AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗ್ರಾಜುವೇಷನ್ ಡೇಗೆ ಅಜ್ಜಿಯೊಂದಿಗೆ ಬಂದ ವಿದ್ಯಾರ್ಥಿ, ವೈರಲ್‌ ಆಯ್ತು ದೃಶ್ಯ

ಕೆಲವರ ಜೀವನದಲ್ಲಿ ತಂದೆ ತಾಯಿಗಿಂತ ಹೆಚ್ಚು ಅಜ್ಜ ಅಜ್ಜಿಯಂದಿರೇ ಎಲ್ಲಾ ಆಗಿರುತ್ತಾರೆ. ಹೆತ್ತವರನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಯೊಬ್ಬ ಗ್ರಾಜುವೇಷನ್ ದಿನದಂದು ತನ್ನ ಜತೆಗೆ ಅಜ್ಜಿಯನ್ನು ಕರೆತಂದಿದ್ದಾನೆ. ಈ ಹುಡುಗನನ್ನು ಈ ಹಂತಕ್ಕೆ ತಂದು ನಿಲ್ಲಿಸಿದ ಅಜ್ಜಿಯ ಮುಖದಲ್ಲಿ ಮುಗ್ಧತೆ ಬಿಟ್ಟರೆ ಬೇರೇನೂ ಇಲ್ಲ. ಆದರೆ ಈ ಹುಡುಗನಿಗೆ ತನ್ನ ಅಜ್ಜಿನ ಬಗ್ಗೆಇರುವ ಹೆಮ್ಮೆಯನ್ನು ಅವನ ಮುಖವೇ ಹೇಳುತ್ತಿದೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಗ್ರಾಜುವೇಷನ್ ಡೇಗೆ ಅಜ್ಜಿಯೊಂದಿಗೆ ಬಂದ ವಿದ್ಯಾರ್ಥಿ, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 20, 2026 | 11:36 AM

Share

ಗ್ಯಾಜುವೇಷನ್ ಡೇ (graduation day)ಅನ್ನೋದು ಜೀವನದಲ್ಲೂ ಮಹತ್ತರವಾದದ್ದು. ಹೌದು, ಗೌನ್ ತೊಟ್ಟು ಮನೆಯವರ ಮುಂದೆ ಪದವಿ ಸ್ವೀಕರಿಸಬೇಕು ಅನ್ನೋದು ಪ್ರತಿಯೊಬ್ಬರ ಕನಸು ಕೂಡ. ತಂದೆತಾಯಂದಿರು ಈ ಸುಂದರ ಕ್ಷಣಕ್ಕೆ ಸಾಕ್ಷಿಯಾಗುತ್ತಾರೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಫಿಲಿಪೈನ್ಸ್‌ನ ಗ್ಯಾಜುವೇಷನ್ ಡೇಯಂದು ತನ್ನ ಜತೆಗೆ ಅಜ್ಜಿಯನ್ನು ಕರೆದುಕೊಂಡು ಬಂದಿದ್ದಾನೆ. ತಾನು ಈ ಹಂತಕ್ಕೆ ಬರಲು ಕಾರಣಳಾದ ಅಜ್ಜಿಯೊಂದಿಗೆ ವೇದಿಕೆ ಹತ್ತಲು ಮುಂದಾಗಿರುವ ವಿಡಿಯೋ ವೈರಲ್ ಆಗಿದೆ. ಈ ಹೃದಯಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

ಯುನಿವರ್ಸಲ್ ಝೋನ್ (Universal Zone) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವಿದ್ಯಾರ್ಥಿಗಳು ಗ್ರಾಜುವೇಷನ್ ಡೇಯ ಸಂಭ್ರಮದಲ್ಲಿರುವುದನ್ನು ಕಾಣಬಹುದು. ಕೆಲವರು ಹೆತ್ತವರ ಜತೆಗೆ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದಾರೆ. ಆದರೆ ತಂದೆ ತಾಯಿಯಿಲ್ಲದ ವಿದ್ಯಾರ್ಥಿಯೊಬ್ಬ ಅಜ್ಜಿಯೊಂದಿಗೆ ಸಾಲಿನಲ್ಲಿ ನಿಂತುಕೊಂಡಿರುವುದನ್ನು ಕಾಣಬಹುದು. ಹೌದು, ಹೆತ್ತವರನ್ನು ಕಳೆದುಕೊಂಡಿದ್ದ ಈ ಹುಡುಗನನ್ನು ಸಾಕಿ ಬೆಳೆಸಿದ್ದು ಈ ಅಜ್ಜಿಯೇ. ಸಾಕಿ ಸಲಹಿದ ಅಜ್ಜಿ ಈ ಹುಡುಗನ ಪಕ್ಕದಲ್ಲಿ ನಿಂತುಕೊಂಡು ಮುಗ್ಧತೆಯಿಂದ ಎಲ್ಲವನ್ನು ಗಮನಿಸುತ್ತಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಜ್ಜ ಅಜ್ಜಿಯ ಜತೆಗೆ ಮೊದಲ ವಿಮಾನ ಪ್ರಯಾಣ; ಹಿರಿಜೀವಗಳ ಕನಸನ್ನು ನನಸಾಗಿಸಿದ ಮೊಮ್ಮಗ

ಈ ವಿಡಿಯೋ ಇಪ್ಪತ್ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನನ್ನ ಕಣ್ಣಲ್ಲಿ ನೀರು ತರಿಸಿದ ದೃಶ್ಯ ಎಂದಿದ್ದಾರೆ. ಇನ್ನೊಬ್ಬರು, ಆ ಹಿರಿಜೀವಕ್ಕೆ ಇದಕ್ಕಿಂತ ಖುಷಿ ಇನ್ನೇನಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಹಾರ್ಟ್ ಸಿಂಬಲ್ ಕಳುಹಿಸಿ ವಿಡಿಯೋ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು