಬ್ಯಾಲೆನ್ಸ್ ಮಾಡೋದು ಹೇಳುವಷ್ಟು ಸುಲಭವಲ್ಲ. ವ್ಯಕ್ತಿಯೊಬ್ಬ ಮಧ್ಯ ರಾತ್ರಿ ವೇಳೆ ತನ್ನ ಬೈಕ್‌ನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತು ಆಫೀಸ್ ಕೆಲಸದಲ್ಲಿ ಬ್ಯುಸಿಯಾಗಿದ್ದಾನೆ. ಈ ವಿಡಿಯೋ ಭಾರತೀಯ ಕಾರ್ಪೊರೇಟ್ ಸಂಸ್ಕೃತಿಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ರಾತ್ರಿ 12 ಗಂಟೆಯಾದ್ರು ಮುಗಿಯದ ಕೆಲಸ; ಬೈಕ್‌ನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತ ವ್ಯಕ್ತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Apr 08, 2026 | 7:09 PM

Share

ಕೆಲಸದ ಸ್ಥಳಗಳಲ್ಲಿ ಕೆಲ ಉದ್ಯೋಗಿಗಳು (employees) ಅನುಭವಿಸುವ ಒತ್ತಡ ಹೇಳಲಾಗದು. ಆದರೆ ಏನ್ ಮಾಡೋದು, ಕೆಲಸ ಮಾಡದೇ ಇದ್ದರೆ ವಿಧಿಯಿಲ್ಲ. ಅದರಲ್ಲೂ ಈ ಕಾರ್ಪೊರೇಟ್‌ ಜಗತ್ತಿನಲ್ಲಿ ಒತ್ತಡ ಡಬಲ್ ಆಗಿರುತ್ತದೆ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ದೃಶ್ಯ. ವ್ಯಕ್ತಿಯೊಬ್ಬ ರಾತ್ರಿ 12 ಗಂಟೆಯಾದ್ರು ಮನೆಗೆ ಹೋಗದೇ ಬೈಕ್‌ನಲ್ಲಿ ಲ್ಯಾಪ್ ಟಾಪ್ ಹಿಡಿದು ಕುಳಿತು ಆಫೀಸ್ ಕೆಲಸ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

@ravi_bhojane ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ನಗರದ ಹೆಚ್ಚಿನ ಜನರು ನಿದ್ರಿಸುತ್ತಿರುವ ಸಮಯದಲ್ಲಿ ಅಂದರೆ ತಡರಾತ್ರಿ 12:15 ಕ್ಕೆ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಲ್ಯಾಪ್ ಟಾಪ್ ತೆರೆದು ಕುಳಿತು ಕೆಲಸ ಮಾಡುತ್ತಿರುವುದನ್ನು ಕಾಣಬಹುದು. ಈ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ವ್ಯಕ್ತಿಯೊಬ್ಬ ಸೆರೆ ಹಿಡಿದಿದ್ದು, ಕೆಲಸದಲ್ಲಿ ಬ್ಯುಸಿಯಾಗಿರುವ ವ್ಯಕ್ತಿಯನ್ನು ಮಾತನಾಡಿಸಿದ್ದಾನೆ. ಕೆಲಸ ಮಾಡುತ್ತಿರುವ ಬಗ್ಗೆ ವಿಚಾರಿಸಿದಾಗ ಲ್ಯಾಪ್ ಟಾಪ್ ಹಿಡಿದು ಕುಳಿತ ವ್ಯಕ್ತಿಯೂ ಏನು ಮಾತನಾಡದೇ ನಕ್ಕಿದ್ದಾನೆ.

ವೈರಲ್‌ ವಿಡಿಯೋ ಇಲ್ಲಿದೆ

View this post on Instagram

A post shared by Ravi Bhojane (@ravi_bhojane)

ಇದನ್ನೂ ಓದಿ: ಕಾರ್ಪೊರೇಟ್ ಕೆಲಸ ತೊರೆದು ಕ್ಲೌಡ್ ಕಿಚನ್ ಶುರು ಮಾಡಿದ ಯುವ ಉದ್ಯಮಿ!

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಇದು ಕಾರ್ಪೋರೆಟ್ ಜಗತ್ತು ಎಂದು ಹೇಳಿದ್ದಾರೆ. ಇನ್ನೊಬ್ಬರು, ಅಣ್ಣ ಮನೆಗೆ ಹೋಗಿ ಮಲಗು ಎಂದಿದ್ದಾರೆ. ಮತ್ತೊಬ್ಬರು, ಕಳೆದ ವಾರ ನನ್ನ ಪರಿಸ್ಥಿತಿ ಇದೇ ಆಗಿತ್ತು ಎಂದು ವಾಸ್ತವ ಸ್ಥಿತಿ ವಿವರಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us