AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದ್ವಾಪರ ಯುಗವನ್ನು ನೆನಪಿಸುವಂತಿದೆ ಈ ದೃಶ್ಯ, ಗೋವಿನ ಮುಂದೆ ಗರಿ ಬಿಚ್ಚಿ ಕುಣಿದ ಮಯೂರಿ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಹಾಗೂ ಪಕ್ಷಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಇಂಟರೆಸ್ಟಿಂಗ್‌ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇವುಗಳಲ್ಲಿ ಕೆಲವೊಂದು ದೃಶ್ಯಗಳು ಮನಸ್ಸಿಗೆ ತುಂಬಾ ಖುಷಿಯನ್ನು ನೀಡುತ್ತವೆ. ಸದ್ಯ ಅಂತಹದೊಂದು ವಿಡಿಯೋ ಇದೀಗ ವೈರಲ್‌ ಆಗಿದ್ದು, ಗೋವುಗಳ ಮುಂದೆ ನವಿಲೊಂದು ಗರಿ ಬಿಚ್ಚಿ ನಿಂತಿರುವ ದೃಶ್ಯವನ್ನು ಕಂಡು ನಿಜವಾಗಿಯೂ ಈ ದೃಶ್ಯ ದ್ವಾಪರ ಯುಗವನ್ನು ನೆನಪಿಸುವಂತಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

Viral Video: ದ್ವಾಪರ ಯುಗವನ್ನು ನೆನಪಿಸುವಂತಿದೆ ಈ ದೃಶ್ಯ, ಗೋವಿನ ಮುಂದೆ ಗರಿ ಬಿಚ್ಚಿ ಕುಣಿದ ಮಯೂರಿ
ವೈರಲ್​​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 17, 2024 | 4:19 PM

Share

ಹಳ್ಳಿ ಜೀವನವೇ ಬಲು ಸೊಗಸು. ಹಚ್ಚ ಹಸಿರಿನ ವಾತಾವರಣ, ನೀಲಿ ಅಕಾಶ, ಸ್ವಚ್ಛಂದವಾಗಿ ಹಾರಾಡುವ ಹಕ್ಕಿಗಳು, ಅಲ್ಲಲ್ಲಿ ಓಡಾಡುವ ದನ ಕರು, ಜಾನುವಾರುಗಳು ಹಳ್ಳಿ ಜೀವನದ ಈ ಎಲ್ಲಾ ಸುಂದರ ದೃಶ್ಯಗಳು ಮನಸ್ಸಿಗೆ ತುಂಬಾ ಸಂತೋಷವನ್ನು ನೀಡುತ್ತದೆ. ಹಳ್ಳಿಯೆಂದರೆ ಸ್ವರ್ಗಕ್ಕೆ ಸಮಾನವಾದುದು ಅಂತಾನೇ ಹೇಳಬಹುದು. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಸುಂದರ ಹಳ್ಳಿಯೊಂದರಲ್ಲಿ ಗೋವುಗಳ ಮುಂದೆ ನವಿಲೊಂದು ಸಂತೋಷದಿಂದ ಗರಿ ಬಿಚ್ಚಿ ಕುಣಿದ ಈ ದೃಶ್ಯವನ್ನು ಕಂಡು ನೆಟ್ಟಿಗರು ಮೂಕವಿಸ್ಮಿತರಾಗಿದ್ದಾರೆ.

ಈ ಕುರಿತ ಪೋಸ್ಟ್‌ ಒಂದನ್ನು cowsblike ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಬಲು ಸುಂದರವಾದ ಹಳ್ಳಿಯೊಂದರಲ್ಲಿ ಗೋವುಗಳೆರಡು ಮೇಯುತ್ತಾ ನಿಂತಿರುವ ದೃಶ್ಯವನ್ನು ಕಾಣಬಹುದು. ಅಲ್ಲಿಗೆ ಬಂದಂತಹ ಗಂಡು ನವಿಲೊಂದು ಬಹಳ ಖುಷಿಯಿಂದ ಗೋವುಗಳ ಮುಂದೆ ಗರಿ ಬಿಚ್ಚಿ ಕುಣಿದಿದೆ.

ಇದನ್ನೂ ಓದಿ: ಕಾಲುವೆಗೆ ಬಿದ್ದ ಯುವಕನ ಪ್ರಾಣ ರಕ್ಷಿಸಿದ ನೌಕಾಪಡೆಯ ನಿವೃತ್ತ ಅಧಿಕಾರಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Cowsblike (@cowsblike)

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 14.2 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಮನಮೋಹಕ ದೃಶ್ಯವನ್ನು ಕಂಡು ನಿಜಕ್ಕೂ ಒಂದು ಬಾರಿ ದ್ವಾಪರ ಯುಗಕ್ಕೆ ಹೋಗಿ ಬಂದಂತಾಯಿತುʼ ಎಂದು ಕಾಮೆಂಟ್‌ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅರರೇ ಎಂತಹ ಸುಂದರ ದೃಶ್ಯವಿದುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’