AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಪ್ಪ ಅಮ್ಮನ ಕನಸು ಈಡೇರಿತು; ಮೊದಲ ಬಾರಿಗೆ ತಂದೆ ತಾಯಿಯನ್ನು ವಿಮಾನದಲ್ಲಿ ಕರೆದೊಯ್ದ ಮಗ

ವಿಮಾನ ಪ್ರಯಾಣ ಎನ್ನುವುದು ಬಹುತೇಕರ ಕನಸು. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ತಂದೆ ತಾಯಿಯ ವಿಮಾನ ಪ್ರಯಾಣದ ಕನಸನ್ನು ನನಸು ಮಾಡಿದ್ದಾನೆ. ಮೊದಲ ಬಾರಿಗೆ ವಿಮಾನ ಹತ್ತಿಸಿದ್ದು, ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಪ್ಪ ಅಮ್ಮನ ಕನಸು ಈಡೇರಿತು; ಮೊದಲ ಬಾರಿಗೆ ತಂದೆ ತಾಯಿಯನ್ನು ವಿಮಾನದಲ್ಲಿ ಕರೆದೊಯ್ದ ಮಗ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 18, 2026 | 1:27 PM

Share

ಪ್ರತಿಯೊಬ್ಬರಿಗೂ ತಮ್ಮ ಹೆತ್ತವರನ್ನು (parents) ಚೆನ್ನಾಗಿ ನೋಡಿಕೊಳ್ಳಬೇಕು ಎನ್ನುವ ಆಸೆಯಿರುತ್ತದೆ. ಹೀಗಾಗಿ ಕೆಲಸ ಸಿಕ್ಕ ಬಳಿಕ ಅವರ ಸಣ್ಣ ಪುಟ್ಟ ಆಸೆಗಳನ್ನು ಈಡೇರಿಸುತ್ತಾರೆ. ಇದೀಗ ವ್ಯಕ್ತಿಯೊಬ್ಬ ತಂದೆ-ತಾಯಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದಿದ್ದಾನೆ. ಹೆತ್ತವರ ಮೊಗದಲ್ಲಿ ಮೂಡಿದ ನಗು ಹಾಗೂ ಸಂತೋಷವನ್ನು ಕಂಡು ಖುಷಿ ಪಟ್ಟಿದ್ದಾನೆ. ಹೆತ್ತವರ ಜತೆಗೆ ಮಗನ ವಿಮಾನ ಪ್ರಯಾಣದ ದೃಶ್ಯವು ವೈರಲ್ ಆಗಿದೆ.

ಹೆತ್ತವರನ್ನು ವಿಮಾನದಲ್ಲಿ ಕರೆದೊಯ್ದ ಮಗ

ರುದ್ರ ಸಿಂಗ್ (rudraasinghhh)ಎಂಬ ವ್ಯಕ್ತಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಹೆತ್ತವರನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುವುದನ್ನು ಹಂಚಿಕೊಂಡಿದ್ದಾನೆ. ಈ ಕ್ಲಿಪಿಂಗ್ ಶೀರ್ಷಿಕೆಯಲ್ಲಿ, ಇದು ತಮ್ಮ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ನನ್ನ ಹೆತ್ತವರ ಕಣ್ಣುಗಳಲ್ಲಿ ಕಂಡ ಸಂತೋಷ ಮತ್ತು ಉತ್ಸಾಹವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಆದರೆ ಕೆಲವರಿಗೆ ಇದು ಸಣ್ಣ ವಿಷಯ ಅನಿಸಬಹುದು. ಆದರೆ ನನ್ನ ಹೆತ್ತವರು ಈ ಕ್ಷಣಕ್ಕಾಗಿ ಎಷ್ಟು ಕಾಲದಿಂದ ಕನಸು ಕಂಡಿದ್ದರು ಎಂಬುದು ನನಗೆ ಗೊತ್ತು. ಅವರ ಆ ಕನಸನ್ನು ನನಸಾಗಿಸಲು ಸಾಧ್ಯವಾಗಿದ್ದು ನನ್ನ ಜೀವನದ ಅತಿದೊಡ್ಡ ಸಾಧನೆಗಳಲ್ಲಿ ಒಂದು ಎಂದು ಬರೆದುಕೊಂಡಿದ್ದಾನೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by RUDRA SINGH (@rudraasinghhh)

ಈ ವಿಡಿಯೋದಲ್ಲಿ ಈ ವ್ಯಕ್ತಿಯ ತಂದೆ ತಾಯಿ ಮಗನು ಫ್ಲೈಟ್ ನಲ್ಲಿ ಕರೆದುಕೊಂಡು ಹೋಗುತ್ತಾನೆಂದು ತಿಳಿದು ಖುಷಿಯಾಗಿದ್ದಾರೆ. ಈ ಕ್ಲಿಪಿಂಗ್ ನಲ್ಲಿ ವಿಮಾನ ಹತ್ತಲು ಸಿದ್ಧರಾಗುತ್ತಿರುವ ದೃಶ್ಯಗಳಿವೆ. ವಿಮಾನ ಹತ್ತಲು ಸಿದ್ಧರಾಗುವುದರಿಂದ ಹಿಡಿದು ಪ್ರಯಾಣದ ವೇಳೆಯಲ್ಲಿ ಹೆತ್ತವರ ಮುಖದಲ್ಲಿ ಮೂಡಿದ ನಗು ಹಾಗೂ ಖುಷಿಯ ಕ್ಷಣಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿರುವುದನ್ನು ಕಾಣಬಹುದು.

ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ವಿದೇಶದಿಂದ ಬಂದ ಮಗಳು, ಈ ಸರ್ಪ್ರೈಸ್‌ಗೆ ಹೆತ್ತವರು ಭಾವುಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮದ್ಯಮ ವರ್ಗದ ಜನರಿಗೆ ವಿಮಾನ ಪ್ರಯಾಣ ದೊಡ್ಡ ಸಾಧನೆ ಎಂದಿದ್ದಾರೆ. ಇನ್ನೊಬ್ಬರು, ಹೆತ್ತವರ ಮುಖದಲ್ಲಿನ ನಗುವೇ ಎಲ್ಲವನ್ನು ಹೇಳುತ್ತಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ನಿಮ್ಮ ಬಗ್ಗೆ ಬಹಳ ಹೆಮ್ಮೆ ಎನಿಸುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ