AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಡರ್ ಮಾಡಿದ್ದು ಚಿಕನ್ನಲ್ಲ, ಪನ್ನೀರ್​ ಸ್ಯಾಂಡ್‌ವಿಚ್; 50 ಲಕ್ಷ ರೂ ಪರಿಹಾರಕ್ಕಾಗಿ ಕೋರ್ಟ್​ ಮೆಟ್ಟಿಲೇರಿದ ಮಹಿಳೆ

ಸ್ಯಾಂಡ್ವಿಚ್ ಡೆಲಿವರಿ ಆದ ಕೂಡಲೇ ತಿನ್ನಲು ಪ್ರಾರಂಭಿಸಿದಳು. ಅರ್ಥ ತಿಂದ ಬಳಿಕ, ಪನೀರ್‌ನ ವಿನ್ಯಾಸವು ಸಾಮಾನ್ಯಕ್ಕಿಂತ ಗಟ್ಟಿಯಾಗಿದೆ ಎಂದು ಅನುಮಾನಗೊಂಡು ಪರೀಕ್ಷಿಸಿದಾಗ ಚಿಕನ್​​ ಸ್ಯಾಂಡ್‌ವಿಚ್ ತಿಂದಿರುವುದಾಗಿ ತಿಳಿದುಬಂದಿದೆ. ಎಂದೂ ಮಾಂಸಾಹಾರ ಸೇವಿಸದ ನಿರಾಲಿ, ರೆಸ್ಟೋರೆಂಟ್​ ವಿರುದ್ಧ ದೂರು ದಾಖಲಿಸಿದ್ದಾರೆ.

ಆರ್ಡರ್ ಮಾಡಿದ್ದು ಚಿಕನ್ನಲ್ಲ, ಪನ್ನೀರ್​ ಸ್ಯಾಂಡ್‌ವಿಚ್; 50 ಲಕ್ಷ ರೂ ಪರಿಹಾರಕ್ಕಾಗಿ ಕೋರ್ಟ್​ ಮೆಟ್ಟಿಲೇರಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: May 09, 2024 | 4:08 PM

Share

ಶುದ್ಧ ಸಸ್ಯಾಹಾರಿ ಮಹಿಳೆಯೊಬ್ಬರು ಆನ್ಲೈನ್​ನಲ್ಲಿ ಫುಡ್​​ ಡೆಲಿವರಿ ಆ್ಯಪ್​ ಬಳಸಿ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ‘ಪಿಕ್ ಅಪ್ ಮೀಲ್ಸ್ ಬೈ ಟೆರ್ರಾ’ ನಿಂದ ಪನೀರ್ ಟಿಕ್ಕಾ ಸ್ಯಾಂಡ್‌ವಿಚ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ, ರೆಸ್ಟೋರೆಂಟ್ ಪನ್ನೀರ್​​ ಬದಲಿಗೆ ಚಿಕನ್ ಸ್ಯಾಂಡ್‌ವಿಚ್ ಡೆಲಿವರಿ ಮಾಡಿದ್ದು, ಇದರಿಂದ ಕೋಪಗೊಂಡ ಮಹಿಳೆ ಗ್ರಾಹಕರ ನ್ಯಾಯಾಲಯದಲ್ಲಿ 50 ಲಕ್ಷ ರೂ ಪರಿಹಾರಕ್ಕಾಗಿ ಆನ್ಲೈನ್​ನಲ್ಲಿ ಫುಡ್​​ ಡೆಲಿವರಿ ಆ್ಯಪ್ ಮತ್ತು ರೆಸ್ಟೋರೆಂಟ್​ ವಿರುದ್ದ ದೂರು ದಾಖಲಿಸಿದ್ದಾರೆ.

ಮೇ 3 ರಂದು, ನಿರಾಲಿ ಎಂಬ ಮಹಿಳೆ ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿರುವ ತನ್ನ ಕಚೇರಿಯಿಂದ ಆರ್ಡರ್ ಮಾಡಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕುತೂಹಲಕಾರಿಯಾಗಿ, ಸ್ಯಾಂಡ್ವಿಚ್ ಡೆಲಿವರಿ ಆದ ಕೂಡಲೇ ತಿನ್ನಲು ಪ್ರಾರಂಭಿಸಿದಳು. ಅರ್ಥ ತಿಂದ ಬಳಿಕ, ಪನೀರ್‌ನ ವಿನ್ಯಾಸವು ಸಾಮಾನ್ಯಕ್ಕಿಂತ ಗಟ್ಟಿಯಾಗಿದೆ ಎಂದು ಅನುಮಾನಗೊಂಡು ಪರೀಕ್ಷಿಸಿದಾಗ ಚಿಕನ್​​ ಸ್ಯಾಂಡ್‌ವಿಚ್ ತಿಂದಿರುವುದಾಗಿ ತಿಳಿದುಬಂದಿದೆ. ಎಂದೂ ಮಾಂಸಾಹಾರ ಸೇವಿಸದ ನಿರಾಲಿ, ರೆಸ್ಟೋರೆಂಟ್​ ವಿರುದ್ಧ ದೂರು ದಾಖಲಿಸಿದ್ದಾರೆ. ಇದಲ್ಲದೇ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ಆರೋಗ್ಯ ಅಧಿಕಾರಿಗೆ ಪತ್ರ ಬರೆದಿದ್ದಾರೆ.

View this post on Instagram

A post shared by @thesocialbait

ಇದನ್ನೂ ಓದಿ: ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ 200ಕ್ಕೆ 212 ಅಂಕ, ಇದು ಹೇಗೆ ಸಾಧ್ಯ?

ಗ್ರಾಹಕರ ನ್ಯಾಯಾಲಯದಿಂದ ನ್ಯಾಯ ಪಡೆದು 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ನಿರಾಲಿ ಹೇಳಿದ್ದಾರೆ. ಕಳೆದ ವರ್ಷ ಇದೇ ರೀತಿಯ ಘಟನೆಯಲ್ಲಿ, ಜೋಧ್‌ಪುರದ ಜಿಲ್ಲಾ ಗ್ರಾಹಕ ವಿವಾದ ಪರಿಹಾರ ವೇದಿಕೆಯಿಂದ ಆನ್‌ಲೈನ್ ಆಹಾರ ಆರ್ಡರ್ ಮತ್ತು ಡೆಲಿವರಿ ಪ್ಲಾಟ್‌ಫಾರ್ಮ್ ಜೊಮಾಟೊ ಮತ್ತು ರೆಸ್ಟೋರೆಂಟ್ ಪಾಲುದಾರ ಮೆಕ್‌ಡೊನಾಲ್ಡ್‌ಗೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು. ಇದೀಗ ಸಸ್ಯಾಹಾರಿ ಆಹಾರದ ಬದಲಿಗೆ ಮಾಂಸಾಹಾರವನ್ನು ತಪ್ಪಾಗಿ ವಿತರಿಸಿದ ಆರೋಪದ ಮೇಲೆ ದಂಡ ವಿಧಿಸಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್