AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೂ ಮುನ್ನ ಇಬ್ಬರ ಜತೆ ಪ್ರೀತಿ, ಎರಡೆರಡು ಮಗು ಕರುಣಿಸಿ ಕೊನೆಗೂ ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ

ಇಬ್ಬರನ್ನೂ ಮೂರು ವರ್ಷಗಳಿಂದ ಪ್ರೀತಿಸಿದ್ದ, ಜೊತೆಗೆ ಸಂಸಾರವನ್ನು ನಡೆಸಿದ್ದಾನೆ. ಸುನಿತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಸ್ವಪ್ನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮದುವೆಗೂ ಮುನ್ನ ಇಬ್ಬರ ಜತೆ ಪ್ರೀತಿ, ಎರಡೆರಡು ಮಗು ಕರುಣಿಸಿ ಕೊನೆಗೂ ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ
ಒಂದೇ ಮಂಟಪದಲ್ಲಿ ಇಬ್ಬರನ್ನೂ ಮದುವೆImage Credit source: etvbharat
ಅಕ್ಷತಾ ವರ್ಕಾಡಿ
|

Updated on: Mar 10, 2023 | 4:05 PM

Share

ತೆಲಂಗಾಣ ಮೂಲದ ವ್ಯಕ್ತಿಯೊಬ್ಬ ಒಂದೇ ಮಂಟಪದಲ್ಲಿ ತನ್ನ ಇಬ್ಬರು ಪ್ರೇಮಿಗಳನ್ನು ಮದುವೆಯಾಗಿದ್ದಾನೆ. ಈತ ಇಬ್ಬರು ಯುವತಿಯರೊಂದಿಗೆ ಕಳೆದ ಮೂರು ವರ್ಷಗಳಿಂದ ಸಂಬಂಧವನ್ನು ಹೊಂದಿದ್ದು, ಇಬ್ಬರೂ ಮಹಿಳೆಯರಿಗೂ ತಲಾ ಒಂದು ಮಗುವನ್ನು ಕರುಣಿಸಿದ್ದಾನೆ. ತೆಲಂಗಾಣದ ಬುಡಕಟ್ಟು ಸಮುದಾಯದ ಭದ್ರಾದ್ರಿ-ಕೊತಗುಡೆಂ ಜಿಲ್ಲೆಯ ಚೆರ್ಲಾ ಮಂಡಲದ ಎರ್ರಬೋರು ಗ್ರಾಮದ ಸತ್ತಿಬಾಬು ಎಂಬಾತ ಒಂದೇ ಮಂಟಪದಲ್ಲಿ ಸ್ವಪ್ನಾ ಮತ್ತು ಸುನೀತಾ ಎಂಬ ಇಬ್ಬರು ಮಹಿಳೆಯರಿಗೆ ತಾಳಿ ಕಟ್ಟಿದ್ದಾನೆ. ಇಬ್ಬರನ್ನೂ ಮೂರು ವರ್ಷಗಳಿಂದ ಪ್ರೀತಿಸಿದ್ದ, ಜೊತೆಗೆ ಸಂಸಾರವನ್ನು ನಡೆಸಿದ್ದಾನೆ. ಸುನಿತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಸ್ವಪ್ನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಗುರುವಾರ ಬೆಳಗ್ಗೆ ಮದುವೆ ನಡೆಯಬೇಕಿತ್ತು ಆದರೆ ಸುದ್ದಿ ಹಬ್ಬಿತ್ತು ಮದುವೆ ಮೂರು ಕುಟುಂಬಗಳಲ್ಲಿ ಭೀತಿಯನ್ನು ಸೃಷ್ಟಿಸಿ, ಯಾವುದೇ ತೊಂದರೆಯಾಗದಂತೆ ಮದುವೆಯನ್ನು ಮುಂದೂಡಲಾಯಿತು. ಮದುವೆ ವಿಚಾರವಾಗಿ ಇಬ್ಬರು ಮಹಿಳೆಯರ ಕುಟುಂಬಗಳ ನಡುವೆ ಜಗಳ ನಡೆದಿದೆ. ಆದರೆ, ಸತ್ತಿಬಾಬು ಇಬ್ಬರನ್ನೂ ಮದುವೆಯಾಗುವುದಾಗಿ ಹೇಳಿದ್ದಾನೆ. ಅದರಂತೆಯೇ ಎರಡೂ ವಧುಗಳ ಹೆಸರನ್ನು ಹೊಂದಿರುವ ಮದುವೆಯ ಆಮಂತ್ರಣಗಳನ್ನು ಸಹ ಮುದ್ರಿಸಿದ್ದರು. ಈ ವಿಷಯ ಇಡೀ ವೈರಲ್​ ಆಗುತ್ತಿದ್ದಂತೆ ಅಧಿಕಾರಿಗಳು ಮದುವೆ ನಿಲ್ಲಿಸುವ ಭೀತಿ ಹುಟ್ಟಿದೆ. ಇದರಿಂದಾಗಿ ತುರಾತುರಿಯಲ್ಲಿ ಇಬ್ಬರ ಕೊರಳಿಗೂ ಒಂದೇ ಮಂಟಪದಲ್ಲಿ ತಾಳಿ ಕಟ್ಟಿದ್ದಾನೆ. ಗುರುವಾರ ಆಗಬೇಕಿದ್ದ ಮದುವೆಯನ್ನು ಹೆದರಿ ಬುಧವಾರ ರಾತ್ರಿಯೇ ಇಬ್ಬರಿಗೂ ತಾಳಿ ಕಟ್ಟಿದ್ದಾನೆ.

ಇದನ್ನೂ ಓದಿ: ಟ್ರಾಫಿಕ್​​ ನಿಯಮ ಉಲ್ಲಂಘಿಸಿ ಹೀಗೊಂದು ರೊಮ್ಯಾನ್ಸ್​​ , ವೈರಲ್​ ವಿಡಿಯೋ ಇಲ್ಲಿದೆ ನೋಡಿ

ಸುನಿತಾ ಮಗುವಿಗೆ ಜನ್ಮ ನೀಡಿದ್ದು, ಸತ್ತಿಬಾಬು ಸುನೀತಾಳೊಂದಿಗೆ ಲಿವ್-ಇನ್ ಸಂಬಂಧದಲ್ಲಿರುವುದು ಸ್ವಪ್ನಾಗೆ ತಿಳಿದಾಗ, ಆಕೆಯು ಅದೇ ಮನೆಯಲ್ಲಿ ಉಳಿಯಲು ನಿರ್ಧರಿಸಿದ್ದಾರೆ. ನಂತರ ಅವರ ಪೋಷಕರು ಅದನ್ನು ಒಪ್ಪಿ ಮೂವರು ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದಾರೆ. ಬುಡಕಟ್ಟು ಸಮುದಾಯದಲ್ಲಿ ಇಂತಹ ಮದುವೆಗಳು ಹೊಸತೇನಲ್ಲಾ, 2021 ರಲ್ಲಿ, ತೆಲಂಗಾಣದ ಆದಿಲಾಬಾದ್ ಜಿಲ್ಲೆಯ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಚಿಕ್ಕಮ್ಮನ ಇಬ್ಬರು ಹೆಣ್ಣುಮಕ್ಕಳನ್ನು ವಿವಾಹವಾಗಿದ್ದನು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು