AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೂಗಿನೊಳಗೆ ಬೀಡಿ ಇಟ್ಟು ಬಾಯಲ್ಲಿ ಹೊಗೆ ಬಿಟ್ಟ ಯುವಕ, ವೈರಲ್ ಆಯ್ತು ದೃಶ್ಯ

ಲೈಕ್ಸ್, ವೀವ್ಸ್‌ಗಾಗಿ ಅಪಾಯಕಾರಿ ಸಾಹಸಕ್ಕೆ ಯುವಕ ಯುವತಿಯರು ಕೈ ಹಾಕುತ್ತಾರೆ. ಇದೀಗ ಯುವಕನೊಬ್ಬ ಮೂಗಿನಲ್ಲಿ ಬೀಡಿಗಳನ್ನು ಇಟ್ಟುಕೊಂಡು ಬಾಯಲ್ಲಿ ಹೊಗೆ ಬಿಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ನೆಟ್ಟಿಗರು ಈ ದೃಶ್ಯ ನೋಡಿ ಗರಂ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮೂಗಿನೊಳಗೆ ಬೀಡಿ ಇಟ್ಟು ಬಾಯಲ್ಲಿ ಹೊಗೆ ಬಿಟ್ಟ ಯುವಕ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on:Aug 19, 2026 | 2:34 PM

Share

ಇತ್ತೀಚೆಗಿನ ದಿನಗಳಲ್ಲಿ ರೀಲ್ಸ್‌ ಹುಚ್ಚಿನಿಂದ ಯುವಕ ಯುವತಿಯರು ಪ್ರಾಣಕ್ಕೆ ಕುತ್ತು ತರುವಂತಹ ಸಾಹಸಗಳನ್ನು ಮಾಡುತ್ತಿದ್ದಾರೆ. ಲೈಕ್ಸ್ ಹಾಗೂ ವೀವ್ಸ್ ಗಾಗಿ ಹರಸಾಹಸಗಳನ್ನು ಮಾಡುತ್ತಿದ್ದಾರೆ. ಇದೀಗ ಇಲ್ಲೊಬ್ಬ ಯುವಕನದ್ದು (young man) ಅದೇ ಕಥೆ. ಯುವಕನೊಬ್ಬ ಬೀಡಿಗಳನ್ನು ಮೂಗಿನೊಳಗೆ ಇಟ್ಟು, ಬಾಯಿಂದ ಹೊಗೆ ಬಿಟ್ಟಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಲೈಕ್ಸ್ ವೀವ್ಸ್ ಗಾಗಿ ಇಂತಹ ಅಪಾಯಕಾರಿ ಹುಚ್ಚಾಟ ಮೆರೆಯುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಹಿ ಶುಕ್ಲ (Arohi Shukla) ಹೆಸರಿನ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಯುವಕನೊಬ್ಬ ಉರಿಯುತ್ತಿರುವ ಬೀಡಿಗಳನ್ನು ಮೂಗಿನೊಳಗೆ ಇಟ್ಟು ಬಾಯಲ್ಲಿ ಹೊಗೆ ಬಿಟ್ಟಿದ್ದಾನೆ. ಹೊಗೆಯ ಘಾಟಿಗೆ ಕೆಮ್ಮಲು ಶುರು ಮಾಡಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಜತೆಗೆ ವಾಕಿಂಗ್‌ಗೆ ಬಂದ ಶ್ವಾನವನ್ನು ಮನೆಗೆ ಕರೆದೊಯ್ಯಲು ಹರಸಾಹಸ ಪಟ್ಟ ಯುವಕ

ಆಗಸ್ಟ್ 18 ರಂದು ಹಂಚಿಕೊಳ್ಳಲಾದ ಈ ಕ್ಲಿಪಿಂಗ್ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಸಾಹಸ ಮಾಡಲು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ ಎಂದಿದ್ದಾರೆ. ಇನ್ನೊಬ್ಬರು, ಇಂತಹ ಹುಚ್ಚಾಟಗಳಿಗೆ ಕೈ ಹಾಕುವುದು ಮೂರ್ಖತನ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇಂದಿನ ಯುವಕರಿಗೆ ಬುದ್ಧಿ ಅನ್ನೋದೇ ಇಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಡಿಸ್ಕ್ಲೇಮರ್: ಈ ಸುದ್ದಿಯು ವಿಶ್ವಾಸಾರ್ಹ ಸಾರ್ವಜನಿಕ ಮೂಲಗಳು ಹಾಗೂ ಮೂರನೇ ವ್ಯಕ್ತಿಗಳ ಮಾಹಿತಿಯನ್ನು ಆಧರಿಸಿದೆ. ಇದು ಸಂಪೂರ್ಣವಾಗಿ ಮನರಂಜನಾತ್ಮಕ ಉದ್ದೇಶವನ್ನು ಮಾತ್ರ ಹೊಂದಿದ್ದು, ಸಂಬಂಧಪಟ್ಟವರಿಂದ ಅಧಿಕೃತಗೊಂಡಿರುವುದಿಲ್ಲ. ಯಾವುದೇ ವ್ಯಕ್ತಿಯ ತೇಜೋವಧೆ ಮಾಡುವುದು ಅಥವಾ ತಪ್ಪು ಮಾಹಿತಿ ನೀಡುವುದು ನಮ್ಮ ಉದ್ದೇಶವಲ್ಲ. ಓದುಗರು ಮಾಹಿತಿಯ ಸತ್ಯಾಸತ್ಯತೆಯನ್ನು ಸ್ವತಃ ಖಾತರಿಪಡಿಸಿಕೊಳ್ಳಲು ಕೋರಲಾಗಿದೆ. ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ತೀವ್ರ ಹಾನಿಕರ ಮತ್ತು ಜೀವಕ್ಕೆ ಅಪಾಯಕಾರಿ. ಈ ರೀತಿಯ ಅಪಾಯಕಾರಿ ಸಾಹಸಗಳು ಅಥವಾ ಗಿಮಿಕ್‌ಗಳನ್ನು ಅನುಕರಿಸಲು ಪ್ರಯತ್ನಿಸಬೇಡಿ. ’ಟಿವಿ9 ಕನ್ನಡ’ ಇವುಗಳನ್ನು ಬೆಂಬಲಿಸುವುದಿಲ್ಲ ಅಥವಾ ಪ್ರೋತ್ಸಾಹಿಸುವುದಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Wed, 19 August 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು