Viral News: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು

ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 2,143 ಜೋಡಿಗಳು ಕೇವಲ 12 ಗಂಟೆಗಳ ಅವಧಿಯಲ್ಲಿ ವಿವಾಹವಾಗುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಹಾಗೂ ಈ ಮೊದಲು 2013ರಲ್ಲಿ 24 ಗಂಟೆಗಳ ಅವಧಿಯಲ್ಲಿ 963 ಜೋಡಿಗಳು ವಿವಾಹವಾದ ದಾಖಲೆಯನ್ನು ಮುರಿದಿದೆ.

Viral News: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು
ವೈರಲ್ ನ್ಯೂಸ್​​
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 12, 2023 | 6:10 PM

ಭಾರತದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತದೆ. ಸರಕಾರದ ವತಿಯಿಂದ ಅಥವಾ ಟ್ರಸ್ಟ್​​ಗಳ ವತಿಯಿಂದ ಹಲವು ಸಾಮೂಹಿಕ ಕಾರ್ಯಕ್ರಮಗಳು ಏರ್ಪಡುತ್ತವೆ. ನೂರಾರು ಸಂಖ್ಯೆಯಲ್ಲಿ ವಧುವರರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಇನ್ನೂ ಆಡಂಬರದ ಮದುವೆ ಕಾರ್ಯಕ್ರಮ ಇಷ್ಟಪಡದವರು ತಮ್ಮ ವಿವಾಹವು ಅತೀ ಸರಳವಾಗಿರಬೇಕೆಂದು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಪ್ತಪದಿ ತುಳಿಯುತ್ತಾರೆ. ಇಲ್ಲೊಂದು ಸಾಮೂಹಿಕ ವಿವಾಹ ಕಾರ್ಯಕ್ರಮವು ವಿಶ್ವದಾಖಲೆಯನ್ನೇ ನಿರ್ಮಿಸಿದೆ. ಮೇ 26ರಂದು ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸುಮಾರು 2,143 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ವಿಶ್ವದಾಖಲೆ ನಿರ್ಮಾಣವಾಗಿದೆ.

ಕೇವಲ 12 ಗಂಟೆಯಲ್ಲಿ 2,143 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ಕಾರ್ಯಕ್ರಮ ಗಿನ್ನೆನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ. ಜೊತೆಗೆ ಈ ಮೊದಲು 2013 ರಲ್ಲಿ ದಾಖಲಾಗಿದ್ದ, 24 ಗಂಟೆಗಳ ಅವಧಿಯಲ್ಲಿ 963 ಜೋಡಿಗಳು ಮದುವೆಯಾದ ದಾಖಲೆಯನ್ನು ಮುರಿದಿದೆ.

ಗಿನ್ನೆಸ್ ವಿಶ್ವ ದಾಖಲೆಯ ಪ್ರಕಾರ, ಈ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶ್ರೀ ಮಹಾವೀರ ಗೋಶಾಲಾ ಕಲ್ಯಾಣ ಸಂಸ್ಥಾನವು ಆಯೋಜಿಸಿದೆ. ಇದು ಹಿಂದುಳಿದ ಸಮುದಾಯಗಳಿಗೆ ಸೇವೆ ಸಲ್ಲಿಸಲು ಮೀಸಲಾಗಿರುವ ನೋಂದಾಯಿತ ಟ್ರಸ್ಟ್ ಆಗಿದೆ. ಸಮಾರಂಭದಲ್ಲಿ ಹಿಂದೂ ಹಾಗೂ ಮುಸ್ಲಿಂ ಧರ್ಮದ ಜೋಡಿಗಳು ವಿವಾಹವಾದರು. ಮದುವೆಯ ವಿಧಿವಿಧಾನಗಳನ್ನು ಪ್ರತಿ ದಂಪತಿಯ ಆಯಾ ಸಮುದಾಯದ ಪುರೋಹಿತರು ಹಾಗೂ ಕ್ವಾಜಿಗಳು ನೆರವೆರಿಸಿದರು.

ಇದನ್ನೂ ಓದಿ:Viral Video: 7 ವರ್ಷಗಳ ಹಿಂದೆ ಟ್ವಿಟರ್​​ನಲ್ಲಿ ಹಂಚಿಕೊಂಡ ಫೋಟೋದಲ್ಲಿದ್ದ ಬಾಲಕಿಯನ್ನು ಭೇಟಿಯಾದ ಆನಂದ್ ಮಹೀಂದ್ರಾ

ವಿವಾಹ ವಿಧಿವಿಧಾನಗಳು ಪೂರ್ಣಗೊಂಡ ನಂತರ ರಾಜಸ್ಥಾನ ಸರ್ಕಾರದ ಅಧಿಕಾರಿಗಳು ದಂಪತಿಗಳಿಗೆ ಮದುವೆ ಪ್ರಮಾಣ ಪತ್ರವನ್ನು ನೀಡಿದರು. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಕ್ಯಾಬಿನೆಟ್ ಸಚಿವ ಪ್ರಮೋದ್ ಜೈನ್ ಭಯಾ ಅವರು ನವದಂಪತಿಗಳಿಗೆ ಆಶೀರ್ವಾದವನ್ನು ಮಾಡಿದರು. ನವ ಜೋಡಿಗಳಿಗೆ ಭರ್ಜರಿ ಉಡುಗೊರೆಗಳನ್ನು ಕೂಡಾ ನೀಡಲಾಯಿತು. ವಧುವಿಗೆ ಆಭರಣ, ದಂಪತಿಗಳಿಗೆ ಹಾಸಿಗೆ, ರೆಫ್ರಿಜರೇಟರ್ ಸೇರಿದಂತೆ ಹಲವು ಗೃಹಪಯೋಗಿ ವಸ್ತುಗಳನ್ನು ಉಡುಗೊರೆಯನ್ನಾಗಿ ನೀಡಲಾಯಿತು. ಈ ದಾಖಲೆಯ ಮದುವೆ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಸೇರಿದ್ದರು. ಇದಲ್ಲದೆ ನವ ದಂಪತಿಗಳಿಗೆ ಹಾಗೂ ಬಂದಂತಹ ಅಥಿತಿಗಳಿಗೆ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಸಾಮೂಹಿಕ ವಿವಾಹ ಕಾರ್ಯಕ್ರಮದ ವೀಡಿಯೋವನ್ನು ಶ್ರೀ ಮಹಾವೀರ ಗೋಶಾಲಾ ಕಲ್ಯಾಣ ಸಂಸ್ಥಾನವು ತನ್ನ ಅಧೀಕೃತ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ