Video: ಸೆಕ್ಯೂರಿಟಿ ಗಾರ್ಡ್‌ನ್ನು ಕಂಡೊಡನೆ ಕೈ ಜೋಡಿಸಿ ನಮಸ್ಕರಿಸಿದ ಯುವತಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ದೃಶ್ಯಗಳು ಬಹುಬೇಗನೆ ಮನಸ್ಸಿಗೆ ಹತ್ತಿರವಾಗುತ್ತವೆ. ಇದೀಗ ಯುವತಿಯೊಬ್ಬಳ ಒಳ್ಳೆಯ ನಡೆ ನೆಟ್ಟಿಗರ ಗಮನ ಸೆಳೆದಿದೆ. ದಾರಿಯಲ್ಲಿ ಹೋಗುತ್ತಿದ್ದ ವೇಳೆ ಕಂಡ ಸೆಕ್ಯೂರಿಟಿ ಗಾರ್ಡ್‌ಗೆ ಕೈ ಜೋಡಿಸಿ ನಮಸ್ಕರಿಸಿದ್ದಾಳೆ. ಈ ಕ್ಯೂಟ್ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಸೆಕ್ಯೂರಿಟಿ ಗಾರ್ಡ್‌ನ್ನು ಕಂಡೊಡನೆ ಕೈ ಜೋಡಿಸಿ ನಮಸ್ಕರಿಸಿದ ಯುವತಿ
ವೈರಲ್‌ ವಿಡಿಯೋ
Image Credit source: Instagram

Updated on: Nov 04, 2026 | 2:15 PM

ಕೆಲಸ (job) ಯಾವುದಾದರೇನು, ಆದರೆ ಪ್ರಾಮಾಣಿಕತೆ ಬಹಳ ಮುಖ್ಯ. ನಿಷ್ಠೆಯಿಂದ ಕೆಲಸ ಮಾಡುವವರನ್ನು ಗೌರವಿಸುವುದು ಬಹಳ ಮುಖ್ಯ. ಇದಕ್ಕೆ ಸಾಕ್ಷಿಯಂತಿದೆ ಈ ದೃಶ್ಯ. ಯುನಿಫಾರ್ಮ್ ಧರಿಸಿದ್ದ ಭದ್ರತಾ ಸಿಬ್ಬಂದಿಯೊಬ್ಬರನ್ನು ಕಂಡೊಡನೆ ಕೈ ಜೋಡಿಸಿ ನಮಸ್ಕರಿಸಿ, ಗೌರವ ಸೂಚಿಸಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಯುವತಿ ಒಳ್ಳೆತನವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಸೆಕ್ಯೂರಿಟಿ ಗಾರ್ಡ್‌ನ್ನು ಕಂಡೊಡನೆ ನಮಸ್ಕರಿಸಿದ ಯುವತಿ

ಗೋಲ್ಡನ್ ಬಾಯ್ (Golden Boy) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಯುವತಿಯೊಬ್ಬಳು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಭದ್ರತಾ ಸಿಬ್ಬಂದಿಯನ್ನು ನೋಡಿದ್ದಾಳೆ. ಕೊನೆಗೆ ತನ್ನ ಕೈ ಜೋಡಿಸಿ ನಮಸ್ಕರಿಸಿ ಗೌರವ ಸಲ್ಲಿಸಿದ್ದಾಳೆ. ಯುವತಿ ನಮಸ್ಕರಿಸುತ್ತಿದ್ದಂತೆ ಸೆಕ್ಯೂರಿಟಿ ಗಾರ್ಡ್ ಕೂಡ ವಿನ್ರಮತೆಯಿಂದ ನಮಸ್ಕಾರ ಮಾಡಿ ನಗು ಬೀರಿದ್ದಾರೆ.

Loading...

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸಂದರ್ಶನದಲ್ಲಿ ಪ್ರಾಮಾಣಿಕ ಉತ್ತರ ನೀಡಿ ಸಂದರ್ಶಕನ ಮನಸ್ಸು ಗೆದ್ದ ಯುವಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತನ್ನನ್ನು ತನ್ನ ಕೆಲಸವನ್ನು ಗೌರವಿಸುವ ವ್ಯಕ್ತಿಯೇ ಪರರ ಎಲ್ಲಾ ಕೆಲಸಗಳನ್ನು ಗೌರವಿಸಲು ಸಾಧ್ಯ ಎಂದಿದ್ದಾರೆ. ಇನ್ನೊಬ್ಬರು, ಎಲ್ಲರನ್ನು ಗೌರವಿಸೋಣ ಎಂದು ಹೇಳಿದ್ದಾರೆ. ಮತ್ತೊಬ್ಬರು, ಒಳ್ಳೆಯ ಸಂಸ್ಕಾರ ಎಂದು ಕಾಮೆಂಟ್ ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Loading...
Unable to load recommendations.
Follow Us