AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಯುವಕನ ಕೈ ಹಿಡಿದ ವಾಕಿಂಗ್ ಕಾಫಿ ಶಾಪ್, ವೈರಲ್ ಆಯ್ತು ದೃಶ್ಯ

ಬದುಕುವ ಛಲವಿದ್ದರೆ ಬಡತನ, ಕಷ್ಟ ಲೆಕ್ಕಕ್ಕೆ ಬರಲ್ಲ. ಹೀಗಾಗಿ ಕೆಲವರು ಸಣ್ಣ ಪುಟ್ಟ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಾರೆ. ಆದರೆ ಇಲ್ಲೊಬ್ಬ ಯುವಕ ಬದುಕಿಗಾಗಿ ಒಂದೊಳ್ಳೆ ಉಪಾಯ ಕಂಡುಕೊಂಡಿದ್ದಾನೆ. ರಸ್ತೆಯಲ್ಲಿ ಓಡಾಡಿಕೊಂಡೇ ಕಾಫಿ ತಯಾರಿಸಿ ಮಾರಾಟ ಮಾಡುತ್ತಿರುವ ದೃಶ್ಯ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಯುವಕನ ಕೈ ಹಿಡಿದ ವಾಕಿಂಗ್ ಕಾಫಿ ಶಾಪ್, ವೈರಲ್ ಆಯ್ತು ದೃಶ್ಯ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 26, 2025 | 12:01 PM

Share

ಬದುಕೇ (life) ಹಾಗೆ, ಮೂರು ಹೊತ್ತಿನ ತುತ್ತಿಗಾಗಿ ಒಬ್ಬರದ್ದು ಒಂದೊಂದು ರೀತಿಯ ಹೋರಾಟ. ಕೆಲವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸಿದರೆ, ಇನ್ನು ಕೆಲವರು ಸಣ್ಣ ಪುಟ್ಟ ಅಂಗಡಿ ಇಟ್ಟುಕೊಂಡು ಅದರಲ್ಲಿ ಬರುವ ಹಣವನ್ನು ಜೀವನಕ್ಕಾಗಿ ನೆಚ್ಚಿಕೊಳ್ಳುತ್ತಾರೆ. ಆದರೆ ಈ ಯುವಕ (young boy) ತನ್ನ ಬುದ್ದಿವಂತಿಕೆಯನ್ನು ಬಳಸಿಕೊಂಡಿದ್ದಾನೆ. ಗೂಡಂಗಡಿ ಇಟ್ಟುಕೊಳ್ಳದೇ, ನಡೆದುಕೊಂಡು ಹೋಗಿಯೇ ಕಾಫಿ ತಯಾರಿಸಿ ಗ್ರಾಹಕರಿಗೆ ನೀಡುವ ಮೂಲಕ ತನ್ನ ಅಲ್ಪ ದುಡಿಮೆಯಲ್ಲಿ ಖುಷಿ ಕಾಣುತ್ತಿದ್ದಾನೆ. ಈ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಸರಳವಾದ ಉಪಾಯವನ್ನು ಮೆಚ್ಚಿಕೊಂಡಿದ್ದಾರೆ.

Sourceofkhaddo ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಯುವಕನು ಲೈಫ್ ಜಾಕೆಟ್ ಮಾದರಿಯ ಜಾಕೆಟ್‌ ಧರಿಸಿದ್ದಾನೆ. ಈ ಜಾಕೆಟ್‌ನಲ್ಲಿ ಕಾಫಿ ಮಾಡಲು ಬೇಕಾದ ಕಾಫಿ ಪುಡಿ, ಸಕ್ಕರೆ, ಹಾಲು ಸೇರಿದಂತೆ ಪೇಪರ್ ಗ್ಲಾಸ್‌ನ್ನು ಇಟ್ಟುಕೊಂಡಿರುವುದನ್ನು ನೋಡಬಹುದು. ಓಡಾಡಿಕೊಂಡೇ ಕಾಫಿ ತಯಾರಿಸಿ ಗ್ರಾಹಕರಿಗೆ ನೀಡುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕೋವಿಡ್ ತಂದ ಸಂಕಷ್ಟ; ರ‍್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡ ಉದ್ಯಮಿ

ಈ ವಿಡಿಯೋ 6.4 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಕೆಲಸ ಇಲ್ಲವೆಂದು ಕೂರುವ ಬದಲು, ಈ ಸ್ವಂತ ದುಡಿಮೆ ಬದುಕಿಗೆ ನೆರವಾಗುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಕಾಫಿ ತಯಾರಿಸುವ ರೀತಿ ನೋಡಿದ್ರೆ ಕಾಫಿ ಕುಡಿಯಬೇಕೆನಿಸುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನಿಜಕ್ಕೂ ಒಳ್ಳೆಯ ಐಡಿಯಾ, ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?