ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ
ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ನಡೆಯಲಿರುವ ಕರಾಚಿ ಕಿಂಗ್ಸ್ ಮತ್ತು ಮುಲ್ತಾನ್ ಸುಲ್ತಾನ್ ನಡುವಿನ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಆರಂಭಿಕ ಪಂದ್ಯಕ್ಕೂ ಮುನ್ನ ಅನಿರೀಕ್ಷಿತ ಬೆಂಕಿ ಕಾಣಿಸಿಕೊಂಡಿದ್ದು, ಕೆಲಹೊತ್ತು ಭಯಾನಕ ವಾತಾವರಣ ನಿರ್ಮಾಣವಾಗಿತ್ತು.
ಕರಾಚಿ: ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ನಡೆಯಲಿರುವ ಕರಾಚಿ ಕಿಂಗ್ಸ್ ಮತ್ತು ಮುಲ್ತಾನ್ ಸುಲ್ತಾನ್ ನಡುವಿನ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಆರಂಭಿಕ ಪಂದ್ಯಕ್ಕೂ ಮುನ್ನ ಅನಿರೀಕ್ಷಿತ ಬೆಂಕಿ ಕಾಣಿಸಿಕೊಂಡಿದ್ದು, ಕೆಲಹೊತ್ತು ಭಯಾನಕ ವಾತಾವರಣ ನಿರ್ಮಾಣವಾಗಿತ್ತು. ಮಂಗಳವಾರ ರಾತ್ರಿ ಪಿಎಸ್‌ಎಲ್ ಉದ್ಘಾಟನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ವೆಬ್ಸೈಟ್ವೊಂದರ ವರದಿಯ ಪ್ರಕಾರ, ಮೇಕ್-ಶಿಫ್ಟ್ ಕಾಮೆಂಟರಿ ಬಾಕ್ಸ್‌ನೊಳಗೆ ಬೆಂಕಿ ಕಾಣಿಸಿಕೊಳ್ಳುವುದರ ಜೊತೆಗೆ ಕೆಲಸದ ಸಮಯದಲ್ಲಿ ವಿದ್ಯುತ್ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ ಎಂದು ಹೇಳಲಾಗುತ್ತಿದೆ.
Fire erupted in National Stadium last night. Situation under control now#PSL7 #LevelHai pic.twitter.com/qSJmTdne1j
— muzamilasif (@muzamilasif4) January 26, 2022
ಇನ್ನೂ ಅನಿರೀಕ್ಷಿತವಾಗಿ ಕಾಣಿಸಿಕೊಂಡ ಬೆಂಕಿವನ್ನು ಅಗ್ನಿಶಾಮಕ ದಳದವರಳು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಗತ್ಯ ಸಿಬ್ಬಂದಿಯನ್ನು ಕ್ರೀಡಾಂಗಣದಲ್ಲಿ ನಿಯೋಜಿಸಲಾಗಿದೆ ಎಂದು ಘಟನೆಯ ನಂತರ ಪಿಸಿಬಿ ವಕ್ತಾರರು ದೃಢಪಡಿಸಿದ್ದಾರೆ. ಕರಾಚಿ ಸ್ಟೇಡಿಯಂನ ಮೂರನೇ ಮಹಡಿಯಲ್ಲಿ ಸಾಮಾನ್ಯವಾಗಿ ಇರುವ ಕಾಮೆಂಟರಿ ಬಾಕ್ಸ್ನ್ನು ನೆಲಮಹಡಿಗೆ ಸ್ಥಳಾಂತ್ತರಿಸಲಾಗಿದೆ ಎಂದು ತಿಳಿದು ಬಂದಿದೆ.
ಪಾಕಿಸ್ತಾನ ಸೂಪರ್ ಲೀಗ್‌ನ 5 ನೇ ಆವೃತ್ತಿಯ ಚಾಂಪಿಯನ್ ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ಗಳಾದ, ಮುಲ್ತಾನ್ ಸುಲ್ತಾನ್ ತಂಡ ಬಾಬರ್ ಅಜಮ್‌ನ ಕರಾಚಿ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ.
ಇದನ್ನೂ ಓದಿ;
ಗುಜರಿ ವಸ್ತುಗಳಿಂದ ತಯಾರಾದ ವಾಹನ ಖರೀದಿಸಿ ಹೊಸ ಬೊಲೆರೋ ಉಡುಗೊರೆಯಾಗಿ ನೀಡಿದ ಆನಂದ್ ಮಹೀಂದ್ರಾ
ಮಿನ್ನಲ್ ಮುರಳಿ ಚಿತ್ರದ ಹೀರೋನಂತೆ ರೆಡಿಯಾಗಿ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ ವರ