Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ

ಬೆಂಗಳೂರಿನ ಟ್ರಾಫಿಕ್ ನಡುವೆ ಸಿಳುಕಿಕೊಂಡಿದ್ದ ದ್ವಿಚಕ್ರ ವಾಹನ ಸವಾರರೊಬ್ಬರು, ಟ್ರಾಫಿಕ್ ಮಧ್ಯೆಯೇ ತಮ್ಮ ಮೊಬೈಲ್ ಫೋನ್ ಮುಖಾಂತರ ಆನ್ಲೈನ್ ಕಾನ್ಫರೆನ್ಸ್ ಮೀಟಿಂಗ್​​​ಗೆ ಹಾಜರಾಗಿದ್ದಾರೆ. ಸದ್ಯಕ್ಕೆ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

Viral Post: ಬೆಂಗಳೂರು ಟ್ರಾಫಿಕ್​​ನಲ್ಲಿ ಸಿಲುಕಿ ಬೈಕ್​​​ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್​​​ಗೆ ಹಾಜರಾದ ವ್ಯಕ್ತಿ
ವೈರಲ್ ಫೋಟೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 13, 2023 | 11:56 AM

ಬೆಂಗಳೂರು, ಮುಂಬೈನಂತಹ ಮಹಾನಗರಗಳಲ್ಲಿ ಟ್ರಾಫಿಕ್ ತಲೆನೋವು ಇದ್ದೇ ಇರುತ್ತದೆ. ಟ್ರಾಫಿಕ್​​ನಲ್ಲಿ ಸಿಲುಕಿಕೊಂಡಿದ್ದು ಆಫೀಸ್​​​ಗೆ ತಡವಾಗಿ ಹೋಗಲು ಅಥವಾ ಮೀಟಿಂಗ್​​​ಗಳಿಗೆ ತಡವಾಗಿ ಬರಲು ಸಾಧ್ಯವಿಲ್ಲ. ಹೇಗಾದರೂ ಸರಿ ಕೆಲಸ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮಾಡಲೇಬೇಕು. ಇನ್ನು ಸುದೀರ್ಘ ಸಮಯ ಟ್ರಾಫಿಕ್ ಜಾಮ್ ನಡುವೆ ಸಿಲುಕಿಕೊಂಡಿರುವಾಗ ಅನೇಕ ಜನರು ಸಮಯವನ್ನು ವ್ಯರ್ಥ ಮಾಡಲು ಬಯಸದೆ ಟ್ರಾಫಿಕ್​​ನಲ್ಲಿಯೇ ತಮ್ಮ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್​​ಗಳನ್ನು ಹೊರತೆಗೆದು ಆನ್ಲೈನ್​​ನಲ್ಲಿಯೇ ಕೆಲಸವನ್ನು ಮಾಡುತ್ತಾರೆ. ಅದೇ ರೀತಿ ಬೆಂಗಳೂರಿನ ಟ್ರಾಫಿಕ್​​​ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬರು ತಮ್ಮ ಸ್ಮಾರ್ಟ್ ಫೋನ್ ಮೂಲಕ ಆಫೀಸಿನ ಮೀಟಿಂಗ್​​ಗೆ ಹಾಜರಾಗಿದ್ದಾರೆ. ಅದೂ ಕೂಡಾ ತಮ್ಮ ದ್ವಿಚಕ್ರ ವಾಹನದ ಮೇಲೆ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತಮ್ಮ ಮೊಬೈಲ್ ಇಟ್ಟು ಮೀಟಿಂಗ್​​ಗೆ ಹಾಜರಾಗಿದ್ದಾರೆ. ಈ ವೈರಲ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವೈಭವ್ (@vaishah01) ಎಂಬವರು ವ್ಯಕ್ತಿಯೊಬ್ಬರು ಟ್ರಾಫಿಕ್ ತಲೆಬಿಸಿ ಮಧ್ಯೆ ಮೀಟಿಂಗ್​​​ಗೆ ಹಾಜರಾಗಿರುವ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೈರಲ್ ಫೋಟೋದಲ್ಲಿ ಬೈಕ್​​​ನಲ್ಲಿ ಕುಳಿತಿದ್ದ ವ್ಯಕ್ತಿ ಬೈಕ್ ಕನ್ನಡಿಯ ಪಕ್ಕ ಮೊಬೈಲ್ ಹೋಲ್ಡರ್ ಇಟ್ಟು ಅದರ ಮೇಲೆ ತನ್ನ ಸ್ಮಾರ್ಟ್ ಫೋನ್ ಇಟ್ಟು ಆಫೀಸಿನ ಕಾನ್ಫರೆನ್ಸ್ ಮೀಟಿಂಗ್​​​ನಲ್ಲಿ ನಿರತವಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ:Viral News: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು

ಜೂನ್ 9ರಂದು ಟ್ವಿಟರ್​​​ನಲ್ಲಿ ಹಂಚಿಕೊಳ್ಳಲಾದ ಈ ಫೋಟೋ ಹಲವು ವೀಕ್ಷಣೆಗಳನ್ನು ಹಾಗೂ ಲೈಕ್ಸ್​​ಗಳನ್ನು ಗಳಿಸಿದೆ. ಟ್ರಾಫಿಕ್ ದಟ್ಟಣೆಯ ನಗರಗಳಲ್ಲಂತೂ ಈ ತಲೆನೋವು ತಪ್ಪಿದ್ದಲ್ಲ ಎನ್ನುತ್ತಿದ್ದಾರೆ ನೆಟ್ಟಿಗರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ