Viral Video: ತಲೆ ಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟ ರಾಮಭಕ್ತ 

ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ.  ಈ ಒಂದು ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಲು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲಿನ ಕೆಲವೊಬ್ಬ ರಾಮ ಭಕ್ತರು ಈಗಾಗಲೇ ಅಯೋಧ್ಯೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಈ ಕುರಿತ ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಅದೇ ರೀತಿಯ ವಿಶೇಷ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಪ್ರಭು ಶ್ರೀರಾಮನ ಭಕ್ತರೊಬ್ಬರು, ತಮ್ಮ ಸಂಕಲ್ಪದಂತೆ ಅಯೋಧ್ಯೆಗೆ ತಲೆಕೆಳಗಾಗಿ ನಡೆಯುತ್ತಾ ಪಾದಯಾತ್ರೆಯನ್ನು ಹೊರಟಿದ್ದಾರೆ.

Viral Video: ತಲೆ ಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟ ರಾಮಭಕ್ತ 
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 17, 2024 | 10:30 AM

ಉತ್ತರ ಪ್ರದೇಶದ ಅಯ್ಯೋಧ್ಯೆಯಲ್ಲಿ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ರಾಮ ಲಲ್ಲಾ (ಬಾಲ ರಾಮ) ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಒಂದು ಪುಣ್ಯ ಕಾರ್ಯದಲ್ಲಿ  ಭಾಗಿಯಾಗಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಈ ದಿನದಂದು ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ವಿಶೇಷವಾಗಿ ಕೆಲವೊಬ್ಬ ರಾಮಭಕ್ತರು ತಮ್ಮ ಊರುಗಳಿಂದ ಪಾದಯಾತ್ರೆಯ ಮೂಲಕವೇ ಪ್ರಭು ಶ್ರೀರಾಮನ ಜನ್ಮಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು ಸಂಕಲ್ಪ ತೆಗೆದುಕೊಂಡು  ಈಗಾಗಲೇ ಅಯೋಧ್ಯೆಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದಾರೆ.

ಕರ್ನಾಟಕ ಸೇರಿದಂತೆ, ಬೇರೆ ರಾಜ್ಯಗಳಿಂದಲೂ ಭಕ್ತರು ಪಾದಯಾತ್ರೆಯನ್ನು ಹೊರಟಿರುವ ಸುದ್ದಿಗಳು ಹರಿದಾಡುತ್ತಿವೆ.  ಸದ್ಯ ಇಲ್ಲೊಂದು ವಿಶೇಷ ವಿಡಿಯೋ ಹರಿದಾಡುತ್ತಿದ್ದು,  ರಾಮಭಕ್ತರೊಬ್ಬರು ತಮ್ಮ ಸಂಕಲ್ಪದಂತೆ ತಲೆಕೆಳಗಾಗಿ ನಡೆಯುತ್ತಾ  ಪ್ರಭು ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೊರಟಿದ್ದಾರೆ.

ಇದನ್ನೂ ಓದಿ: ಪೇಪರ್​​​ನಲ್ಲಿ ಮೂಡಿದ ಪರಿಸರಸ್ನೇಹಿ ಶ್ರೀರಾಮ ಮೂರ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ರಾಮಭಕ್ತ ತಲೆಕೆಳಗಾಗಿ ನಡೆಯುತ್ತಾ, ಅಯೋಧ್ಯೆಗೆ ಶ್ರೀರಾಮನ ದರ್ಶನಕ್ಕೆ ಹೊರಟಿರುವಂತಹ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ  ಹರಿದಾಡುತ್ತಿದ್ದು, ವಿಡಿಯೋದಲ್ಲಿ ರಾಮಭಕ್ತರೊಬ್ಬರು ತಲೆ ಕೆಳಗಾಗಿ ತಮ್ಮ ಕೈಗಳಲ್ಲಿ ಹೆಜ್ಜೆಯಿಡುತ್ತಾ, ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೊರಟಿರುವ ದೃಶ್ಯವನ್ನು ಕಾಣಬಹುದು.  ಅಷ್ಟಕ್ಕೂ ಇವರು ಯಾವ ಊರಿನಿಂದ ಪಾದಯತ್ರೆ ಹೊರಟಿದ್ದಾರೆ ಹಾಗೂ  ಅವರ ವೈಯಕ್ತಿಕ ವಿವರವಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:24 am, Wed, 17 January 24

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್