ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಬಂದ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ

ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಶಾಸಕ ಈಶ್ವರ್ ಸಿಂಗ್‌ ಗ್ರಾಮಕ್ಕೆ ಭೇಟಿ ನೀಡಿರುವ ವೇಳೆ ಮಹಿಳೆಯೊಬ್ಬರು ಶಾಸಕನಿಗೆ ಕಪಾಳಮೋಕ್ಷ ಮಾಡಿದ್ದು, ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಬಂದ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ
ಶಾಸಕನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ
Image Credit source: Twitter

Updated on: Jul 13, 2023 | 11:45 AM

ಹರಿಯಾಣ: ಕಳೆದ ಕೆಲವು ದಿನಗಳಿಂದ ಉತ್ತರ ಭಾರತದಾದ್ಯಂತ ಭಾರೀ ಮಳೆಯಾಗಿದ್ದು, ಹಠಾತ್​​ ಭೂಕುಸಿತ, ಪ್ರವಾಹಗಳು ಸಂಭವಿಸಿದೆ. ಈ ಹಿನ್ನೆಯಲ್ಲಿ ಹರಿಯಾಣದ ಕೈತಾಲ್​​​ನ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಆ ಕ್ಷೇತ್ರದ ಜೆಜೆಪಿ ಶಾಸಕ ಈಶ್ವರ್ ಸಿಂಗ್‌ ಗ್ರಾಮಕ್ಕೆ ಭೇಟಿ ನೀಡಿರುವ ವೇಳೆ ಮಹಿಳೆಯೊಬ್ಬರು ಶಾಸಕನಿಗೆ ಕಪಾಳಮೋಕ್ಷ ಮಾಡಿದ್ದು, ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಂಜಾಬ್ ಮತ್ತು ಹರಿಯಾಣದ ಹಲವಾರು ಗ್ರಾಮಗಳು ಬಿಟ್ಟು ಬಿಡದೇ ಸುರಿದ ಮಳೆಯಿಂದಾಗಿ ಸಾಕಷ್ಟು ಹಾನಿಗೊಳಗಾಗಿದೆ. ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಹಲವು ಭಾಗಗಳು ಮುಳುಗಡೆಯಾಗಿದೆ. ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಈಗಾಗಲೇ ಕೋಪಗೊಂಡಿದ್ದ ಮಹಿಳೆ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ಶಾಸಕರು ಬರುತ್ತಿದ್ದಂತೆ ಶಾಸಕರನ್ನು ಶಪಿಸುತ್ತಾ ಸಾರ್ವಜನಿಕರ ಮುಂದೆಯೇ ಹೊಡೆದಿದ್ದಾರೆ. “ನೀನು ಈಗ ಯಾಕೆ ಬಂದೆ?” ಎಂದು ಮಹಿಳೆ ಹೇಳುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಧಾರಾಕಾರ ಮಳೆ; ವಿಡಿಯೋ ಕಾಲ್​​ ಮೂಲಕ ನೆರವೇರಿದ ಮದುವೆ

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ ಶಾಸಕ ಈಶ್ವರ್ ಸಿಂಗ್‌ ‘ಮಹಿಳೆ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಮಹಿಳೆ ಸಾಕಷ್ಟು ನೊಂದಿದ್ದರಿಂದ ನನ್ನ ಮೇಲೆ ಕೋಪಗೊಂಡಿದ್ದರು’ ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: