AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆದ ಸಾಕು ನಾಯಿ

ಮನೆಯ ಮುದ್ದಿನ ಸಾಕು ಪ್ರಾಣಿಗಳ ನಡುವಿನ ಒಡನಾಟದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸದೇ ಇರದು. ಸಾಕುನಾಯಿಯೊಂದು ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆಯುತ್ತಿರುವ ವಿಡಿಯೋ ಇದಾಗಿದೆ. ಪ್ರಾಣಿಗಳ ಶುದ್ಧ ಪ್ರೀತಿ ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆದ ಸಾಕು ನಾಯಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:Feb 12, 2026 | 7:38 PM

Share

ಈ ಪ್ರಾಣಿಗಳಿಗೆ (animals) ಇರುವ ಬುದ್ಧಿ ಮನುಷ್ಯರಿಗಿಲ್ಲ. ಮನುಷ್ಯರಿಗಿಂತ ಈ ಪ್ರಾಣಿಗಳೇ ಲೇಸು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಸಾಕು ನಾಯಿಯೊಂದು (pet dog) ಕರುವಿನ ಮೈ ಮೇಲಿರುವ ಉಣ್ಣೆಗಳನ್ನು ನಾಲಿಗೆಯಲ್ಲಿ ನೆಕ್ಕಿ, ಹೆಕ್ಕಿ ತೆಗೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಮುಗ್ಧ ಜೀವಿಗಳ ಬಾಂಧವ್ಯಕ್ಕೆ ಮನಸೋತಿದ್ದಾರೆ.

ಯುವರಾಜ್ ಹೆಗಡೆ ಮೇಗರವಳ್ಳಿ (Yuvraj Hegade Megarvalli) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದ ಶೀರ್ಷಿಕೆಯಲ್ಲಿ ಶಿರುಪತಿ ಗ್ರಾಮದ ಚೇತನ್ ಮನೆಗೆ ಚಿಕಿತ್ಸೆಗೆ ಹೋದಾಗ ಕಂಡ ದೃಶ್ಯವಿದು. ಒಮ್ಮೆಲೇ ನೋಡಿದರೆ ನಾಯಿಯೊಂದು ಕರುವಿಗೆ ಕಚ್ಚುತ್ತಿರುವಂತೆ ಭಾಸವಾದರೂ, ಗಮನಿಸಿ ನೋಡಿದಾಗ ವಿಷಯ ಬೇರೆಯದೇ ಇದೆ. ಅವರ ಮನೆಯ ಸಾಕುನಾಯಿ, ಕರುವಿನ ಮೈಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆಯುತ್ತಿದೆ. ಕರುವಿಗೂ ಆ ನಾಯಿಯ ಮೇಲೆ ವಿಶ್ವಾಸ ಇದೆ.

ವೈರಲ್ ವಿಡಿಯೋ ಇಲ್ಲಿದೆ

ತನ್ನ ಮುಖ, ಕುತ್ತಿಗೆಯನ್ನು ಚಾಚಿ, ತನ್ನ ಮೈಮೇಲಿನ ಉಣ್ಣೆ/ಒಣಗು ಹೊರಪರಾವಲಂಬಿಗಳನ್ನು ತೆಗೆಸಿಕೊಳ್ಳುತ್ತಿದೆ. ಇದು ಕರುವಿಗೆ ಮಾತ್ರ ಸೀಮಿತವಲ್ಲ. ಅವರ ಮನೆಯ ಎಲ್ಲಾ ಜಾನುವಾರುಗಳಿಗೂ ಮನೆಯ ನಾಯಿಗಳು ಪ್ರತಿ ದಿನವೂ ಇದೇ ರೀತಿ ಉಣ್ಣೆ ತೆಗೆದು ಕಳಿಸುವುದು ದೈನಂದಿನ ದಿನಚರಿಯಂತೆ ಎಂದು ಬರೆಯಲಾಗಿದೆ. ಈ ವಿಡಿಯೋದಲ್ಲಿ ಸಾಕುನಾಯಿಯೂ ಮನೆಯ ಕರುವಿನ ಮೈ ಮೇಲಿನ ಉಣ್ಣೆಗಳನ್ನು ನಾಲಿಗೆಯಲ್ಲಿ ನೆಕ್ಕಿ ತೆಗೆಯುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ, ಆ ಮೂಕ ಪ್ರಾಣಿಗಳು ಅದು ಹೇಗೆ ಮಾಹಿತಿ ವಿನಿಮಯ ಮಾಡಿಕೊಳ್ತಾವೇ? ಆಶ್ಚರ್ಯ! ಎಂದು ಹೇಳಿದ್ದಾರೆ. ಮತ್ತೊಬ್ಬರು, ನಮ್ಮ ಮನೆಯಲ್ಲೂ ಹೀಗೇನೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Thu, 12 February 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ