Viral Video: ಮನೆಯೊಳಗೆ ಬಂದು ಹಾಯಾಗಿ ಕುಳಿತು ಧಾರಾವಾಹಿ ವೀಕ್ಷಿಸಿದ ಹಾವು; ಇದು ಸೀರಿಯಲ್‌ ಎಫೆಕ್ಟ್‌

ಸೋಷಿಯಲ್‌ ಮೀಡಿಯಾದಲ್ಲಿ ಸ್ವಾರಸ್ಯಕರ ಘಟನೆಗಳ ಕುರಿತ ಕುರಿತ ವಿಡಿಯೋಗಳು ಆಗಾಗ್ಗೆ ಹರಿದಾಡುತ್ತಿರುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ಮನೆಯೊಳಗೆ ನುಗ್ಗಿದ ಹಾವೊಂದು ಎಡೆ ಎತ್ತಿ ಕುಳಿತು ಸತತ 2 ಗಂಟೆಗಳ ಕಾಲ ಜೀ ಕನ್ನಡ ವಾಹಿನಿಯ ಸಿರಿಯಲ್‌ಗಳನ್ನು ವೀಕ್ಷಿಸಿದೆ. ಬಹುಶಃ ಇದು ನಾಗಿಣಿ ಸಿರಿಯಲ್ ಗೆ ಆಡಿಷನ್‌ ಕೊಡಲು ಬಂದಿರ್ಬೇಕು ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

Viral Video: ಮನೆಯೊಳಗೆ ಬಂದು ಹಾಯಾಗಿ ಕುಳಿತು ಧಾರಾವಾಹಿ ವೀಕ್ಷಿಸಿದ ಹಾವು; ಇದು ಸೀರಿಯಲ್‌ ಎಫೆಕ್ಟ್‌
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 01, 2024 | 11:31 AM

ವಿಶೇಷವಾಗಿ ಹೆಂಗಳೆಯರಿಗೆ ಸೀರಿಯಲ್‌ ಎಂದರೆ ಅಚ್ಚುಮೆಚ್ಚು. ಧಾರಾವಾಗಿ ನೋಡಲು ಕೂತರೆ ಪ್ರಪಂಚವೇ ಮುಳುಗಿ ಹೋದರೂ ಅವರಿಗೆ ಗೊತ್ತಾಗುವುದಿಲ್ಲ. ಅಷ್ಟು ಇಷ್ಟಪಟ್ಟು ಮಹಿಳೆಯರು ತಮ್ಮ ನೆಚ್ಚಿನ ಸೀರಿಯಲ್‌ಗಳನ್ನು ನೋಡುತ್ತಾರೆ. ಆದರೆ ಇಲ್ಲೊಂದು ಸ್ವಾರಸ್ಯಕರ ಘಟನೆ ನಡೆದಿದ್ದು, ಮನೆಯೊಳಗೆ ಬಂದ ಹಾವೊಂದು ಎಡೆ ಎತ್ತಿ ಕುಳಿತು ಸತತ ಎರಡು ಗಂಟೆಗಳ ಕಾಲ ಒಂದು ಚೂರು ಅಲ್ಲಾಡದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸೀರಿಯಲ್‌ಗಳನ್ನು ಕುತೂಹಲದಿಂದ ವೀಕ್ಷಿಸಿದೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಬಹುಶಃ ಇದು ಹೆಣ್ಣು ಹಾವು ಇರಬೇಕು, ಹಾಗಾಗಿ ಸೀರಿಯಲ್‌ ನೋಡುತ್ತಾ ಕುಳಿತಿದೆ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಸ್ನೇಕ್‌ ಶಿವು (snakeshivu) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಜೀ ಟಿವಿ ಅಭಿಮಾನಿ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮನೆಯೊಳಗೆ ನುಗ್ಗಿದ ಹಾವೊಂದು ಎಡೆ ಎತ್ತಿ ಕುಳಿತು ಸೀರಿಯಲ್‌ ವೀಕ್ಷಿಸುತ್ತಿರುವ ದೃಶ್ಯವನ್ನು ಕಾಣಬಹುದು. ಮನೆ ಯಜಮಾನಿ ಸ್ನೇಕ್‌ ಶಿವು ಅವರ ಬಳಿ ಬರೋಬ್ಬರಿ ಒಂದುವರೆ ಗಂಟೆಯಿಂದ ಒಂದು ಚೂರು ಅಲ್ಲಾಡದೆ ಟಿವಿ ನೋಡುತ್ತಾ ಕುಳಿತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ರೀಲ್ಸ್​ಗಾಗಿ ಧಮ್ ಹೊಡೆದ ಹುಡ್ಗಿ, ಮನೆಯಲ್ಲಿ ಬೆಲ್ಟ್ ಏಟು: ವಿಡಿಯೋ ನೋಡಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ;

View this post on Instagram

A post shared by Snakeshivu (@snakeshivu)

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಬಹುಶಃ ನಾಗಿಣಿ ಸೀರಿಯಲ್‌ಗೆ ಆಡಿಷನ್‌ ಕೊಡಲು ಬಂದಿರಬೇಕು ಎಂದು ನೋಡುಗರು ತಮಾಷೆಯ ಕಾಮೆಂಟ್ಸ್‌ಗಳನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು