Viral : ಬೇಗ ಬೇಗ ಕಿಟಕಿ ಹತ್ರ ಬನ್ನಿ, ಇಲ್ಲಾಂದ್ರೆ ರೈಲಿನಲ್ಲಿ ಸೀಟ್ ಸಿಗಲ್ಲ, ವಿಡಿಯೋ ವೈರಲ್

ಭಾರತೀಯ ರೈಲ್ವೆ ಹಾಗೂ ರೈಲ್ವೆ ಪ್ರಯಾಣಿಕರಿಗೆ ಸಂಬಂಧಿಸಿದ ಕೆಲವೊಂದು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬನು, ಪ್ರಯಾಣಿಕರನ್ನು ಕಿಟಕಿಯ ಮೂಲಕ ಬೋಗಿಯೊಳಗೆ ತಳ್ಳುತ್ತಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೂಲಿ ಕಾರ್ಮಿಕನ ಬುದ್ಧಿವಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Nov 16, 2024 | 6:20 PM

ಸಾಮಾಜಿಕ ಜಾಲತಾಣದಲ್ಲಿ ರೈಲ್ವೆ ಸ್ಟೇಷನ್, ರೈಲಿನಲ್ಲಿ ನಡೆಯುವ ಕೆಲವು ಚಿತ್ರ ವಿಚಿತ್ರ ಘಟನೆಗಳ ಬಗೆಗಿನ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೆಲವೊಮ್ಮೆ ಪ್ರಯಾಣಿಕರ ನಡುವಿನ ವಾದ ವಿವಾದಗಳು, ಸೀಟಿಗಾಗಿ ನಡೆಯುವ ಜಗಳಗಳು, ರೀಲ್ಸ್ ಹುಚ್ಚಾಟ ಇಂತಹ ಹತ್ತಾರು ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತದೆ. ಕೆಲವೊಮ್ಮೆ ಜನಜಂಗುಳಿಯಿದ್ದಾಗ ಸೀಟು ಸಿಗಲ್ಲ ಎನ್ನುವ ಕಾರಣಕ್ಕೆ ಪ್ರಯಾಣಿಕರು ಕಿಟಕಿ ಮೂಲಕ ರೈಲು, ಬಸ್ಸನ್ನು ಹತ್ತುವುದನ್ನು ನೋಡಬಹುದು. ಆದರೆ ಇಲ್ಲೊಬ್ಬ ಕೂಲಿ ಕಾರ್ಮಿಕನು ಪ್ರಯಾಣಿಕರನ್ನು ಕಿಟಕಿಯ ಮೂಲಕ ರೈಲ್ವೆ ಬೋಗಿಯೊಳಗೆ ತಳ್ಳುತ್ತಿದ್ದು, ದೃಶ್ಯವೂ ನೆಟ್ಟಿಗರ ಗಮನ ಸೆಳೆದಿದೆ.

Hasna Zaroori Hai ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಕೂಲಿ ನಂಬರ್ ಒನ್ ಎಂದು ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು, ರೈಲ್ವೆ ಪ್ರಯಾಣಿಕರನ್ನು ಕಿಟಕಿಯ ಮೂಲಕ ಹತ್ತಿಸುವುದನ್ನು ನೋಡಬಹುದು. ಸ್ವತಃ ತಾನೇ ಪ್ರಯಾಣಿಕರನ್ನು ಮೇಲೆತ್ತಿ ಕಿಟಕಿಯ ಮೂಲಕ ಬೋಗಿಯೊಳಗೆ ತಳ್ಳುತ್ತಿದ್ದಾನೆ. ಅಷ್ಟೇ ಪ್ರಯಾಣಿಕರಿಗೆ ಸಂಬಂಧ ಪಟ್ಟ ಲಗೇಜ್ ಬ್ಯಾಗ್ ಗಳನ್ನು ಕಿಟಕಿಯಿಂದಲೇ ಒಳಗೆ ಹಾಕುತ್ತಿದ್ದಾನೆ.

ಇದನ್ನೂ ಓದಿ: ‘ಬ್ರ್ಯಾಂಡ್ ಬೆಂಗಳೂರು’ ಥೀಮ್ ಗೆ ತದ್ವಿರುದ್ಧ ಬೆಂಗಳೂರ್ ರೋಡ್, ರಸ್ತೆಗುಂಡಿಗಳಿಂದ ವಾಹನಗಳು ಪಲ್ಟಿ, ವಿಡಿಯೋ ವೈರಲ್

ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ, ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಈ ವಿಡಿಯೋಗೆ ನೆಟ್ಟಿಗರು ಕಾಮೆಂಟ್ ಗಳನ್ನು ಮಾಡಿದ್ದು ಬಳಕೆದಾರರೊಬ್ಬರು, ‘ಶಕ್ತಿಶಾಲಿ ಕೂಲಿ ಕಾರ್ಮಿಕ’ ಎಂದಿದ್ದಾರೆ. ಮತ್ತೊಬ್ಬರು, ‘ಈ ವ್ಯಕ್ತಿಗೆ ನ್ಯಾಷನಲ್ ಅವಾರ್ಡ್ ನೀಡಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಸೂಪರ್, ಸ್ಮಾರ್ಟ್ ವರ್ಕ್ ಎಂದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ