ವೈರಲ್ ಆಗಿರುವ ಈ ವಿಡಿಯೋದಲ್ಲಿ ಯುವತಿ ಮೈ ಚಳಿ ಬಿಟ್ಟು ಸಖತ್ ಆಗಿ ಸ್ಟೆಪ್ ಹಾಕಿದ್ದು, ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗಿದೆ. ಮೇಘಾ ಚೌಬೆ ಎಂಬ ಯುವತಿ 4G ka Jamana ಎಂಬ ಹಾಡಿಗೆ ಡ್ಯಾನ್ಸ್ ಮಾಡಿದ್ದಾಳೆ. ಆಕೆಯ ಎನರ್ಜಿಟಿಕ್ ನೃತ್ಯ ಯೂಟ್ಯೂಬ್ ಸೇರಿದಂತೆ ಫೇಸ್ಬುಕ್, ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗುತ್ತಿದೆ.
Megha Chaube ಎಂಬ ಯೂಟ್ಯೂಬ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎರಡು ವರ್ಷಗಳ ಹಿಂದೆ ಅಂದರೆ ಫೆಬ್ರವರಿ 21, 2022ರಲ್ಲಿ ಪೋಸ್ಟ್ ಮಾಡಿದ್ದ ಈ ವಿಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ. ಇಲ್ಲಿಯವರೆಗೆ ವಿಡಿಯೋ 11 ಮಿಲಿಯನ್ ವೀಕ್ಷಣೆಯನ್ನು ಪಡೆದುಕೊಂಡಿದೆ.
ಇದನ್ನೂ ಓದಿ: ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ
ವಿಡಿಯೋ ಇಲ್ಲಿಯವರೆಗೆ 11 ಮಿಲಿಯನ್ ಅಂದರೆ 1 ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನಿಮ್ಮ ನೃತ್ಯ ಅದ್ಭುತವಾಗಿದೆ ಎಂದಿದ್ದಾರೆ ಹಲವರು. ನೀವು ಈ ಲೆಹಾಂಗದಲ್ಲಿ ತುಂಬಾ ಚೆನ್ನಾಗಿ ಕಾಣುತ್ತಿದ್ಧೀರಿ ಎಂದಿದ್ದಾರೆ ಮತ್ತೊಬ್ಬರು. ಸುಂದರವಾಗಿದ್ದೀರಿ ಮತ್ತು ನಿಮ್ಮ ಹಾವಭಾವಗಳೂ ಚೆಂದ ಎಂದಿದ್ದಾರೆ ಮಗದೊಬ್ಬರು.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:01 pm, Tue, 13 August 24