Viral Video: ಬೈಕ್​​ನಲ್ಲಿ ಬಂದು ಯುವತಿಯ ಹಿಂಭಾಗ ಮುಟ್ಟಿದ ಮುಸ್ಲಿಂ ಯುವಕನಿಗೆ ಯುಪಿ ಪೊಲೀಸರು ಮಾಡಿದ್ದೇನು ನೋಡಿ?

ಸೋಶಿಯಲ್ ಮೀಡಿಯಾದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಲ್ಮಾನ್ ಎನ್ನುವ ಯುವಕನು ಯುವತಿಗೆ ಕಿರುಕುಳ ನೀಡಿದ ವಿಡಿಯೋವೊಂದು ವೈರಲ್ ಆಗಿದೆ. ಹೌದು, ಮುಜಾಫರ್‌ನಗರದಲ್ಲಿ ಸಾರ್ವಜನಿಕವಾಗಿ ಸಲ್ಮಾನ್ ಎನ್ನುವವನು ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಗರಂ ಆಗಿದ್ದಾರೆ.

Viral Video: ಬೈಕ್​​ನಲ್ಲಿ ಬಂದು ಯುವತಿಯ ಹಿಂಭಾಗ ಮುಟ್ಟಿದ ಮುಸ್ಲಿಂ ಯುವಕನಿಗೆ ಯುಪಿ ಪೊಲೀಸರು ಮಾಡಿದ್ದೇನು ನೋಡಿ?
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 08, 2024 | 5:44 PM

ಇತ್ತೀಚಿನ ದಿನಗಳಲ್ಲಿ ಕೊಲೆ, ಅತ್ಯಾಚಾರ , ಲೈಂಗಿಕ ಕಿರುಕುಳಗಳಂತಹ ಪ್ರಕರಣಗಳ ಹೆಚ್ಚಿಗೆ ಬೆಳಕಿಗೆ ಬರುತ್ತಿದೆ. ಸರ್ಕಾರವು ಈ ಪ್ರಕರಣಗಳನ್ನು ನಡೆಯದಂತೆ ಎಷ್ಟೇ ಕಡಿವಾಣ ಹಾಕಿದರೂ ಪುಂಡ ಪೋಕರಿಗಳಿಗೆ ಸ್ವಲ್ಪವು ಭಯವಿಲ್ಲದಂತೆ ವರ್ತಿಸುತ್ತಿದ್ದಾರೆ. ಸಿಕ್ಕ ಸಿಕ್ಕೆಂದರಲ್ಲಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇಂತಹದೊಂದು ಘಟನೆಯೂ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರು ಗರಂ ಆಗಿದ್ದಾರೆ.

ಸಲ್ಮಾನ್ ಎನ್ನುವ ಯುವಕನೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬಹಿರಂಗವಾಗಿ ಕಿರುಕುಳ ನೀಡುತ್ತಿರುವುದು ಹಾಗೂ ಕೊನೆಗೆ ಆರೋಪಿಯನ್ನು ಬಂಧಿಸಿ ಪೊಲೀಸರು ಕರೆತರುತ್ತಿರುವ ವಿಡಿಯೋ ಇದಾಗಿದೆ. ಸುನಂದಾ ರಾಯ್ ಎನ್ನುವ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಹಿಂಭಾಗವನ್ನು ಮುಟ್ಟಿ ಕಿರುಕುಳ ನೀಡಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದೇ ವೇಳೆ ಸಂತ್ರಸ್ತ ಬಾಲಕಿ ತನ್ನ ಮನೆಯವರಿಗೆ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಆ ಬಳಿಕ ಮನೆಯವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಪೊಲೀಸರು ಎನ್‌ಕೌಂಟರ್‌ನಲ್ಲಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸಿಗ್ನಲ್ ಜಂಪ್​; 4 ಪಲ್ಟಿ ಹೊಡೆದ ಕಾರು, ಭೀಕರ ಅಪಘಾತದ ವಿಡಿಯೋ ವೈರಲ್

ಮೊದಲನೇ ವಿಡಿಯೋದಲ್ಲಿ ಯುವಕನು ಬಾಲಕಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಹಾಗೂ ಎರಡನೇ ವಿಡಿಯೋದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದ ಕಾರಣ ಆರೋಪಿಗೆ ನಡೆಯಲು ಸಾಧ್ಯವಾಗದೇ ಇರುವುದನ್ನು ನೋಡಬಹುದು. ಈ ವಿಡಿಯೋಗೆ ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ನೆಟ್ಟಿಗರು ಈ ವ್ಯಕ್ತಿಯ ವಿರುದ್ಧ ಗರಂ ಆಗಿದ್ದು, ತರಾಟೆಗೆ ತೆಗೆದುಕೊಳ್ಳುವ ಮೂಲಕ ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Sat, 8 June 24