AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಶ್ವಾನಕ್ಕೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕ, ವೈರಲ್ ಆಯ್ತು ದೃಶ್ಯ

ಮೂಕ ಪ್ರಾಣಿಗಳ ಹಸಿವು ನೀಗಿಸುವ, ದಾಹ ತೀರಿಸುವ ಕೆಲ ವ್ಯಕ್ತಿಗಳನ್ನು ನೋಡಿದಾಗ ಅವರ ಒಳ್ಳೆತನಕ್ಕೆ ಸಹಜವಾಗಿ ಫಿದಾ ಆಗುತ್ತೇವೆ. ಆದರೆ ಇಲ್ಲೊಬ್ಬ ಯುವಕನು ದಾಹದಿಂದ ಒದ್ದಾಡುತ್ತಿದ್ದ ಶ್ವಾನಕ್ಕೆ ನೀರು ಕೊಟ್ಟು ಬಾಯಾರಿಕೆ ನೀಗಿಸುವ ಕೆಲಸ ಮಾಡಿದ್ದಾನೆ. ಮೂಕ ಪ್ರಾಣಿಗೆ ಸಹಾಯ ಮಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಶ್ವಾನಕ್ಕೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 26, 2026 | 1:24 PM

Share

ಮನುಷ್ಯ ಹಾಗೂ ಪ್ರಾಣಿಗಳ ನಡುವಿನ ನಿಷ್ಕಲ್ಮಶ ಸಂಬಂಧವನ್ನು ವಿವರಿಸಲು ಅಸಾಧ್ಯ. ಅದರಲ್ಲೂ ಈ ಈ ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಯ ಬಗ್ಗೆ ಏನು ಹೇಳಿದ್ರು ಕಡಿಮೆಯೇ. ಇದೀಗ ದಾಹದಿಂದ ಬಳಲಿದ್ದ ಶ್ವಾನಕ್ಕೆ ನೀರು ಕೊಟ್ಟು ಬಾಯಾರಿಕೆ ನೀಗಿಸಿ ಯುವಕನೊಬ್ಬ ಹೃದಯ ಶ್ರೀಮಂತಿಕೆ ಮೆರೆದಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಯುವಕನ ಒಳ್ಳೆತನವನ್ನು ಮೆಚ್ಚಿಕೊಂಡಿದ್ದಾರೆ.

ಚಾಯ್ಯ್ ನಾಷ್ಟ (Chaaii Nasta) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈವಿಡಿಯೋದಲ್ಲಿ ಬಾಯಾರಿದ ಶ್ವಾನವೊಂದು ಯುವಕನ ಮುಂದೆ ಬಂದು ನಿಂತಿದೆ. ಇದನ್ನು ಅರ್ಥಮಾಡಿಕೊಂಡ ಯುವಕನು ಅಗಲವಾದ ಎಲೆಯನ್ನು ತಟ್ಟೆಯಂತೆ ಮಾಡಿ ತನ್ನ ಬಾಟಲಿಯಲ್ಲಿದ್ದ ನೀರನ್ನು ಹಾಕಿ ಶ್ವಾನಕ್ಕೆ ಕುಡಿಯಲು ನೀಡಿದ್ದಾನೆ. ಶ್ವಾನವು ನೀರು ಕುಡಿದು ಬಾಯಾರಿಕೆ ನೀಗಿಸಿಕೊಂಡಿರುವುದನ್ನು ನೀವಿಲ್ಲಿ ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕಾಣೆಯಾದ ಸಾಕು ನಾಯಿ ಹುಡುಕಿಕೊಟ್ಟವರಿಗೆ 10,000 ರೂ ನಗದು ಬಹುಮಾನ ಘೋಷಿಸಿದ ಮಾಲೀಕ

ಈ ವಿಡಿಯೋ ಹದಿನೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನಿನ್ನ ಒಳ್ಳೆಯ ಮನಸ್ಸಿಗೆ ದೇವರು ಒಳ್ಳೆಯದನ್ನೇ ಮಾಡಲಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇನ್ನೊಬ್ಬರ ದಾಹ ಹಾಗೂ ಹಸಿವು ನೀಗಿಸುವ ಕೆಲಸಕ್ಕಿಂತ ದೊಡ್ಡ ಕೆಲಸ ಯಾವುದಿಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ದೃಶ್ಯ ನೋಡಿ ಖುಷಿಯಾಯ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ