Viral Video: ಕೇದಾರನಾಥ ಶಿವಲಿಂಗದ ಮೇಲೆ ನೋಟುಗಳನ್ನು ತೂರಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲು

Kedarnath : ''ಎಲ್ಲ ತಪ್ಪೂ ಪುರೋಹಿತರದ್ದೇ. ಅವರು ಹಣಕ್ಕಾಗಿ ಹಪಹಪಿಸುತ್ತಾರೆ. ಹಣಕ್ಕಾಗಿಯೇ ಇಂಥದಕ್ಕೆಲ್ಲ ಅನುಮತಿ ನೀಡುತ್ತಾರೆ, ಅವರಿಗೆ ನಾಚಿಕೆಯಾಗಬೇಕು. ಹಾಗೆಯೇ ಈಕೆಯನ್ನೂ ಬಂಧಿಸಬೇಕು'' ನೆಟ್ಟಿಗರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral Video: ಕೇದಾರನಾಥ ಶಿವಲಿಂಗದ ಮೇಲೆ ನೋಟುಗಳನ್ನು ತೂರಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲು
ಕೇದಾರನಾಥದ ಶಿವಲಿಂಗದ ಮೇಲೆ ನೋಟುಗಳನ್ನು ತೂರುತ್ತಿರುವ ಮಹಿಳೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jun 20, 2023 | 12:57 PM

Shivling : ಕೇದಾರನಾಥ (Kedarnath) ದೇಸ್ಥಾನದ ಗರ್ಭಗುಡಿಯಲ್ಲಿರುವ ಶಿವಲಿಂಗದ ಮೇಲೆ ಮಹಿಳೆಯೊಬ್ಬಳು ನೋಟುಗಳನ್ನು ತೂರುತ್ತಿರುವ ದೃಶ್ಯ ಇದೀಗ ವೈರಲ್ ಆಗಿದೆ. ಬಿಳಿ ಸೀರೆ ಉಟ್ಟಿರುವ ಈಕೆ ಶಿವಲಿಂಗದ ಮೇಲೆ  ಆಕ್ಷೇಪಾರ್ಹ ರೀತಿಯಲ್ಲಿ ನೋಟುಗಳನ್ನು ಎಸೆಯುತ್ತಿರುವಾಗ ಉಳಿದವರು ಪ್ರಾರ್ಥನೆಯಲ್ಲಿ ತಲ್ಲೀನರಾಗಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಮಹಿಳೆಯ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿಯು ಸೋನ್​ಪ್ರಯಾಗ ಪೊಲೀಸ್​ ಠಾಣೆಯಲ್ಲಿ ದೂರು ಸಲ್ಲಿಸಿದೆ. ತಕ್ಷಣವೇ ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದೆ.

ದೂರಿನನ್ವಯ ಪೊಲೀಸರು ಐಪಿಸಿ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಘಟನೆಯ ಬಗ್ಗೆ ತನಿಖೆ ಶುರು ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಮಹಿಳೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಉತ್ತರಾಖಂಡ ಪೊಲೀಸರು ಕೂಡ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಈ ಮಹಿಳೆಯು ಧಾರ್ಮಿಕ ಭಾವನೆಗಳನ್ನು ಗಾಸಿಗೊಳಿಸಿದ್ದಕ್ಕಾಗಿ ಆಕೆಯ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : Viral Video: ಈ ಸಾಹಸಕ್ಕೆ ಕಾರಣರಾದ ರೈಲ್ವೇ ಸಚಿವರಿಗೆ ಬಹುಮಾನ ಕೊಡಬೇಕಲ್ಲ, ಯಾರಲ್ಲಿ?

ದೇವಾಲಯದೊಳಗೆ ಛಾಯಾಗ್ರಹಣವನ್ನು ನಿಷೇಧಿಸಲಾಗಿದೆ. ಆದರೂ ಈ ವಿಡಿಯೋ ಅನ್ನು ವ್ಯಕ್ತಿಯೊಬ್ಬರು ರೆಕಾರ್ಡ್ ಮಾಡಿದ್ದಾರೆ. ಎಲ್ಲ ತಪ್ಪೂ ಪುರೋಹಿತರದ್ದೇ. ಅವರು ಹಣಕ್ಕಾಗಿ ಹಪಹಪಿಸುತ್ತಾರೆ. ಹಣಕ್ಕಾಗಿಯೇ ಇಂಥದಕ್ಕೆಲ್ಲ ಅನುಮತಿ ನೀಡುತ್ತಾರೆ, ಅವರಿಗೆ ನಾಚಿಕೆಯಾಗಬೇಕು. ಹಾಗೆಯೇ ಈಕೆಯನ್ನೂ ಬಂಧಿಸಬೇಕು ಎಂದು ಒಬ್ಬರು ಕಿಡಿಕಾರಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:56 pm, Tue, 20 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ