AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ಸಾಥ್ ನೀಡಿದ ತಾಯಾನೆ

ಮನುಷ್ಯರೇ ಇರಲಿ, ಪ್ರಾಣಿಗಳೇ ಇರಲಿ, ತಾಯಿ ಪ್ರೀತಿ ಮಾತ್ರ ಬದಲಾಗಲ್ಲ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮರಿಯಾನೆಯೊಂದು ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ತಾಯಾನೆಯೊಂದು ಬೀಳದಂತೆ ತಡೆದಿದೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ಸಾಥ್ ನೀಡಿದ ತಾಯಾನೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Sep 18, 2026 | 5:48 PM

Share

ತಾಯಿ ಪ್ರೀತಿ (mother love) ಎಂದು ಬಂದಾಗ ಪ್ರಾಣಿಗಳು ಕೂಡ ತನ್ನ ಕಂದಮ್ಮಗಳ ಮೇಲೆ ಕಾಳಜಿ ವಹಿಸುತ್ತವೆ, ರಕ್ಷಣೆಗೆ ನಿಲ್ಲುತ್ತವೆ. ಇದೀಗ ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ತಾಯಾನೆ ಆಸರೆಯಾಗಿ ನಿಂತಿದೆ. ಹೌದು, ತನ್ನ ಸೊಂಡಿಲನ್ನು ಬಳಸಿ ತನ್ನ ಕಂದಮ್ಮ ಬೀಳದಂತೆ ಜೋಪಾನವಾಗಿ ಹಿಡಿದುಕೊಂಡಿದೆ. ತಾಯಿ ಪ್ರೀತಿ ಕಾಳಜಿ ಸಾರುವ ಈ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

ಎದ್ದು ನಿಲ್ಲಲು ಕಷ್ಟ ಪಡುತ್ತಿದ್ದ ಕಂದಮ್ಮನಿಗೆ ತಾಯಾನೆಯ ಸಾಥ್

ಫ್ಯೂಚರ್ ಫಾರ್ ಎಲಿಫೆಂಟ್ಸ್ (Future for elephants) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶುದ್ಧ ಪ್ರೀತಿಯನ್ನು ಸಾರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಪುಟಾಣಿ ಆನೆಯೊಂದು ನಿಧಾನವಾಗಿ ಎದ್ದು ನಿಲ್ಲಲು ಪ್ರಯತ್ನಿಸಿದೆ. ಇದೇ ವೇಳೆ ತಾಯಾನೆ ತನ್ನ ಕಂದಮ್ಮ ಬೀಳದಂತೆ ಸೊಂಡಿಲಿನಿಂದ ಹಿಡಿದುಕೊಂಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸೊಂಡಿಲನ್ನು ಗಿರಗಿರನೆ ತಿರುಗಿಸಿದ ಮರಿಯಾನೆ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಇದುವರೆಗೆ 2.4 ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತನ್ನ ತಾಯಿಯ ಸಹಾಯದಿಂದ ಎದ್ದು ನಿಲ್ಲುವ ಕಂದಮ್ಮನದ್ದು ಎಂತಹ ಸಾಧನೆ ಎಂದಿದ್ದಾರೆ. ಇನ್ನೊಬ್ಬರು, ಕಂದಮ್ಮನಿಗೆ ತಾಯಿಯ ಪ್ರೀತಿ ಆರೈಕೆ ಬೇಕು ಎಂದು ಹೇಳಿದ್ದಾರೆ. ಮತ್ತೊಬ್ಬರು, ಅಮ್ಮನಿಗೆ ಏನು ಮಾಡ್ಬೇಕು ಅನ್ನೋದು ಗೊತ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Fri, 18 September 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು