AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ಕಾರ್ಪೋರೆಟ್ ಜಗತ್ತು; ಟ್ರಾಫಿಕ್ ಜಾಮ್‌ ನಡುವೆಯೇ ಬೈಕ್‌ನಲ್ಲಿ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಿದ ವ್ಯಕ್ತಿ

ದುಡಿಯೋದು ಅನಿವಾರ್ಯ, ಹೀಗಾಗಿ ಕೆಲವರು ಹಗಲು ರಾತ್ರಿ ಎನ್ನದೇ ದುಡಿಯುತ್ತಾರೆ. ಈ ಕಾರ್ಪೋರೇಟ್ ಜಗತ್ತಿನಲ್ಲಿ ಒತ್ತಡ ಹೆಚ್ಚು. ಇಲ್ಲೊಬ್ಬ ಉದ್ಯೋಗಿಯದ್ದು ಅದೇ ಕಥೆ. ಟ್ರಾಫಿಕ್ ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬ ತನ್ನ ಬೈಕ್ ಮೇಲೆ ಲ್ಯಾಪ್ ಟಾಪ್ ಹಿಡಿದು ಕೆಲಸ ಮಾಡಲು ಶುರು ಮಾಡಿದ್ದಾನೆ. ಇದು ಭಾರತೀಯ ಕೆಲಸದ ಸಂಸ್ಕೃತಿಯ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Video:  ಇದು ಕಾರ್ಪೋರೆಟ್ ಜಗತ್ತು; ಟ್ರಾಫಿಕ್ ಜಾಮ್‌ ನಡುವೆಯೇ ಬೈಕ್‌ನಲ್ಲಿ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಿದ ವ್ಯಕ್ತಿ
ವೈರಲ್‌ ಪೋಸ್ಟ್‌Image Credit source: Twitter
ಸಾಯಿನಂದಾ
|

Updated on: Jul 23, 2026 | 11:00 AM

Share

ಕಾರ್ಪೊರೇಟ್ (Corporate) ಜಗತ್ತೇ ಹಾಗೆ, ಕೈ ತುಂಬಾ ಸಂಬಳ ಸಿಕ್ಕಿದ್ರು ಒತ್ತಡ ಮಾತ್ರ ಹೆಚ್ಚೇ ಆಗುತ್ತದೆ ಹೊರತು ಕಡಿಮೆಯಾಗಲ್ಲ. ಈ ಉದ್ಯೋಗಿಯದ್ದು ಅದೇ ಪಾಡಾಗಿದೆ. ಹೌದು, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ತನ್ನ ಲ್ಯಾಪ್ ಟಾಪ್ ತೆರೆದು ಕುಳಿತು ಕೆಲಸ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾನೆ. ಈ ವಿಡಿಯೋ ಈ ವ್ಯಕ್ತಿಗೆ ಕೆಲಸದ ಒತ್ತಡ ಎಷ್ಟಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಈ ಕ್ಲಿಪಿಂಗ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಟೀಕಿಸಿದ್ದಾರೆ.

ಸಾಫ್ಫ್ರೆಂನ್ ಚಾರ್ಜರ್ಸ್ (Saffron Chargers) ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ಗೆ ಸಿಗ್ನಲ್ ನಲ್ಲಿ 5 ನಿಮಿಷಗಳ ಟ್ರಾಫಿಕ್ ಜಾಮ್. ಆದರೆ ಈ ವ್ಯಕ್ತಿ ಬೈಕ್ ಮೇಲೆ ಕುಳಿತು, ತನ್ನ ಲ್ಯಾಪ್‌ಟಾಪ್ ತೆಗೆದು ಕೆಲಸ ಮಾಡಲು ಪ್ರಾರಂಭಿಸಿದ್ದಾನೆ. 8 ಗಂಟೆಗಳ ಕೆಲಸದ ಬಳಿಕವು ಅವನು ಮನೆಗೆ ಹೋಗುವ ದಾರಿಯಲ್ಲಿ ಕೆಲಸ ಮಾಡಬೇಕಾಗಿದೆ. ಮನೆ ತಲುಪಿದ ಬಳಿಕ ಈ ಕೆಲಸವು ಮುಂದುವರೆಯುತ್ತದೆ. ಭಾರತದಲ್ಲಿ ಜನರು ನಿಧಾನವಾಗಿ ಯಂತ್ರಗಳಾಗಿ ಬದಲಾಗಿದ್ದಾರೆ ಎಂದು ಶೀರ್ಷಿಕೆ ನೀಡಲಾಗಿದೆ.

ವೈರಲ್‌ ಪೋಸ್ಟ್‌ ಇಲ್ಲಿದೆ

ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ 5 ನಿಮಿಷದ ಸಿಗ್ನಲ್ ನನ್ನು ಬಳಸಿಕೊಂಡಿದ್ದಾನೆ. ವ್ಯಕ್ತಿಯೊಬ್ಬ ಟ್ರಾಫಿಕ್ ಜಾಮ್ ನಡುವೆ ಬೈಕ್ ಮೇಲೆ ತನ್ನ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಲು ಕುಳಿತುಕೊಂಡಿರುವ ದೃಶ್ಯ ಕಾಣಬಹುದು.

ಇದನ್ನೂ ಓದಿ: ಓವರ್ ಟೈಮ್ ಡ್ಯೂಟಿ ಮಾಡಿದ್ರೂ ಸಂಬಳ ಹೆಚ್ಚು ಕೊಡಲ್ಲ; ಮ್ಯಾನೇಜರ್ ವರ್ತನೆಗೆ ಬೇಸತ್ತು ಜಾಬ್ ರಿಸೈನ್ ಮಾಡಿದ ಉದ್ಯೋಗಿ

ಈ ವಿಡಿಯೋ ಐದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತಂತ್ರಜ್ಞಾನ ಅವಕಾಶಗಳನ್ನು ಸೃಷ್ಟಿಸುತ್ತಿದೆ, ಆದರೆ ವೈಯುಕ್ತಿಕ ಸಮಯವನ್ನು ಕಸಿದುಕೊಳ್ಳುತ್ತಿದೆ ಎಂದಿದ್ದಾರೆ. ಇನ್ನೊಬ್ಬರು, ನನ್ನ ಪರಿಸ್ಥಿತಿ ಕೂಡ ಹೀಗೆಯೇ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಕಾರ್ಪೊರೇಟ್ ಜಗತ್ತು ಉದ್ಯೋಗಿಗಳನ್ನು ಶೋಷಿಸುತ್ತಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!