Video: ನೀರು ಇಟ್ಟು, ಕಾಳು ಹಾಕಿ ಪಕ್ಷಿಗಳ ಹಸಿವು ನೀಗಿಸಿದ ಯುವಕ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಹೃದಯಕ್ಕೆ ಹತ್ತಿರವಾಗುತ್ತವೆ. ನಿಸ್ವಾರ್ಥ ಮನೋಭಾವದಿಂದ ಮೂಕ ಪ್ರಾಣಿ, ಪಕ್ಷಿಗಳಿಗೆ ಆಹಾರ ನೀಡಿ ಹಸಿವನ್ನು ನೀಗಿಸುವವರನ್ನು ಕಂಡಾಗ ಖುಷಿಯಾಗುತ್ತದೆ. ಇಲ್ಲೊಬ್ಬ ಯುವಕನು ರಸ್ತೆ ಬದಿಯಲ್ಲಿ ನೀರಿಟ್ಟು, ಕಾಳು ಹಾಕಿ ಪಕ್ಷಿಗಳ ಹಸಿವನ್ನು ನೀಗಿಸಲು ಪ್ರಯತ್ನಿಸಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ.

ನಮ್ಮಲ್ಲಿ ಕೆಲವರಿಗೆ ಈ ಪ್ರಾಣಿ (Animal), ಪಕ್ಷಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಅವುಗಳ ಹತ್ತಿರ ಕಾಣಿಸಿದರೆ ಅವುಗಳಿಗೆ ಆಹಾರ ಹಾಕುವುದು, ನೀರು ಕುಡಿಯಲು ಇಡುವುದು ಹೀಗೆ ಅವುಗಳ ಹಸಿವು ನೀಗಿಸುವಂತಹ ಒಳ್ಳೆಯ ಕೆಲಸಗಳನ್ನು ಮಾಡುತ್ತಾರೆ. ಈ ವಿಡಿಯೋ ಯುವಕನ ಹೃದಯ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ. ಯುವಕನೊಬ್ಬನು (young man) ರಸ್ತೆ ಬದಿಯಲ್ಲಿ ನೀರು ಇಟ್ಟು ಹಾಗೂ ಪಕ್ಷಿಗಳಿಗೆ ಕಾಳು ಹಾಕಿ ಅವುಗಳ ಹಸಿವು ನೀಗಿಸಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಯುವಕನ ನಿಸ್ವಾರ್ಥ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಕ್ಷಯ್ ಸಾಗ್ವೆಕರ್ (Akshay sagvekar) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಯುವಕನೊಬ್ಬ ಪಕ್ಷಿಗಳ ಹಸಿವು ನೀಗಿಸುವುದನ್ನು ಕಾಣಬಹುದು. ರಸ್ತೆ ಬದಿಯಲ್ಲಿದ್ದ ನೀರಿನ ತೊಟ್ಟಿಯನ್ನು ಸ್ವಚ್ಛಗೊಳಿಸಿ, ನೀರು ತುಂಬಿಸಿದ್ದಾನೆ. ಆ ಬಳಿಕ ಕಾಳುಗಳನ್ನು ಹಾಕುತ್ತಿದ್ದಂತೆ ಪಾರಿವಾಳಗಳು ಹಾರಿ ಕೊಂಡು ಬಂದು ಕಾಳು ಹೆಕ್ಕಿ ತಿನ್ನುತ್ತಿರುವುದನ್ನು ಕಾಣಬಹುದು.
ವೈರಲ್ ವಿಡಿಯೋ ಇಲ್ಲಿದೆ ನೋಡಿ
View this post on Instagram
ಇದನ್ನೂ ಓದಿ:ಅಜ್ಜಿಯ ಸಣ್ಣ ವ್ಯಾಪಾರಕ್ಕೆ ನೆರವಾಗಿ ಮೊಗದಲ್ಲಿ ನಗು ಮೂಡಿಸಿದ ಯುವಕ
ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ತುಂಬಾ ಒಳ್ಳೆಯ ಕೆಲಸ, ಧನ್ಯವಾದಗಳು ಎಂದಿದ್ದಾರೆ. ಇನ್ನೊಬ್ಬರು, ಈ ದೃಶ್ಯ ನೋಡಲು ಖುಷಿಯಾಗುತ್ತದೆ, ಒಳ್ಳೆಯದಾಗಲಿ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ಅವುಗಳ ಹಸಿವು ನೀಗಿಸುವ ಕೆಲಸ ಮಾಡಿದ್ದಕ್ಕೆ ಧನ್ಯವಾದಗಳು ಎಂದು ಕಾಮೆಂಟ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:44 pm, Tue, 9 December 25




