AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಜರಾಜ ಬರುವುದನ್ನು ನೋಡಿ ಜನ ದಿಕ್ಕಾಪಾಲು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನಗರವೊಂದರಲ್ಲಿ ರಾಜಾರೋಷವಾಗಿ ಕಾಡಾನೆಯೊಂದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Viral Video: ಗಜರಾಜ ಬರುವುದನ್ನು ನೋಡಿ ಜನ ದಿಕ್ಕಾಪಾಲು
ಬೀದಿಯಲ್ಲಿ ರಾಜಾರೋಷವಾಗಿ ಓಡಾಡಿದ ಗಜರಾಜImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 11, 2023 | 1:36 PM

Share

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ನಗರವೊಂದರಲ್ಲಿ ರಾಜಾರೋಷವಾಗಿ ಕಾಡಾನೆಯೊಂದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಾರ್ಚ್​ 9 ರಂದು ಟ್ವಿಟರ್​​ನಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೋ ಎರಡೇ ದಿನಗಳಲ್ಲಿ 2.6 ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ. ಊರಿಗೆ ಬಂದ ಕಾಡಾನೆಯ ವಿಡಿಯೋ ಬೀದಿ ಬದಿಯ ಕಟ್ಟಡದ ಹೊರಗೆ ಇರಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಹೋಳಿ ಆಚರಣೆಯ ವೇಳೆ ಜಪಾನಿ ಯುವತಿಗೆ ಕಿರುಕುಳ, ವಿಡಿಯೋ ವೈರಲ್​​

ಪುಟ್ಟ ಬೀದಿ, ರಸ್ತೆಯ ಎರಡು ಬದಿಗಳಲ್ಲಿ ಗಾಡಿಗಳನ್ನು ಪಾರ್ಕ್​ ಮಾಡಲಾಗಿದೆ. ಜೊತೆಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಅಂಗಡಿಯೊಂದರ ಮುಂದೆ ನಿಂತಿರುವುದನ್ನು ಕಾಣಬಹುದು.ಸ್ವಲ್ಪ ಸಮಯದಲ್ಲಿಯೇ ಜನರು ಗಾಬರಿಯಿಂದ ಓಡಲು ಪ್ರಾರಂಭಿಸುತ್ತಾರೆ. ಆ ಸಮಯದಲ್ಲಿಯೇ ಆನೆಯೊಂದು ಅಡ್ಡದಿಡ್ಡಿಯಾಗಿ ರಭಸದಲ್ಲಿ ಬಂದು ಬೀದಿಗೆ ನುಗ್ಗಿದೆ. ಜೊತೆಗೆ ಪಾರ್ಕ್​ ಮಾಡಲಾಗಿದ್ದ ವಾಹನಗಳಿಗೆ ಹಾನಿಗೊಳಿಸಿದೆ. ಈ ಘಟನೆ ಬೀದಿ ಬದಿಯ ಕಟ್ಟಡದ ಹೊರಗೆ ಇರಿಸಲಾಗಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲವು ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಈ ವಿಡಿಯೋವನ್ನು ಎರಡು ದಿನಗಳ ಹಿಂದೆ (ಮಾರ್ಚ್​ 9) ಟ್ವಿಟರ್​​ನಲ್ಲಿ ಶೇರ್ ಮಾಡಲಾಗಿದೆ. ಪೋಸ್ಟ್ ಮಾಡಿದ ಎರಡೇ ದಿನಗಳಲ್ಲಿ 2.6 ಮಿಲಿಯನ್​​ ವೀಕ್ಷಣೆ ಪಡೆದುಕೊಂಡಿದೆ. 18 ಸಾವಿರ ಲೈಕುಗಳು, 3060 ರೀಟ್ವಿಟ್​​ಗಳನ್ನು ಕಾಣಬಹುದು. ಜೊತೆಗೆ ಸಾಕಷ್ಟು ಕಾಮೆಂಟ್​​​ಗಳನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:35 pm, Sat, 11 March 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ