AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಕ್ಟರ್​ ಸಲಹೆ ಇಲ್ಲದೆ ಜ್ವರಕ್ಕೆ ಮೆಡಿಕಲ್​ನಿಂದ ಮಾತ್ರೆ ತಗೊಂಡ ಮಹಿಳೆ; ಸ್ಥಿತಿ ಚಿಂತಾಜನಕ

ವೈದ್ಯರ ಸಲಹೆ ಇಲ್ಲದೇ ಈಕೆ 400 ಮಿಗ್ರಾಂ ಐಬುಪ್ರೊಫೇನ್ ಎರಡು ಮಾತ್ರೆಗಳನ್ನು ತೆಗೆದುಕೊಂಡಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಹಾಗೂ ಆರೋಗ್ಯಕರ ಜೀವಕೋಶಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಇದರಿಂದ ಮುಖ ಸೇರಿದಂತೆ ದೇಹದಲ್ಲಿ ಗುಳ್ಳೆ ಮತ್ತು ಊತ ಕಂಡುಬಂದಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಇದು ಅಪರೂಪದ ಸೋಂಕು.

ಡಾಕ್ಟರ್​ ಸಲಹೆ ಇಲ್ಲದೆ ಜ್ವರಕ್ಕೆ ಮೆಡಿಕಲ್​ನಿಂದ ಮಾತ್ರೆ ತಗೊಂಡ ಮಹಿಳೆ; ಸ್ಥಿತಿ ಚಿಂತಾಜನಕ
ಅಕ್ಷತಾ ವರ್ಕಾಡಿ
|

Updated on: Apr 18, 2024 | 11:32 AM

Share

ಸಾಮಾನ್ಯವಾಗಿ ಜ್ವರ ನೆಗಡಿ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ಹೋಗುವವರಿಗಿಂತ ಮೆಡಿಕಲ್​​ನಿಂದ ಮಾತ್ರೆ ಖರೀದಿಸಿ ಕುಡಿಯುವವರೇ ಹೆಚ್ಚು. ಇದೀಗ ಇರಾಕ್ ನ ಮಹಿಳೆಯೂ ಹೀಗೆಯೇ ಮಾಡಿ ಆಕೆಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ. ಮೆಡಿಕಲ್​ನಿಂದ ಖರೀದಿಸಿದ ಮಾತ್ರೆಯನ್ನು ನುಂಗಿದ ಕೆಲ ಹೊತ್ತಿನಲ್ಲೇ ಮಹಿಳೆಯ ಮುಖ ಊದಿಕೊಳ್ಳಲು ಪ್ರಾರಂಭವಾಗಿದ್ದು, ಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಡೈಲಿ ಮೇಲ್ ವರದಿಯ ಪ್ರಕಾರ, ಮಹಿಳೆ ಜ್ವರಕ್ಕೆ ಮೆಡಿಕಲ್​ನಿಂದ ಐಬುಪ್ರೊಫೇನ್(Ibuprofen) ಮಾತ್ರೆ ತೆಗೆದುಕೊಂಡಿದ್ದಾಳೆ. ಆದರೆ ಸಾಮಾನ್ಯವಾಗಿ ಐಬುಪ್ರೊಫೇನ್ ಮಾತ್ರೆ ನಕರಾತ್ಮಕ ಪರಿಣಾಮ ಬೀರಿವುದಿಲ್ಲ. ಇದು ನೋವು , ಜ್ವರ ಮತ್ತು ಉರಿಯೂತವನ್ನು ನಿವಾರಿಸಲು ಬಳಸಲಾಗುವ ನಾನ್ ಸ್ಟೆರೊಯ್ಡೆಲ್ ಉರಿಯೂತದ ಔಷಧ. ಇದು ಮುಟ್ಟಿನ ನೋವು , ಮೈಗ್ರೇನ್ಗಳು , ಮತ್ತು ಸಂಧಿವಾತಕ್ಕೆ ಸಾಮಾನ್ಯವಾಗಿ ತೆಗೆದುಕೊಳ್ಳುವ ಔಷಧಿ. ಆದರೆ ವೈದ್ಯರ ಸಲಹೆಯಿಲ್ಲದೆ ಅದನ್ನು ತೆಗೆದುಕೊಳ್ಳಬಾರದು ಎಂದು ವೈದ್ಯರು ಎಚ್ಚರಿಸುತ್ತಾರೆ.

ಇದನ್ನೂ ಓದಿ:  ಪೊಲೀಸರನ್ನೇ ಕನ್ಫ್ಯೂಸ್ ಮಾಡುತ್ತಿದೆ ಈ ಹಕ್ಕಿ; ಇಂಟ್ರೆಸ್ಟಿಂಗ್ ವಿಡಿಯೋ  ಇಲ್ಲಿದೆ ನೋಡಿ

ವೈದ್ಯರ ಸಲಹೆ ಇಲ್ಲದೇ ಈಕೆ 400 ಮಿಗ್ರಾಂ ಐಬುಪ್ರೊಫೇನ್ ಎರಡು ಮಾತ್ರೆಗಳನ್ನು ತೆಗೆದುಕೊಂಡಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಹಾಗೂ ಆರೋಗ್ಯಕರ ಜೀವಕೋಶಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಇದರಿಂದ ಮುಖ ಸೇರಿದಂತೆ ದೇಹದಲ್ಲಿ ಗುಳ್ಳೆ ಮತ್ತು ಊತ ಕಂಡುಬಂದಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಟೀವನ್ಸ್-ಜಾನ್ಸನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಇದು ಅಪರೂಪದ ಸೋಂಕು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್